Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಒಳಮೀಸಲಾತಿ ಸಮೀಕ್ಷೆಯಲ್ಲಿ ಮೂಲ...

ಒಳಮೀಸಲಾತಿ ಸಮೀಕ್ಷೆಯಲ್ಲಿ ಮೂಲ ಜಾತಿಯನ್ನು ನಮೂದಿಸಿ : ಸಿದ್ದಯ್ಯ

ವಾರ್ತಾಭಾರತಿವಾರ್ತಾಭಾರತಿ8 May 2025 10:34 PM IST
share
ಒಳಮೀಸಲಾತಿ ಸಮೀಕ್ಷೆಯಲ್ಲಿ ಮೂಲ ಜಾತಿಯನ್ನು ನಮೂದಿಸಿ : ಸಿದ್ದಯ್ಯ

ಬೆಂಗಳೂರು : ‘ಪರಿಶಿಷ್ಟ ಜಾತಿಗಳ ಒಳಮೀಸಲಾತಿ ವರ್ಗೀಕರಣಕ್ಕೆ ಸಂಬಂಧಿಸಿದ ಸಮೀಕ್ಷೆ ವೇಳೆ ಸಮುದಾಯದವರು ತಮ್ಮ ಮೂಲ ಜಾತಿಯನ್ನು ತಪ್ಪದೆ ನಮೂದಿಸಬೇಕು’ ಎಂದು ಕರ್ನಾಟಕ ರಾಜ್ಯ ಛಲವಾದಿ ಮಹಾಸಭಾದ ಅಧ್ಯಕ್ಷ, ನಿವೃತ್ತ ಐಎಎಸ್ ಅಧಿಕಾರಿ ಸಿದ್ದಯ್ಯ ತಿಳಿಸಿದ್ದಾರೆ.

ಗುರುವಾರ ನಗರದ ಪ್ರೆಸ್‍ಕ್ಲಬ್‍ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಐತಿಹಾಸಿಕವಾಗಿ ಆದಿ ಕರ್ನಾಟಕ, ಆದಿ ದ್ರಾವಿಡ, ಮತ್ತು ಆದಿ ಆಂಧ್ರ ಇವು ಜಾತಿಗಳ ಹೆಸರಲ್ಲ. ಅನೇಕ ಜಾತಿಗಳ ಗುಂಪುಗಳಿಗೆ ನೀಡಿದ ಹೆಸರುಗಳಾಗಿವೆ. ಕೆಲವು ಜಿಲ್ಲೆಗಳಲ್ಲಿ ಆದಿ ಕರ್ನಾಟಕ, ಆದಿ ದ್ರಾವಿಡ ಮತ್ತು ಆದಿ ಆಂಧ್ರ ಎಂದು ಬಲಗೈ ಮತ್ತು ಎಡಗೈ ಎರಡೂ ಜಾತಿಗಳು ಗುರುತಿಸಿಕೊಂಡಿವೆ. ಹೀಗಾಗಿ ಸಮೀಕ್ಷೆಯ ಸಮಯದಲ್ಲಿ ಮೂಲ ಜಾತಿ/ಉಪಜಾತಿ ಕಾಲಂನಲ್ಲಿ ಆದಿ ಕರ್ನಾಟಕ, ಆದಿ ಆಂಧ್ರ, ಆದಿ ದ್ರಾವಿಡ ಎಂದು ನಮೂದಿಸದೇ, ಬಲಗೈ, ಛಲವಾದಿ, ಹೊಲಯ, ಮಹರ್, ಪರಯ್ಯ, ಮಾಲಾ, ಚನ್ನದಾಸರ ಇತ್ಯಾದಿ ಮೂಲಜಾತಿಯನ್ನು ನಮೂದಿಸಬೇಕು ಎಂದು ಕೋರಿದರು.

