Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಗ್ರಾಹಕರ ದೂರು ನಿರ್ವಹಣೆಗೆ ಡಿಜಿಟಲ್...

ಗ್ರಾಹಕರ ದೂರು ನಿರ್ವಹಣೆಗೆ ಡಿಜಿಟಲ್ ಪೋರ್ಟಲ್: ಬೆಸ್ಕಾಂ ಎಂಡಿ ಡಾ.ಎನ್.ಶಿವಶಂಕರ್

ವಾರ್ತಾಭಾರತಿವಾರ್ತಾಭಾರತಿ14 May 2025 10:05 PM IST
share
ಗ್ರಾಹಕರ ದೂರು ನಿರ್ವಹಣೆಗೆ ಡಿಜಿಟಲ್ ಪೋರ್ಟಲ್: ಬೆಸ್ಕಾಂ ಎಂಡಿ ಡಾ.ಎನ್.ಶಿವಶಂಕರ್

ಬೆಂಗಳೂರು : ಗ್ರಾಹಕ ದೂರು ನಿರ್ವಹಣೆ ಪ್ರಕ್ರಿಯೆಯನ್ನು ಮತ್ತಷ್ಟು ಪಾರದರ್ಶಕವಾಗಿಸಲು ಡಿಜಿಟಲ್ ಪೋರ್ಟಲ್ ಪರಿಚಯಿಸಲು ಬೆಸ್ಕಾಂ ಮುಂದಾಗಿದೆ ಎಂದು ಬೆಸ್ಕಾಂನ ವ್ಯವಸ್ಥಾಪಕ ನಿರ್ದೇಶಕ ಡಾ.ಎನ್. ಶಿವಶಂಕರ ತಿಳಿಸಿದ್ದಾರೆ.

ಬುಧವಾರ ಕೆಇಆರ್‍ಸಿ ಮತ್ತು ಬೆಸ್ಕಾಂ ಸಹಯೋಗದಲ್ಲಿ ಕೆಇಬಿ ಇಂಜಿನಿಯರ್ಸ್ ಅಸೋಸಿಯೇಷನ್ ಸಭಾಂಗಣದಲ್ಲಿ ಆಯೋಜಿಸಿದ್ದ ಕಾರ್ಯಾಗಾರದಲ್ಲಿ ಗ್ರಾಹಕರ ಕುಂದು-ಕೊರತೆಗಳ ನಿವಾರಣಾ ವೇದಿಕೆಯ ಅಧ್ಯಕ್ಷರು, ಸದಸ್ಯರು ಮತ್ತು ಅಧಿಕಾರಿಗಳನ್ನು ಉದ್ದೇಶಿಸಿ ಅವರು ಮಾತನಾಡುತ್ತಿದ್ದರು.

ಗ್ರಾಹಕರ ದೂರುಗಳ ನಿರ್ವಹಣೆಗೆ ಕಾರ್ಪೊರೇಟ್ ವ್ಯವಹಾರಗಳ ಮುಖ್ಯ ಪ್ರಧಾನ ವ್ಯವಸ್ಥಾಪಕರನ್ನು ನಿಯೋಜಿಸಲಾಗಿದೆ. ಗ್ರಾಹಕರ ಹಕ್ಕಿಗೆ ಒತ್ತು ನೀಡಿ, ದೂರು ನಿರ್ವಹಣೆ ಪ್ರಕ್ರಿಯೆಯನ್ನು ಮತ್ತಷ್ಟು ಪಾರದರ್ಶಕವಾಗಿಸಲು ಡಿಜಿಟಲ್ ಪೋರ್ಟಲ್ ಸಿದ್ದಪಡಿಸಲು ಬೆಸ್ಕಾಂ ಮುಂದಾಗಿದೆ ಎಂದು ಅವರು ತಿಳಿಸಿದರು.

ಕೆಇಆರ್‍ಸಿ ಆದೇಶದ ಸೂಚನೆ ಮೇರೆಗೆ ಗ್ರಾಹಕರ ಕುಂದು-ಕೊರತೆಗಳ ನಿವಾರಣಾ ವೇದಿಕೆಯನ್ನು ಸ್ಥಾಪಿಸಲಾಗಿದೆ. ಗ್ರಾಹಕರು ದೂರಿಗೆ ತ್ವರಿತವಾಗಿ ಸ್ಪಂದಿಸಿ, ಸೇವೆಯ ಗುಣಮಟ್ಟ ಹೆಚ್ಚಿಸಲು ಅಧಿಕಾರಿಗಳು ಮುಂದಾಗಬೇಕು. ಗ್ರಾಹಕರ ಕುಂದು-ಕೊರತೆಗಳ ನಿವಾರಣಾ ವೇದಿಕೆ (ಸಿಜಿಆರ್‌ಎಫ್)ಯ ಸ್ಪಷ್ಟ ನಿರ್ದೇಶನದಂತೆ ಗ್ರಾಹಕರು ದೂರುಗಳು ಬಂದಲ್ಲಿ ನಿಗದಿತ ಕಾಲಮಿತಿಯೊಳಗೆ ಇತ್ಯರ್ಥಗೊಳಿಸಬೇಕಿದೆ ಎಂದರು.

