Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಕೌಶಲ್ಯ ತರಬೇತಿಯಲ್ಲಿ ಭಾರತ-ಆಫ್ರಿಕಾ...

ಕೌಶಲ್ಯ ತರಬೇತಿಯಲ್ಲಿ ಭಾರತ-ಆಫ್ರಿಕಾ ಪಾಲುದಾರಿಕೆ: ನಮೀಬಿಯಾದಲ್ಲಿ ಶೀಘ್ರದಲ್ಲೇ ಜಿಟಿಸಿಸಿ ಸ್ಥಾಪನೆ

ವಾರ್ತಾಭಾರತಿವಾರ್ತಾಭಾರತಿ12 May 2025 9:43 PM IST
share
ಕೌಶಲ್ಯ ತರಬೇತಿಯಲ್ಲಿ ಭಾರತ-ಆಫ್ರಿಕಾ ಪಾಲುದಾರಿಕೆ: ನಮೀಬಿಯಾದಲ್ಲಿ ಶೀಘ್ರದಲ್ಲೇ ಜಿಟಿಸಿಸಿ ಸ್ಥಾಪನೆ

ಬೆಂಗಳೂರು : ಕರ್ನಾಟಕದ ಸರಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ (ಜಿಟಿಟಿಸಿ) ಈಗ ವಿದೇಶದಲ್ಲೂ ತನ್ನ ವ್ಯಾಪ್ತಿ ಮತ್ತು ಕೀರ್ತಿಯನ್ನು ವಿಸ್ತರಿಸುತ್ತಿದೆ. ಸರಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರವನ್ನು (ಜಿಟಿಟಿಸಿ) ಆಫ್ರಿಕಾದ ನಮೀಬಿಯಾದಲ್ಲಿ ಸ್ಥಾಪಿಸುವ ಕುರಿತು ಉನ್ನತ ಮಟ್ಟದ ಮಾತುಕತೆ ನಡೆದಿದೆ.

ವೃತ್ತಿಪರ ತರಬೇತಿಯಲ್ಲಿ ಭಾರತ-ಆಫ್ರಿಕಾ ಸಹಕಾರವನ್ನು ಬಲಪಡಿಸುವ ಮಹತ್ವದ ಹೆಜ್ಜೆಯಾಗಿ, ಆಫ್ರಿಕಾ ಇಂಡಿಯಾ ಎಕನಾಮಿಕ್ ಫೌಂಡೇಶನ್ (ಎಐಇಎಫ್) ಕರ್ನಾಟಕದ ಜಿಟಿಟಿಸಿಯನ್ನು ಪ್ರಮುಖ ಜ್ಞಾನ ಮತ್ತು ತಂತ್ರಜ್ಞಾನ ಪಾಲುದಾರ ಸಂಸ್ಥೆಯಾಗಿ ಮಾಡಿಕೊಳ್ಳಲು ಮುಂದೆ ಬಂದಿದೆ. ಈ ಪ್ರಸ್ತಾವನೆ ಅತ್ಯಂತ ಸ್ವಾಗತಾರ್ಹವಾಗಿದೆ. ಈ ಚರ್ಚೆಗಳನ್ನು ಸಕ್ರಿಯವಾಗಿ ಮುಂದುವರಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಈ ಉಪಕ್ರಮವು ಕರ್ನಾಟಕವನ್ನು ಜಾಗತಿಕ ಕೌಶಲ್ಯ ಕೇಂದ್ರವಾಗಿಸುತ್ತದೆ. ಉಪಕರಣ ತಯಾರಿಕೆ ಮತ್ತು ಉತ್ಪಾದನಾ ಕೌಶಲ್ಯಗಳಲ್ಲಿ ಜಿಟಿಟಿಸಿಯ ಪರಿಣತಿಯು ಈಗ ಜಾಗತಿಕ ಪ್ರಭಾವವನ್ನು ಸೃಷ್ಟಿಸಲು ಸಜ್ಜಾಗಿದೆ ಎಂದು ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್ ಹೇಳಿದ್ದಾರೆ.

