Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಗ್ಯಾರಂಟಿಗಳಿಗೆ ದಲಿತರ ಹಣ ಬಳಕೆ ಆರೋಪ:...

ಗ್ಯಾರಂಟಿಗಳಿಗೆ ದಲಿತರ ಹಣ ಬಳಕೆ ಆರೋಪ: ಪರಿಷತ್‍ನಲ್ಲಿ ಗದ್ದಲ

ವಾರ್ತಾಭಾರತಿವಾರ್ತಾಭಾರತಿ14 March 2025 7:19 PM IST
share
ಗ್ಯಾರಂಟಿಗಳಿಗೆ ದಲಿತರ ಹಣ ಬಳಕೆ ಆರೋಪ: ಪರಿಷತ್‍ನಲ್ಲಿ ಗದ್ದಲ

ಬೆಂಗಳೂರು : ಎಸ್‍ಸಿಎಸ್‍ಪಿ ಹಾಗೂ ಟಿಎಸ್‍ಪಿ ಯೋಜನೆಗಳಿಗೆ ಮೀಸಲಿಟ್ಟಿದ್ದ ಹಣ ಗ್ಯಾರಂಟಿ ಯೋಜನೆಗಳಿಗೆ ಬಳಕೆಯಾಗುತ್ತಿದೆ ಎಂಬ ಆರೋಪಕ್ಕೆ ವಿಧಾನಪರಿಷತ್ತಿನಲ್ಲಿ ಉಭಯ ಪಕ್ಷಗಳಿಂದ ಮಾತಿನ ಚಕಮಕಿ ಜೋರಾಗಿ ಕೆಲಕಾಲ ಗದ್ದಲ ಉಂಟಾಯಿತು.

ಎಸ್‍ಸಿಎಸ್‍ಪಿ ಹಾಗೂ ಟಿಎಸ್‍ಪಿ ಯೋಜನೆಗಳಿಗೆ ಮೀಸಲಿಟ್ಟಿದ್ದ ಹಣವನ್ನು ಗ್ಯಾರಂಟಿಗಳಿಗೆ ಬಳಸಲಾಗಿದೆ. ಈ ಮೂಲಕ ದಲಿತರ ಕಲ್ಯಾಣ ಕಾರ್ಯಕ್ರಮಗಳಿಗೆ ಆಡ್ಡಿಯಾಗಿದೆ ಈ ಬಗ್ಗೆ ಸರಕಾರ ಕೈಗೊಂಡ ಕ್ರಮಗಳ ಬಗ್ಗೆ ಪ್ರತಿಪಕ್ಷ ಸದಸ್ಯರಾದ ಹೇಮಲತಾ ನಾಯಕ್ ಹಾಗೂ ಶರವಣ ಪ್ರಶ್ನಿಸಿದರು.

ಇದಕ್ಕೆ ಉತ್ತರಿಸಿದ ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ.ಮಹದೇವಪ್ಪ, ಗ್ಯಾರಂಟಿ ಯೋಜನೆಗಳಿಗೆ ದಲಿತರ ಹಣವನ್ನು ಬಳಸಿಲ್ಲ. ಎಸ್‍ಸಿ/ಎಸ್‍ಟಿ ಸಮುದಾಯಕ್ಕೆ ಮೀಸಲಿಟ್ಟ ಹಣವನ್ನು ಬೇರೆ ಉದ್ದೇಶಗಳಿಗೆ ಬಳಸಲು ಆಗುವುದಿಲ್ಲ. ಮೀಸಲಿಟ್ಟ ಹಣವನ್ನು ಆ ಸಮುದಾಯದ ಜನರಿಗೆ ಮಾತ್ರ ಬಳಸಲಾಗಿದೆ ಎಂದು ಸ್ಪಷ್ಟನೆ ನೀಡಿದರು.

ಇದಕ್ಕೆ ಆಕ್ಷೇಪಿಸಿದ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ದಲಿತರಿಗೆ ಈ ಸರಕಾರದಿಂದ ಆಗಿರುವಷ್ಟು ಅನ್ಯಾಯ ಬೇರೆ ಎಲ್ಲಿಯೂ ಆಗಿಲ್ಲ. ನಮಗೆ ಮೋಸ ಮಾಡಲು ನಮ್ಮ ಜನಾಂಗದ ವ್ಯಕ್ತಿಯನ್ನೇ ಇಡಲಾಗಿದೆ. ಇದು ನಮಗೆ ಮಾಡುತ್ತಿರುವ ವಂಚನೆ. ನಮ್ಮ ಹಣವನ್ನು ನಮಗೆ ವಾಪಸ್ ಕೊಡಿಸಿ ಗ್ಯಾರಂಟಿಗಳಿಗೆ ನಮ್ಮ ಹಣವನ್ನೇ ಬಳಸಿಕೊಳ್ಳಲಾಗುತ್ತಿದೆ. ದಲಿತರ ಹಣ ಗ್ಯಾರಂಟಿಗೆ ಕೊಡುವುದು ನಿಲ್ಲಿಸಬೇಕು. ನಿಲ್ಲಿಸುವವರೆಗೂ ನಮ್ಮ ಹೋರಾಟ ನಿರಂತರವಾಗಿರಲಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇದೇ ವೇಳೆ ಸರಕಾರದ ವಿರುದ್ಧ ಪ್ರತಿಪಕ್ಷದ ಸದಸ್ಯರು ಧಿಕ್ಕಾರ ಕೂಗಿದರು. ಆಡಳಿತ ಮತ್ತು ಪ್ರತಿಪಕ್ಷಗಳ ವಾಕ್ಸಮರ ಹೆಚ್ಚಾಗಿದ್ದರಿಂದ ಸಭಾಪತಿಗಳು 10 ನಿಮಿಷಗಳ ಕಾಲ ಸದನ ಮುಂದೂಡಿದರು.

