Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಚಿಕ್ಕಮಗಳೂರು ಏರ್-ಸ್ಟ್ರಿಪ್ ನಿರ್ಮಾಣ:...

ಚಿಕ್ಕಮಗಳೂರು ಏರ್-ಸ್ಟ್ರಿಪ್ ನಿರ್ಮಾಣ: ಸಂಪುಟ ಸಭೆಗೆ ಕಡತ ಮಂಡಿಸಲು ಎಂ.ಬಿ.ಪಾಟೀಲ್ ಸೂಚನೆ

ವಾರ್ತಾಭಾರತಿವಾರ್ತಾಭಾರತಿ22 May 2025 11:17 PM IST
share
ಚಿಕ್ಕಮಗಳೂರು ಏರ್-ಸ್ಟ್ರಿಪ್ ನಿರ್ಮಾಣ: ಸಂಪುಟ ಸಭೆಗೆ ಕಡತ ಮಂಡಿಸಲು ಎಂ.ಬಿ.ಪಾಟೀಲ್ ಸೂಚನೆ

ಬೆಂಗಳೂರು : ಪ್ರವಾಸೋದ್ಯಮ ಮತ್ತು ವಾಣಿಜ್ಯ ವ್ಯವಹಾರಗಳಿಗೆ ಉತ್ತೇಜನ ನೀಡಲು ಚಿಕ್ಕಮಗಳೂರಿನಲ್ಲಿ ಏರ್-ಸ್ಟ್ರಿಪ್ ನಿರ್ಮಾಣಕ್ಕೆ ಸಂಬಂಧಿಸಿದಂತೆ ಬಾಕಿ ಇರುವ ಭೂಸ್ವಾಧೀನ ಪ್ರಕ್ರಿಯೆಯ ಪರಿಹಾರದ ಬಾಬ್ತಿನ 17.06ಕೋಟಿ ರೂ.ಗಳನ್ನು ತ್ವರಿತವಾಗಿ ಬಿಡುಗಡೆ ಮಾಡುವ ಉದ್ದೇಶದಿಂದ ಈ ಯೋಜನೆಯ ಪ್ರಸ್ತಾವವನ್ನು ಮುಂಬರುವ ಸಂಪುಟ ಸಭೆಯಲ್ಲಿ ಮಂಡಿಸಬೇಕು ಎಂದು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ.ಪಾಟೀಲ್ ಅಧಿಕಾರಿಗಳಿಗೆ ಸೂಚಿಸಿದರು.

ಗುರುವಾರ ವಿಧಾನಸೌಧದಲ್ಲಿ 2023-24ರ ಬಜೆಟ್‍ನಲ್ಲಿ ಘೋಷಿಸಿದ್ದ ಚಿಕ್ಕಮಗಳೂರು ಮತ್ತು ಕೊಡಗು ಏರ್-ಸ್ಟ್ರಿಪ್ ನಿರ್ಮಾಣ ಯೋಜನೆಗೆ ಸಂಬಂಧಿಸಿದಂತೆ ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ.ಜಾರ್ಜ್ ಹಾಗೂ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಮಾತನಾಡಿದ ಅವರು, ಚಿಕ್ಕಮಗಳೂರು ಏರ್-ಸ್ಟ್ರಿಪ್ ಯೋಜನೆಗೆ ಅಲ್ಲಿನ ಜಿಲ್ಲಾಡಳಿತವು ಚಿಕ್ಕಮಗಳೂರು-ಹಿರೇಮಗಳೂರು ನಡುವೆ ಈಗಾಗಲೇ 137 ಎಕರೆ ಜಮೀನು ನೀಡಿದೆ.

ಈ ಪೈಕಿ 120 ಎಕರೆ ಸರಕಾರಿ ಜಮೀನೇ ಆಗಿದೆ. ಉಳಿದ 17.1 ಎಕರೆ ಮಾತ್ರ ಖಾಸಗಿಯಾಗಿದ್ದು, ಇದರ ಸ್ವಾಧೀನ ಬಾಕಿ ಇದೆ. ಇದಕ್ಕೆ 24.6 ಕೋಟಿ ರೂ. ವೆಚ್ಚವಾಗಲಿದ್ದು, ಈಗಾಗಲೇ 7 ಕೋಟಿ ರೂ. ಗಳನ್ನು ಬಿಡುಗಡೆ ಮಾಡಲಾಗಿದೆ. ಉಳಿದಿರುವ 17.6 ಕೋಟಿ ರೂ.ಗಳ ಬಿಡುಗಡೆ ಬಾಕಿ ಇದೆ ಎಂದು ವಿವರಿಸಿದರು.