ಜಿಟಿಟಿಸಿಯನ್ನು, ಆಫ್ರಿಕಾದ ಕೈಗಾರಿಕಾ ತರಬೇತಿ ಅಗತ್ಯಗಳಿಗೆ ದೃಢವಾದ ಮಾದರಿಯಾಗಿ ಕಾರ್ಯನಿರ್ವಹಿಸುವ ಬಗ್ಗೆ ಪ್ರಸ್ತಾಪಿಸಲಾಗಿತ್ತು. ಐದು ದಶಕಗಳಿಗೂ ಹೆಚ್ಚು ಕಾಲದ ಪರಂಪರೆಯನ್ನು ಹೊಂದಿರುವ ಸರಕಾರಿ ಸ್ವಾಮ್ಯದ ಸಂಸ್ಥೆಯಾಗಿದ್ದು, ರಾಜ್ಯದಾದ್ಯಂತ 20 ಕ್ಕೂ ಹೆಚ್ಚು ಕೇಂದ್ರಗಳನ್ನು ಹೊಂದಿದೆ ಎಂದು ಅವರು ತಿಳಿಸಿದರು.

ಸಾವಿರಾರು ಜನರಿಗೆ ನಿಖರ ಉಪಕರಣಗಳು, ಸಿಎನ್‍ಸಿ ಕಾರ್ಯಾಚರಣೆಗಳು, ಮೆಕಾಟ್ರಾನಿಕ್ಸ್ ಮತ್ತು ರೊಬೊಟಿಕ್ಸ್‌ನಲ್ಲಿ ತರಬೇತಿ ನೀಡಲಾಗುತ್ತದೆ. ಜಿಟಿಟಿಸಿ 5 ಲಕ್ಷಕ್ಕೂ ಹೆಚ್ಚು ಕೌಶಲ್ಯಪೂರ್ಣ ವೃತ್ತಿಪರರನ್ನು ಈಗಾಗಲೇ ಪರಿಚಯಿಸಿದೆ. ನೈಜ-ಸಮಯದ ಕೈಗಾರಿಕಾ ಬೇಡಿಕೆಗಳು ಮತ್ತು ಆಳವಾಗಿ ಬೇರೂರಿರುವ ಉದ್ಯಮ ಸಂಪರ್ಕಗಳಿಗೆ ಹೊಂದಿಕೊಂಡಂತೆ ಪಠ್ಯಕ್ರಮವನ್ನು ರೂಪಿಸಲಾಗಿದೆ ಎಂದು ಎಐಇಎಫ್ ಪ್ರಧಾನ ಕಾರ್ಯದರ್ಶಿ ಅನಿಲ್ ಸಿಂಧೆ ಹೇಳಿದರು.

ಇದರ ಕಾರ್ಯಾಚರಣೆಯ ಪರಿಣತಿಯನ್ನು ಆಫ್ರಿಕನ್ ಸಂದರ್ಭಗಳಿಗೆ ಸರಾಗವಾಗಿ ಅಳವಡಿಸಿಕೊಳ್ಳಬಹುದು. ಭಾರತ ಮತ್ತು 54 ಆಫ್ರಿಕನ್ ರಾಷ್ಟ್ರಗಳ ನಡುವೆ ಜ್ಞಾನ, ತಂತ್ರಜ್ಞಾನ, ವ್ಯಾಪಾರ ಮತ್ತು ಹೂಡಿಕೆಯ ಕಾರ್ಯತಂತ್ರದ ಏಕೀಕರಣವನ್ನು ಉತ್ತೇಜಿಸಲು ಎಐಇಎಫ್ ರಚಿಸಲಾಗಿದೆ. ಇದರ ಉಪಕ್ರಮಗಳು ಆಫ್ರಿಕನ್ ಒಕ್ಕೂಟದಿಂದ ಅನುಮೋದನೆಯನ್ನು ಪಡೆದಿವೆ ಎಂದು ಅವರು ತಿಳಿಸಿದರು.