ಬಳಿಕ ಕಲಾಪ ಆರಂಭವಾಗುತ್ತಿದ್ದಂತೆ ಮತ್ತೆ ಸಚಿವ ಎಚ್.ಸಿ.ಮಹದೇವಪ್ಪ ಮಾತನಾಡಿ, ಎಸ್‍ಸಿ-ಎಸ್‍ಟಿ ವರ್ಗದವರು ದೇಶದ ಮೂಲನಿವಾಸಿಗಳು. ಕೇಂದ್ರ ಸರಕಾರವು ಈ ಸಮುದಾಯಕ್ಕೆ ಹೆಚ್ಚು ಹಣ ಮೀಸಲಿಟ್ಟಿಲ್ಲ. ಆದರೆ ರಾಜ್ಯ ಸರಕಾರ ಹೆಚ್ಚು ಅನುದಾನ ಮೀಸಲಿರಿಸಿದೆ. ಎಸ್‍ಸಿಎಸ್‍ಪಿ/ಟಿಎಸ್‍ಪಿ ಕಾಯ್ದೆಯ ಸೆಕ್ಷನ್ 7ಸಿ ಅಡಿ ಶಿಕ್ಷಣ, ಆರೋಗ್ಯ, ಕಾರ್ಮಿಕ, ವಿಕಲಚೇತನ ಅಭಿವೃದ್ದಿ ಕಾರ್ಯಕ್ರಮಗಳಿಗೆ ಅನುಸೂಚಿತ ಜಾತಿಗಳ ಜನರು ಫಲಾನುಭವಿಗಳಾಗಿರುವುದರಿಂದ ಎಸ್‍ಸಿಎಸ್‍ಪಿ ಟಿಎಸ್‍ಪಿ ಅನುದಾನವನ್ನು ವಿನಿಯೋಗಿಸಲು ಹಂಚಿಕೆ ಮಾಡಲಾಗಿದೆ. ಹೀಗಾಗಿ ಗ್ಯಾರಂಟಿ ಯೋಜನೆಗಳಿಗಾಗಿ ಎಸ್‍ಸಿ ಟಿಎಸ್‍ಪಿಗಳ ಮೀಸಲಿಟ್ಟಿದ್ದ ಹಣ ದುರ್ಬಳಕೆ ಮಾಡಿಕೊಂಡಿಲ್ಲ ಎಂದು ಸ್ಪಷ್ಟನೆ ನೀಡಿದರು.

ಬಳಿಕ ಸಚಿವ ಪ್ರಿಯಾಂಕ ಖರ್ಗೆ ಮಾತನಾಡಿ, ಎಸ್‍ಸಿಎಸ್‍ಪಿ ಹಾಗೂ ಟಿಎಸ್‍ಪಿ ಕಾಯ್ದೆಯಲ್ಲಿದ್ದ ಲೋಪಗಳನ್ನು ಕಾಂಗ್ರೆಸ್ ಸರಕಾರ ಕೈ ಬಿಟ್ಟಿದೆ. ದಲಿತರ ಅಭ್ಯುದಯಕ್ಕಾಗಿ ನಮ್ಮ ಸರಕಾರ ಹೆಚ್ಚಿನ ಅನುದಾನ ಕಲ್ಪಿಸಿದೆ ಎಂದರು.

ಸಚಿವರ ಉತ್ತರಕ್ಕೆ ಆಕ್ಷೇಪಿಸಿದ ಪ್ರತಿಪಕ್ಷ ಸದಸ್ಯರು ಸರಕಾರಕ್ಕೆ ಧಿಕ್ಕಾರ ಕೂಗಿ ಸದನದ ಬಾವಿಗಿಳಿದು ಪ್ರತಿಭಟಿಸಲು ಮುಂದಾದರು. ಆಗ ಸದನವನ್ನು ಮತ್ತೆ ಮುಂದೂಡಲಾಯಿತು.


share
ವಾರ್ತಾಭಾರತಿ
ವಾರ್ತಾಭಾರತಿ
Next Story
X