ಇದು ಸರಕಾರದ ಮುಂದೆ ಬಂದಿದ್ದು, ಬಳಿಕ ರಾಜ್ಯ ಕೈಗಾರಿಕಾ ಮೂಲಸೌಕರ್ಯ ಅಭಿವೃದ್ಧಿ ನಿಗಮಕ್ಕೆ ಬಾಕಿ ಹಣ ಬಿಡುಗಡೆ ಮಾಡುವಂತೆ ಸೂಚಿಸಲಾಗಿತ್ತು. ಇಲ್ಲಿಂದ ಈ ವಿಚಾರವು ಹಣಕಾಸು ಇಲಾಖೆಗೆ ಹೋಗಿದೆ. ಅಲ್ಲಿಂದ ಸಂಪುಟ ಸಭೆಯ ಮುಂದೆ ಬರಬೇಕಾಗಿದೆ. ಹೀಗಾಗಿ ಕೂಡಲೇ ಈ ಪ್ರಕ್ರಿಯೆ ಪೂರ್ಣಗೊಳಿಸಬೇಕು ಎಂದು ಉಭಯ ಸಚಿವರು ಅಧಿಕಾರಿಗಳಿಗೆ ಸೂಚಿಸಿದರು.

ಉದ್ದೇಶಿತ ಏರ್-ಸ್ಟ್ರಿಪ್‍ನಲ್ಲೇ ಹೆಲಿಪೋರ್ಟ್ ಅಭಿವೃದ್ಧಿಪಡಿಸಲಾಗುವುದು. ಜತೆಗೆ ಮುಂಬರುವ ದಿನಗಳಲ್ಲಿ ಬೃಹತ್ ವಿಮಾನಗಳ ಪ್ರಯಾಣಕ್ಕೂ ಅನುಕೂಲವಾಗುವ ಹಾಗೆ ನಿಲ್ದಾಣ ಅಭಿವೃದ್ಧಿ ಪಡಿಸುವ ಉದ್ದೇಶ ಇಟ್ಟುಕೊಳ್ಳಬೇಕು. ಪೂರಕವಾಗಿ ಅಕ್ಕಪಕ್ಕದ ಜಮೀನು ಗುರುತಿಸುವುದು. ಮುಂದಿನ ದಿನಗಳಲ್ಲಿ ಇದನ್ನು ಸ್ವಾಧೀನ ಪಡಿಸಿಕೊಳ್ಳಲು ಜಿಲ್ಲಾಡಳಿತಕ್ಕೆ ಸೂಚಿಸಲಾಗುವುದು. ಇದಕ್ಕೆ ಕೆಎಸ್‍ಐಐಡಿಸಿ ವತಿಯಿಂದ ಪರಿಣತರ ತಂಡವನ್ನು ಕಳುಹಿಸಲಾಗುವುದು ಎಂದು ಅವರು ವಿವರಿಸಿದ್ದಾರೆ.

ಇದೇ ರೀತಿಯಲ್ಲಿ ಕೊಡಗಿನಲ್ಲಿ ಏರ್-ಸ್ಟ್ರಿಪ್ ನಿರ್ಮಾಣಕ್ಕೆ ಅಗತ್ಯವಿರುವ ಭೂಮಿಯ ಸ್ವಾಧೀನಕ್ಕೆ ಸಂಬಂಧಿಸಿದಂತೆ ಸಮಸ್ಯೆ ತಲೆದೋರಿದೆ. ಇದನ್ನು ಆದಷ್ಟು ಬೇಗ ಬಗೆಹರಿಸಿ, ಜಾಗವನ್ನು ಗುರುತಿಸಬೇಕು ಎಂದು ನಿರ್ದೇಶನ ನೀಡಲಾಗಿದೆ ಎಂದು ಪಾಟೀಲ್ ಮಾಹಿತಿ ನೀಡಿದ್ದಾರೆ. ಮೂಲಸೌಕರ್ಯ ಅಭಿವೃದ್ಧಿ ಇಲಾಖೆ ಕಾರ್ಯದರ್ಶಿ ಎನ್. ಮಂಜುಳಾ, ವ್ಯವಸ್ಥಾಪಕ ನಿರ್ದೇಶಕಿ ಖುಷ್ಬೂ ಗೋಯಲ್, ಕೆಐಎಡಿಬಿ ಸಿಇಒ ಡಾ.ಮಹೇಶ ಸಭೆಯಲ್ಲಿ ಹಾಜರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X