ಸುಪ್ರೀಂ ವಿಭಾಗೀಯ ಪೀಠ ಹುಬ್ಬಳಿಯಲ್ಲಿ ಸ್ಥಾಪಿಸಿ: ಕೋನರೆಡ್ಡಿ

ಬೆಂಗಳೂರು, : ಸುಪ್ರೀಂಕೋರ್ಟ್ ವಿಭಾಗೀಯ ಪೀಠವನ್ನು ಹುಬ್ಬಳ್ಳಿ-ಧಾರವಾಡ ಭಾಗದಲ್ಲಿ ಸ್ಥಾಪಿಸಬೇಕೆಂದು ಕಾಂಗ್ರೆಸ್ ಶಾಸಕ ಎನ್.ಎಚ್.ಕೋನರೆಡ್ಡಿ ಆಗ್ರಹಿಸಿದ್ದಾರೆ.
ಗುರುವಾರ ವಿಧಾನಸಭೆಯಲ್ಲಿಂದು ಬಜೆಟ್ ಮೇಲಿನ ಚರ್ಚೆಯಲ್ಲಿ ಭಾಗವಹಿಸಿದ್ದ ಅವರು, ಕಾನೂನು ತಗಾದೆಗಳಿಗೆ ಸಂಬಂಧಪಟ್ಟಂತೆ ಸುಪ್ರೀಂಕೋರ್ಟ್ ವರೆಗೂ ಹೋರಾಟ ನಡೆಸಬೇಕಾದ ಸಂದರ್ಭ ಬಂದಾಗ ಜನಸಾಮಾನ್ಯರಿಗೆ ತೊಂದರೆಯಾಗುತ್ತಿದೆ. ಸುಪ್ರೀಂಕೋರ್ಟ್ ವಿಭಾಗೀಯ ಪೀಠವನ್ನು ಉತ್ತರ ಕರ್ನಾಟಕ ಭಾಗದಲ್ಲಿ ಸ್ಥಾಪಿಸಬೇಕು ಎಂದು ಒತ್ತಾಯಿಸಿದರು. ಇದಕ್ಕೆ ಆಗ ಕೆಲ ಶಾಸಕರು ಬೆಂಗಳೂರಿನಲ್ಲಿ ವಿಭಾಗೀಯ ಪೀಠವನ್ನು ಸ್ಥಾಪಿಸಬೇಕು ಎಂದು ಒತ್ತಾಯಿಸಿದರು.
Next Story





