Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಬಿಡದಿಯ ಬಾಲಕಿಯ ಹತ್ಯೆ ಪ್ರಕರಣ:...

ಬಿಡದಿಯ ಬಾಲಕಿಯ ಹತ್ಯೆ ಪ್ರಕರಣ: ಇನ್ಸ್‌ಪೆಕ್ಟರ್ ವಿರುದ್ಧ ದಾಖಲೆ ಸಮೇತ ರಾಜ್ಯ ಮಾನವ ಹಕ್ಕುಗಳ ಆಯೋಗಕ್ಕೆ ದೂರು

ವಾರ್ತಾಭಾರತಿವಾರ್ತಾಭಾರತಿ17 May 2025 11:52 PM IST
share
ಬಿಡದಿಯ ಬಾಲಕಿಯ ಹತ್ಯೆ ಪ್ರಕರಣ: ಇನ್ಸ್‌ಪೆಕ್ಟರ್ ವಿರುದ್ಧ ದಾಖಲೆ ಸಮೇತ ರಾಜ್ಯ ಮಾನವ ಹಕ್ಕುಗಳ ಆಯೋಗಕ್ಕೆ ದೂರು

ಬೆಂಗಳೂರು: ರಾಮನಗರ ಜಿಲ್ಲೆಯ ಬಿಡದಿ ವ್ಯಾಪ್ತಿಯ ಭದ್ರಾಪುರದ 14 ವರ್ಷದ ಮಾತು ಬಾರದ, ಕಿವಿ ಕೇಳಿಸದ ಬಾಲಕಿಯ ಹತ್ಯೆ ಪ್ರಕರಣ ಸಂಬಂಧ ಹೋರಾಟಗಾರರ ಮೇಲೆ ಹಲ್ಲೆ ನಡೆಸಿ, ದೌರ್ಜನ್ಯವೆಸಗಿರುವ ಆರೋಪದಡಿ ಬಿಡದಿ ಠಾಣೆಯ ಇನ್ಸ್‌ ಪೆಕ್ಟರ್ ಶಂಕರ್ ನಾಯ್ಕ್ ವಿರುದ್ಧ ದಾಖಲೆ ಸಮೇತ ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗಕ್ಕೆ ದೂರು ಸಲ್ಲಿಕೆ ಮಾಡಲಾಗಿದೆ.

ಶನಿವಾರ ನಗರದ ಮಾನವ ಹಕ್ಕುಗಳ ಆಯೋಗಗಕ್ಕೆ ಭೇಟಿ ನೀಡಿದ ನ್ಯಾಯವಾದಿ ಎಸ್.ಭೀಮನಗೌಡ ನೇತೃತ್ವದ ನಿಯೋಗ, ಸಾರ್ವಜನಿಕ ಸಮ್ಮುಖದಲ್ಲಿ ಸಂಘಟನೆಯ ಮುಖಂಡರ ಮೇಲೆ ಹಲ್ಲೆ ಹಾಗೂ ಅವಮಾನ ಮಾಡಿ ದೌರ್ಜನ್ಯವೆಸಗಿರುವ ಠಾಣಾ ಅಧಿಕಾರಿ ಮೇಲೆ ಕಾನೂನು ರೀತ್ಯಾ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿ ದೂರು ಸಲ್ಲಿಸಿತು.

ದೂರಿನಲ್ಲಿ ಏನಿದೆ?: ಭದ್ರಾಪುರ ಗ್ರಾಮದ ಬಾಕಿಯ ಅತ್ಯಾಚಾರವೆಸಗಿ ಕೊಲೆ ಮಾಡಿರುವ ಶಂಕೆ ಬಗ್ಗೆ ದೂರುದಾಖಲಾಗಿ ಐದು ದಿನಗಳು ಕಳೆದರೂ ಎಫ್‍ಐಆರ್ ದಾಖಲು ಮಾಡಿರಲಿಲ್ಲ. ಇದಕ್ಕೆ ಸಂಬಂದಪಟ್ಟಂತೆ ಪೊಲೀಸ್ ಇಲಾಖೆಯ ವೈಫಲ್ಯದ ಬಗ್ಗೆ ಜನವಾದಿ ಮಹಿಳಾ ಸಂಘಟನೆ, ಭಾರತ ವಿದ್ಯಾರ್ಥಿ ಫೆಡರೇಷನ್ ಹಾಗೂ ಸಿಐಟಿಯು ಸಂಘಟನೆಯ ಮುಖಂಡರು ಹಾಗೂ ಸದಸ್ಯರು ಪೊಲೀಸರನ್ನು ಪ್ರಶ್ನಿಸಿದ್ದರು.

