Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಅವೈಜ್ಞಾನಿಕ ನೀತಿಯಿಂದ ಅಬಕಾರಿ ಉದ್ಯಮ...

ಅವೈಜ್ಞಾನಿಕ ನೀತಿಯಿಂದ ಅಬಕಾರಿ ಉದ್ಯಮ ಸಂಕಷ್ಟಕ್ಕೆ : ಆರ್.ಅಶೋಕ್ ಆಕ್ರೋಶ

"ದರ, ಸನ್ನದ ಶುಲ್ಕಗಳ ಅಡ್ಡಾದಿಡ್ಡಿ ಹೆಚ್ಚಳದಿಂದ ಉದ್ಯಮಕ್ಕೆ ಕೊಡಲಿ ಪೆಟ್ಟು"

ವಾರ್ತಾಭಾರತಿವಾರ್ತಾಭಾರತಿ18 May 2025 2:42 PM IST
share
ಅವೈಜ್ಞಾನಿಕ ನೀತಿಯಿಂದ ಅಬಕಾರಿ ಉದ್ಯಮ ಸಂಕಷ್ಟಕ್ಕೆ : ಆರ್.ಅಶೋಕ್ ಆಕ್ರೋಶ

ಬೆಂಗಳೂರು : ಅಪಾಯಕಾರಿ ನೀತಿಗಳ ಮೂಲಕ ಅಬಕಾರಿ ಆದಾಯದ ಮೂಲಕ್ಕೆ ಕೊಡಲಿ ಪೆಟ್ಟು ನೀಡಲು ರಾಜ್ಯ ಸರ್ಕಾರ ಮುಂದಾಗಿದೆ ಎಂದು ವಿಧಾನಸಭೆ ಪ್ರತಿಪಕ್ಷದ ನಾಯಕರಾದ ಆರ್. ಅಶೋಕ್ ಆರೋಪಿಸಿದ್ದಾರೆ.

ಅವೈಜ್ಞಾನಿಕ ಆರ್ಥಿಕ ನೀತಿಗಳಿಂದ ದಿವಾಳಿ ಸ್ಥಿತಿ ತಲುಪಿರುವ ರಾಜ್ಯ ಸರ್ಕಾರ ಸಂಪನ್ಮೂಲ ಸಂಗ್ರಹಕ್ಕೆ ಅನುಸರಿಸುತ್ತಿರುವ ಮಾರ್ಗ ಉದ್ಯಮಕ್ಕೆ ಮಾರಕವಾಗಿದೆ ಎಂದು ಟೀಕಿಸಿದ್ದಾರೆ.

ಈ ಕುರಿತು ಹೇಳಿಕೆ ಬಿಡುಗಡೆ ಮಾಡಿರುವ ಅವರು, ದರ ಮತ್ತು ಸನ್ನದು ಶುಲ್ಕ ಏರಿಕೆಗೂ ಒಂದು ಮಾನದಂಡ ಇರುತ್ತದೆ. ಆದರೆ ಒಂದೇ ವರ್ಷದಲ್ಲಿ ಮದ್ಯ ಮಾರಾಟ ಮತ್ತು ಸನ್ನದು ಶುಲ್ಕವನ್ನು ಅಡ್ಡಾದಿಡ್ಡಿ ಹೆಚ್ಚಿಸುತ್ತಿರುವುದು ಉದ್ಯಮದ ಮೇಲೆ ಪ್ರತಿಕೂಲ ಪರಿಣಾಮ ಬೀರಲಿದೆ ಎಂದು ಎಚ್ಚರಿಸಿದ್ದಾರೆ.

ಎಷ್ಟು ಸಲ ಹೆಚ್ಚಳ?

ಬಜೆಟ್ ನಲ್ಲಿ ಯಾವುದೇ ತೆರಿಗೆ ಹಾಕಿಲ್ಲ ಎಂದು ಬೆನ್ನು ತಟ್ಟಿಕೊಂಡು ನಂತರದಲ್ಲಿ ಆಲ್ಕೊಹಾಲ್ ದರಗಳನ್ನು ಯದ್ವಾತದ್ವಾ ಹೆಚ್ಚಿಸಿದ್ದಾರೆ. ಅದರಲ್ಲೂ ಬಿಯರ್ ದರವನ್ನು ವರ್ಷದಲ್ಲಿ ಎರಡೂ - ಮೂರು ಸಲ ಹೆಚ್ಚಿಸಲಾಗಿದೆ. ಗ್ರಾಹಕರಿಗೆ ದೊಡ್ಡ ಹೊರೆ ಹೊರಿಸಲಾಗಿದೆ. ಮದ್ಯಪ್ರಿಯರು ಪ್ರತಿಭಟಿಸುವುದಿಲ್ಲ ಎಂಬ ಕಾರಣಕ್ಕೆ ಇಂತಹ ಕ್ರಮ ಅನುಸರಿಸುವುದು ಒಳ್ಳೆಯದಲ್ಲ. ಸರಿಯಾದ ಆರ್ಥಿಕ ಶಿಸ್ತು ಮತ್ತು ಸಿದ್ಧತೆಗಳಿಲ್ಲದೆ ಗ್ಯಾರೆಂಟಿ ಯೋಜನೆಗಳನ್ನು ಜಾರಿಗೊಳಿಸಲಾಯಿತು. ಇದರಿಂದ ಅಭಿವೃದ್ಧಿ ಕಾರ್ಯಕ್ರಮಗಳು ಸ್ಥಗಿತ ಗೊಂಡಿವೆ. ಬೊಕ್ಕಸ ಬರಿದಾಗಿ ಸರ್ಕಾರ ದಿವಾಳಿಯಾಗಿದೆ ಎಂದು ಹೇಳಿದ್ದಾರೆ

