ಗಿರಿಜಾ ಲೋಕೇಶ್, ಡಾ.ಎನ್.ಗಾಯತ್ರಿ ಅವರಿಗೆ ʼರಾಜಲಕ್ಷ್ಮಿ ಬರುಗೂರು ಪ್ರಶಸ್ತಿʼ

ಸಾಂದರ್ಭಿಕ ಚಿತ್ರ
ಬೆಂಗಳೂರು : ಹಿರಿಯ ಕಲಾವಿದೆ ಗಿರಿಜಾ ಲೋಕೇಶ್ ಹಾಗೂ ಲೇಖಕಿ ಡಾ.ಎನ್.ಗಾಯತ್ರಿ ಅವರು ನಾಡೋಜ ಡಾ.ಬರಗೂರು ಪ್ರತಿಷ್ಠಾನದ ವತಿಯಿಂದ ನೀಡಲಾಗುವ 2024ನೇ ಸಾಲಿನ ರಾಜಲಕ್ಷ್ಮೀ ಬರಗೂರು ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಪ್ರಶಸ್ತಿ ಪುರಸ್ಕೃತರಿಗೆ 10ಸಾವಿರ ರೂ. ನಗದು ಹಾಗೂ ಪ್ರಶಸ್ತಿ ಫಲಕ, ಫಲಪುಷ್ಪ ನೀಡಿಗೌರವಿಸಲಾಗುವುದು. ಪ್ರಶಸ್ತಿ ಪ್ರದಾನ ಸಮಾರಂಭವು ಮಾ.12ರಂದು ಸಂಜೆ 5ಕ್ಕೆ ನಗರದ ಸರಕಾರಿ ಕಲಾ ಕಾಲೇಜಿನ ಬಾಪೂಜಿ ಸಭಾಂಗಣದಲ್ಲಿ ನಡೆಯಲಿದೆ.
ಕಾರ್ಯಕ್ರಮದಲ್ಲಿ ವಿಶ್ರಾಂತ ಕುಲಪತಿ ಡಾ.ಸಬಿಹಾ ಭೂಮಿಗೌಡ, ಸಿನೆಮಾ ಕಲಾವಿದ ಸುಂದರ್ರಾಜ್ ಅವರು ಭಾಗವಹಿಸಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.
Next Story