ಅಡಿಸ್ ಅಬಾಬಾದಲ್ಲಿ 2020ರಲ್ಲಿ ನಡೆದ ಶೃಂಗಸಭೆಯಲ್ಲಿ ಪ್ರತಿಷ್ಠಾನದ ಪ್ರಸ್ತಾಪಗಳನ್ನು ಚರ್ಚಿಸಲಾಗಿತ್ತು. ಇದರ ಆಧಾರದ ಮೇಲೆ ಐಐಟಿ ಮದ್ರಾಸ್ 2023 ರಲ್ಲಿ ಜಾಂಜಿಬಾರ್‍ನಲ್ಲಿ ಆಫ್‍ಶೋರ್ ಕ್ಯಾಂಪಸ್ ಅನ್ನು ಸ್ಥಾಪಿಸಿತು. ಇದು ಭಾರತೀಯ ತಂತ್ರಜ್ಞಾನ ಸಂಸ್ಥೆಯ ಮೊದಲ ಘಟಕವಾಗಿದೆ. ಇದು ಆಫ್ರಿಕಾದಾದ್ಯಂತ ಶಿಕ್ಷಣ ಮತ್ತು ಕೌಶಲ್ಯದಲ್ಲಿ ದೀರ್ಘಕಾಲೀನ ಸಹಯೋಗದ ಬದ್ಧತೆಗೆ ಸಾಕ್ಷಿಯಾಗಿದೆ ಎಂದು ಅನಿಲ್ ಸಿಂಧೆ ಹೇಳಿದರು.

ನಮೀಬಿಯಾ ಜೊತೆಗಿನ ಸಹಭಾಗಿತ್ವಕ್ಕೆ ಸಹಕಾರ: ಎಐಇಎಫ್ ಜಂಟಿ ಕಾರ್ಯದರ್ಶಿ ಆರ್. ಕಾಂಚನವೇಲು, ನಮೀಬಿಯಾದಲ್ಲಿ ಯುರೇನಿಯಂ, ವಜ್ರಗಳು, ಚಿನ್ನ ಮತ್ತು ಅಪರೂಪದ ಭೂಮಿಯ ಖನಿಜಗಳು ಸೇರಿದಂತೆ ಹೇರಳ ನೈಸರ್ಗಿಕ ಸಂಪನ್ಮೂಲಗಳನ್ನು ಹೊಂದಿದೆ ಎಂದು ಹೇಳಿದರು.

ನಮೀಬಿಯಾವು ಸಮುದ್ರ ಕೈಗಾರಿಕೆಗಳು, ಇಂಧನ, ಕೃಷಿ ವ್ಯವಹಾರ, ಲಾಜಿಸ್ಟಿಕ್ಸ್ ಮತ್ತು ಪ್ರವಾಸೋದ್ಯಮದಂತಹ ಕ್ಷೇತ್ರಗಳಲ್ಲಿಯೂ ವೇಗವಾಗಿ ಅಭಿವೃದ್ಧಿ ಹೊಂದುತ್ತಿದೆ. ರಾಜಕೀಯವಾಗಿ ಸ್ಥಿರವಾಗಿದೆ. ಇಲ್ಲಿ ಆರಂಭಿಸುತ್ತಿರುವ ಯೋಜನೆ ಭಾರಿ ಸಹಯೋಗಕ್ಕೆ ಸಹಕಾರಿಯಾಗಲಿದೆ ಎಂದು ವಿವರಿಸಿದರು.

ಜಿಟಿಟಿಸಿಯ ವ್ಯವಸ್ಥಾಪಕ ನಿರ್ದೇಶಕ ಡಾ.ವೈ.ಕೆ.ದಿನೇಶ್ ಕುಮಾರ್ ಮಾತನಾಡಿ, ಈ ಪಾಲುದಾರಿಕೆಯ ಮೂಲಕ ಆಫ್ರಿಕಾದಾದ್ಯಂತ ಜಿಟಿಟಿಸಿ ಹಳೆಯ ವಿದ್ಯಾರ್ಥಿಗಳಿಗೆ ಉದ್ಯೋಗಾವಕಾಶಗಳನ್ನು ಸೃಷ್ಟಿಸಲಾಗುತ್ತದೆ. ಕರ್ನಾಟಕ ಮೂಲದ ಎಂಎಸ್‍ಎಂಇಗಳಿಗೆ ಹೊಸ ಮಾರುಕಟ್ಟೆ ತೆರೆಯುತ್ತದೆ ಮತ್ತು ಕರ್ನಾಟಕದ ಕೌಶಲ್ಯ ಮಾದರಿ ಜಾಗತಿಕವಾಗಿ ಮಟ್ಟದಲ್ಲಿ ಪ್ರವೇಶಿಸುತ್ತದೆ ಎಂದರು. ಈ ಸಂದರ್ಭದಲ್ಲಿ ಎಐಇಎಫ್‍ನ ಸಹ ಸದಸ್ಯ ಎಂ.ಎಸ್.ಜಾಹೇದ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X