ಜಿಲ್ಲಾ ಹಂತದ ವೇದಿಕೆಯಲ್ಲಿ ಸೂಪರಿಂಟೆಂಡೆಂಟ್ ಇಂಜಿನಿಯರ್, ಇಇ ಹಾಗೂ ಸ್ವತಂತ್ರ ಸದಸ್ಯರು ಇರಲಿದ್ದಾರೆ. ಕಾರ್ಪೊರೇಟ್ ಕಚೇರಿಯ ಸಿಜಿಆರ್‌ಎಫ್ ವೇದಿಕೆಯಲ್ಲಿ ದೂರು ಇತ್ಯರ್ಥವಾಗದಿದ್ದರೆ ಕೆಇಆರ್‍ಸಿ ವಿದ್ಯುಚ್ಛಕ್ತಿ ಲೋಕಪಾಲರ (ಓಂಬುಡ್ಸ್‌ ಮನ್) ಬಳಿ ದೂರು ಸಲ್ಲಿಸಿ ನಿಗದಿತ ಕಾಲಮಿತಿಯೊಳಗೆ ಪರಿಹಾರ ಪಡೆಯಬಹುದಾಗಿದೆ ಎಂದು ಅವರು ತಿಳಿಸಿದರು.

ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದ ಕೆಇಆರ್‍ಸಿಯ ಅಧ್ಯಕ್ಷರೂ ಆದ ಸರಕಾರದ ನಿವೃತ್ತ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್, ದೂರಿನ ಇತ್ಯರ್ಥದ ಸಂದರ್ಭದಲ್ಲಿ ಗ್ರಾಹಕರಿಗೆ ಅಧಿಕಾರಿಗಳು ನಿಷ್ಪಕ್ಷಪಾತವಾಗಿ ನ್ಯಾಯ ಒದಗಿಸಬೇಕು. ಮುಖ್ಯವಾಗಿ ಈ ಪ್ರಕ್ರಿಯೆ ತ್ವರಿತಗತಿಯಲ್ಲಿ ಆಗಬೇಕು. ಈ ನಿಟ್ಟಿನಲ್ಲಿ ಅಧಿಕಾರಿಗಳು ಕಾರ್ಯಪ್ರವೃತ್ತರಾದರೆ ಕಾರ್ಯಾಗಾರ ಯಶಸ್ವಿಯಾದಂತೆ ಎಂದರು.

ಕೆಇಆರ್‍ಸಿ ಸದಸ್ಯರಾದ (ಕಾನೂನು) ಎಚ್.ಕೆ.ಜಗದೀಶ್ ಮಾತನಾಡಿ, ವಿದ್ಯುಚ್ಛಕ್ತಿ ಅಧಿನಿಯಮ 2003ರ ಸೆಕ್ಷನ್ 42ರ 5 ಮತ್ತು 6ರಲ್ಲಿ ಗ್ರಾಹಕರ ದೂರುಗಳನ್ನು ಸ್ವೀಕರಿಸಿ ನ್ಯಾಯ ಒದಗಿಸಲು ವಿವರಿಸಲಾಗಿದೆ. ಗ್ರಾಹಕರ ಕುಂದುಕೊರತೆಗಳ ನಿವಾರಣಾ ವೇದಿಕೆ ಮತ್ತು ವಿದ್ಯುಚ್ಛಕ್ತಿ ಲೋಕಪಾಲರನ್ನು ಅರೆನ್ಯಾಯಿಕ ವೇದಿಕೆಯಂತೆ ಪರಿಗಣಿಸಲಾಗಿದೆ. ವೇದಿಕೆಗಳ ಕಾರ್ಯವ್ಯಾಪ್ತಿಯನ್ನು ಸುಪ್ರಿಂಕೋರ್ಟ್ ಹಾಗೂ ಹೈಕೋರ್ಟ್ ಸ್ಪಷ್ಟಪಡಿಸಿದೆ ಎಂದರು.

ಕಾರ್ಯಾಗಾರದಲ್ಲಿ ಕೆಇಆರ್‍ಸಿಯ ತಾಂತ್ರಿಕ ನಿರ್ದೇಶಕ ಶ್ರೀನಿವಾಸಪ್ಪ, ನಿವೃತ್ತ ನ್ಯಾಯಾಧೀಶ ಕೃಷ್ಣಯ್ಯ ಹಾಗೂ ಐಎಫ್ ಬಿದರಿ ಅವರು ಅಧಿಕಾರಿಗಳಿಗೆ ಗ್ರಾಹಕರ ಹಕ್ಕುಗಳ ಬಗ್ಗೆ ಇಲಾಖೆ ತಾಂತ್ರಿಕ ವಿಚಾರಗಳು ಹಾಗೂ ಸಾಮಾನ್ಯವಾಗಿ ಎದುರಾಗುತ್ತಿರುವ ದೂರುಗಳ ಬಗ್ಗೆ ವಿವರಿಸಿದರು.

ಕೆಇಆರ್‍ಸಿ ಕಾರ್ಯದರ್ಶಿ ಸಿದ್ದೇಶ್ವರ್, ತಾಂತ್ರಿಕ ನಿರ್ದೇಶಕ ಎಚ್.ಜೆ.ರಮೇಶ್, ಹಣಕಾಸು ವಿಭಾಗದ ನಿರ್ದೇಶಕ ಮಹಾದೇವ, ಆಡಳಿತ ಮತ್ತು ಮಾನವ ಸಂಪನ್ಮೂಲ ವಿಭಾಗದ ಪ್ರಧಾನ ವ್ಯವಸ್ಥಾಪಕ ಡಾ.ದಯಾನಂದ್, ಗ್ರಾಹಕ ಸಂಬಂಧ ಶಾಖೆಯ ಪ್ರಧಾನ ವ್ಯವಸ್ಥಾಪಕ ರಾಜೋಜಿ ರಾವ್, ನಿಗಮ ವ್ಯವಹಾರಗಳ ಮುಖ್ಯಪ್ರಧಾನ ವ್ಯವಸ್ಥಾಪಕಿ ಪುಷ್ಪಾ ಎಸ್.ಎ. ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X