ಹಾಸನ | ಎಸೆಸೆಲ್ಸಿ ಪರೀಕ್ಷೆಯಲ್ಲಿ ಅನುತ್ತೀರ್ಣ; ವಿದ್ಯಾರ್ಥಿ ಆತ್ಮಹತ್ಯೆ

ಹಾಸನ: ಎಸೆಸೆಲ್ಸಿ ಪರೀಕ್ಷೆಯಲ್ಲಿ ಅನುತ್ತೀರ್ಣಗೊಂಡಿದ್ದಕ್ಕೆ ಅರಕಲಗೂಡು ತಾಲೂಕಿನ ಹಳ್ಳಿ ಮೈಸೂರು ಗ್ರಾಮದ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿ ಬೆಂಗಳೂರಿನ ಇಲೆಕ್ಟ್ರಾನಿಕ್ ಸಿಟಿಯಲ್ಲಿರುವ ತನ್ನ ಅಜ್ಜಿಯ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ.
ಮೃತ ವಿದ್ಯಾರ್ಥಿಯನ್ನು ಆಂಧ್ರಪ್ರದೇಶ ಮೂಲದ ಗುತ್ತಿಗೆದಾರ ವೆಂಕಟರಮಣರೆಡ್ಡಿಯವರ ಪುತ್ರ ಪಲಕೊಡು ಶ್ರೀಧರ್ ರೆಡ್ಡಿ (15)ಎಂದು ಗುರುತಿಸಲಾಗಿದೆ. ಗುತ್ತಿಗೆದಾರ ವೆಂಕಟರಮಣರೆಡ್ಡಿಯವರ ಕುಟುಂಬ ಕೆಲಸದ ನಿಮಿತ್ತ ಹಳ್ಳಿಮೈಸೂರಿನಲ್ಲಿ ವಾಸವಾಗಿದ್ದರು ಎನ್ನಲಾಗಿದೆ. ಬೇಸಿಗೆ ರಜೆಯ ಹಿನ್ನೆಲೆಯಲ್ಲಿ ಶ್ರೀಧರ್ ತನ್ನ ಅಜ್ಜಿಯ ಮನೆಗೆ ತೆರಳಿದ್ದರು. ಶುಕ್ರವಾರ ಪ್ರಕಟಗೊಂಡ ಎಸೆಸೆಲ್ಸಿ ಫಲಿತಾಂಶದಲ್ಲಿ ಅನುತ್ತೀರ್ಣಗೊಂಡಿದ್ದರಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.
Next Story