ಇದನ್ನು ಹೇಗಾದರೂ ಸರಿಪಡಿಸಿಕೊಳ್ಳಲು ಹೆಣಗುತ್ತಿರುವ ಸರ್ಕಾರ, ಸಿಕ್ಕ ಸಿಕ್ಕ ಎಲ್ಲ ವಸ್ತುಗಳ ದರ ಹೆಚ್ಚಳ ಮಾಡಿದೆ. ಆದರೂ ಪರಿಸ್ಥಿತಿ ಸುಧಾರಿಸುತ್ತಿಲ್ಲ. ಹೀಗಾಗಿ ಇಂತಹ ದರ ಮತ್ತು ಶುಲ್ಕ ಹೆಚ್ಚಳದಂತಹ ವಾಮ ಮಾರ್ಗಗಳ ಮೂಲಕ ಸರ್ಕಾರ ಉದ್ಯಮವನ್ನು ಶೋಷಣೆ ನಡೆಸುತ್ತಿದೆ ಎಂದು ಆರೋಪಿಸಿದ್ದಾರೆ.

ನೂರು ಪಟ್ಟು ಹೆಚ್ಚಳ :

ಮದ್ಯ ಉತ್ಪಾದನೆ, ಬಾಟ್ಲಿಂಗ್, ಮಾರಾಟ ಮಳಿಗೆಗಳು ಸೇರಿ ಎಲ್ಲ ಸ್ವರೂಪದ ಶುಲ್ಕಗಳನ್ನು ಶೇಕಡಾ ನೂರರಷ್ಟು ಹೆಚ್ಚಳಕ್ಕೆ ಮುಂದಾಗಿದೆ. ಇದಕ್ಕಾಗಿ ಅಬಕಾರಿ ಕಾನೂನುಗಳಿಗೆ ತಿದ್ದುಪಡಿ ಮಾಡಿ ಕರಡು ನಿಯಮಗಳ ಅಧಿಸೂಚನೆಯನ್ನು ಪ್ರಕಟಿಸಿದೆ. ಜುಲೈ 1 ರಿಂದ ಪರಿಷ್ಕೃತ ದರಗಳು ಜಾರಿಗೊಳ್ಳಲಿವೆ. ಆ ಮೂಲಕ ಉದ್ಯಮದ ಅಂತ್ಯಕ್ಕೆ ಮೊಳೆ ಹೊಡೆದಂತಾಗಲಿದೆ ಎಂದಿದ್ದಾರೆ.

ಇಲಾಖೆಗೆ 40 ಸಾವಿರ ಕೋಟಿಯ ಗುರಿ ನಿಗದಿ ಮಾಡಲಾಗಿದೆ. ಇದನ್ನು ತಲುಪಲು ಅಧಿಕಾರಿಗಳು ಇದ್ದಬದ್ದ ಎಲ್ಲಾ ಅವಕಾಶಗಳನ್ನು ಬಳಕೆ ಮಾಡುತ್ತಿದ್ದಾರೆ. ಆ ಮೂಲಕ ಉದ್ಯಮವನ್ನು ಸಂಕಷ್ಟಕ್ಕೆ ದೂಡಲಾಗುತ್ತಿದೆ ಎಂದು ಟೀಕಿಸಿದ್ದಾರೆ.

ಉದ್ಯಮದ ಹಿತದೃಷ್ಟಿಯಿಂದ ಈಗಲೂ ಕಾಲ ಮಿಂಚಿಲ್ಲ. ಸರ್ಕಾರ ಅವೈಜ್ಞಾನಿಕ ಕ್ರಮಗಳನ್ನು ಬಿಟ್ಟು ಉದ್ಯಮ, ಮಾರಾಟಗಾರರು ಮತ್ತು ಗ್ರಾಹಕರ ಹಿತದೃಷ್ಟಿಯಿಂದ ನಿರ್ಧಾರ ಕೈಗೊಳ್ಳಬೇಕು. ಸನ್ನದು, ಶುಲ್ಕ ಪರಿಷ್ಕರಣೆಯನ್ನು ಮರು ಪರಿಶೀಲಿಸಬೇಕು ಎಂದು ಅಶೋಕ್ ಅವರು ಆಗ್ರಹಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X