ಆದರೆ, ಇದನ್ನು ಸಹಿಸದ ರಾಮನಗರ ಜಿಲ್ಲೆಯ ಪೊಲೀಸ್ ಸಿಬ್ಬಂದಿಗಳು ಮೃತ ಬಾಲಕಿಯ ಕುಟುಂಬದ ಸದಸ್ಯರ ಹೇಳಿಕೆ ಪಡೆಯುವುದಾಗಿ ತಿಳಿಸಿ, ಪ್ರಕರಣದ ದಿಕ್ಕು ತಪ್ಪಿಸಲು ಮೃತಳ ತಂದೆ-ತಾಯಿ ಹಾಗೂ ಕುಟುಂಬದ ಸದಸ್ಯರನ್ನು ಸರಕು ಸಾಗಾಣಿಕೆ ವಾಹನದಲ್ಲಿ ಕರೆದುಕೊಂಡು ಹೋಗುವುದಕ್ಕೆ ಮುಂದಾಗಿದ್ದರು. ಈ ವೇಳೆ ಸರಕು ಸಾಗಾಣಿಕೆ ವಾಹನದ ಬದಲಾಗಿ ಪ್ರಯಾಣಿಕರು ಸಂಚರಿಸಬಹುದಾದ ವಾಹನದಲ್ಲಿ ಕರೆದುಕೊಂಡು ಹೋಗಬೇಕೆಂದು ಹೋರಾಟಗಾರರು ಆಗ್ರಹಿಸಿದ್ದರು.

ಸ್ಥಳದಲ್ಲಿದ್ದ ಬಿಡದಿಯ ಪೊಲೀಸ್ ಇನ್ಸ್‌ ಪೆಕ್ಟರ್ ಶಂಕರ್ ನಾಯ್ಕ್, ಮಹಿಳಾ ಮುಖಂಡರ ಜೊತೆ ವಾಗ್ವಾದಕ್ಕಿಳಿದು ಅವಾಚ್ಯ ಶಬ್ದಗಳಿಂದ ಹೀನಾಯವಾಗಿ ಬೈದು ನೀವೇ ವಾಹನವನ್ನು ಏರ್ಪಾಡು ಮಾಡಿಕೊಂಡು ಅವರನ್ನು ಕರೆದುಕೊಂಡು ಬನ್ನಿ ಎಂದು ಏಕವಚನದಲ್ಲಿ ಮಾತನಾಡಿದ್ದರು. ಈ ಘಟನೆಯನ್ನು ಸ್ಥಳದಲ್ಲಿದ್ದ ಸಿಐಟಿಯು ಕಾರ್ಮಿಕ ಮುಖಂಡರಾದ ರಾಘವೇಂದ್ರ ತಮ್ಮ ಮೊಬೈಲ್‍ನಿಂದ ವಿಡಿಯೊ ಚಿತ್ರೀಕರಣ ಮಾಡಲು ಮುಂದಾದಾಗ ಇನ್ಸ್‌ ಪೆಕ್ಟರ್ ರಾಘವೇಂದ್ರ ಅವರ ಕಪಾಳಕ್ಕೆ ಹೊಡೆಯಲು ಮುಂದಾಗಿ, ಅವರನ್ನು ತಳ್ಳಿ ಮೊಬೈಲ್ ಕಿತ್ತು ಬಿಸಾಡಿ, ಕೊರಳಪಟ್ಟಿ ಹಿಡಿದು ವಿಡಿಯೊ ಯಾಕೆ ಮಾಡುತ್ತೀಯಾ? ನಿನ್ನನ್ನು ಸುಮ್ಮನೆ ಬಿಡುವುದಿಲ್ಲ, ನಿನಗೆ ಒಂದು ಗತಿ ಕಾಣಿಸುತ್ತೇನೆ ಎಂದು ಬೆದರಿಕೆ ಹಾಕಿದ್ದರು.

ಹೀಗೆ, ಸಾರ್ವಜನಿಕ ಸ್ಥಳದಲ್ಲಿ ಅವರ ಮೇಲೆ ಹಲ್ಲೆ ಹಾಗೂ ಅವಮಾನ ಮಾಡಿದ್ದು, ಈ ಸಂಬಂಧ ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ಒತ್ತಾಯಿಸಲಾಗಿದೆ.

ಕ್ರಮ ಕೈಗೊಳ್ಳಲು ಆಗ್ರಹ: ‘ಬಿಡದಿಯ ಬಾಲಕಿಯ ಹತ್ಯೆ ಪ್ರಕರಣವೂ ಗಂಭೀರವಾಗಿದ್ದು, ತಪ್ಪಿತಸ್ಥರನ್ನು ಕೂಡಲೇ ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕು.ಜತೆಗೆ, ಸಾರ್ವಜನಿಕರ ಮೇಲೆ ದೌರ್ಜನ್ಯ ನಡೆಸಿರುವ ಪೊಲೀಸ್ ಅಧಿಕಾರಿ ವಿರುದ್ಧವೂ ಕ್ರಮ ಕೈಗೊಂಡು ನ್ಯಾಯ ಒದಗಿಸಬೇಕು’

-ಎಸ್.ಭೀಮನಗೌಡ, ನ್ಯಾಯವಾದಿ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X