ಒಂದು ವೇಳೆ ಮೂಲ ಜಾತಿ, ಉಪಜಾತಿ, ನಮೂದಿಸದಿದ್ದರೆ, ಬಲಗೈ ಗುಂಪಿಗೆ ಸಂಬಂಧಿಸಿದ ಜಾತಿಗಳ ಜನಸಂಖ್ಯೆಯಲ್ಲಿ ವ್ಯತ್ಯಾಸವಾಗಿ ನಮಗೆ ವಾಸ್ತವವಾಗಿ ದೊರಕಬೇಕಿರುವ ಮೀಸಲಾತಿ ಸೌಲಭ್ಯದ ಪ್ರಮಾಣದಲ್ಲಿ ನಷ್ಟ ಅನುಭವಿಸಬೇಕಾಗುತ್ತದೆ. ಸರಕಾರದಿಂದ ದೊರೆಯುತ್ತಿರುವ ಸೌಲಭ್ಯಗಳಾದ ಶಿಕ್ಷಣ ಉದ್ಯೋಗ, ರಾಜಕೀಯ ಪ್ರಾತಿನಿಧ್ಯ ಸೇರಿ ಎಲ್ಲದರಿಂದ ವಂಚಿತರಾಗಬೇಕಾಗುತ್ತದೆ ಎಂದು ಸಿದ್ದಯ್ಯ ತಿಳಿಸಿದರು.

ಸಮೀಕ್ಷೆ ಮೂರು ಹಂತಗಳಲ್ಲಿ ನಡೆಯಲಿದ್ದು, ಮೊದಲನೇ ಹಂತದ ಮನೆ ಮನೆ ಜಾತಿ ಸಮೀಕ್ಷೆ ಮೇ 17ರ ವರೆಗೆ ನಡೆಯಲಿದೆ. ಮನೆ ಮನೆ ಸಮೀಕ್ಷೆ ಪ್ರಕ್ರಿಯೆಯಿಂದ ಬಿಟ್ಟು ಹೋದವರು 2ನೇ ಹಂತದಲ್ಲಿ ಸರಕಾರದಿಂದ ಮತಗಟ್ಟೆ ಪ್ರದೇಶಗಳಲ್ಲಿ ಗುರುತಿಸಲಾಗಿರುವ ವಿಶೇಷ ಶಿಬಿರಗಳಿಗೆ ಮೇ 19ರಿಂದ 21ರ ವರೆಗೆ ಭೇಟಿ ನೀಡುವ ಮೂಲಕ ಸಮೀಕ್ಷೆಯಲ್ಲಿ ಭಾಗವಹಿಸಬಹುದು. ಮೂರನೇ ಹಂತದ ಸಮೀಕ್ಷೆಯಲ್ಲಿ ಪಾಲ್ಗೊಳ್ಳಲು ಜಾತಿಪ್ರಮಾಣ ಪತ್ರದ ಆರ್‍ಡಿ ನಂಬರ್ ಕಡ್ಡಾಯವಾಗಿ ಬೇಕಾಗುತ್ತದೆ ಎಂದು ಮಾಹಿತಿ ನೀಡಿದರು.

ಸುದ್ದಿಗೋಷ್ಠಿಯಲ್ಲಿ ಕಾರ್ಯಕಾರಣಿ ಸಮಿತಿ ಸದಸ್ಯರಾದ ಟಿ.ಆರ್.ಶಿವರಾಂ, ಎಚ್.ಎಸ್.ಲಿಂಗೇಶ್, ಮಹದೇವಯ್ಯ, ಶಿವಣ್ಣ ಬಿ., ಶೀತಲ್ ಕಂಬಾಳೆ, ಛಲವಾದಿ ಮಹಾಸಭಾದ ಖಜಾಂಚಿ ಜಿ. ಮಹದೇವಯ್ಯ, ಸಂಘಟನಾ ಕಾರ್ಯದರ್ಶಿ ಸಿ.ಎಂ.ಮುನಿಸ್ವಾಮಿ, ಮಾಜಿ ಮೇಯರ್ ಸಂಪತ್ ರಾಜ್, ಬಿಬಿಎಂಪಿ ಮಾಜಿ ಸದಸ್ಯ ರಾಜೇಂದ್ರ, ವಕೀಲ ಮಹೇಶ್, ನಾಗೇಶ್ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X