Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಕೆಎಸ್‌ ಆಂಡ್‌ ಡಿಎಲ್‌ ರಾಯಭಾರಿ ನೇಮಕ...

ಕೆಎಸ್‌ ಆಂಡ್‌ ಡಿಎಲ್‌ ರಾಯಭಾರಿ ನೇಮಕ ವಿಶ್ವಮಟ್ಟದ ಉತ್ಮನ್ನ ಮಾಡಲು ಕಾರ್ಯತಂತ್ರ : ಎಂ.ಬಿ.ಪಾಟೀಲ್‌

ವಾರ್ತಾಭಾರತಿವಾರ್ತಾಭಾರತಿ22 May 2025 11:28 PM IST
share
ಕೆಎಸ್‌ ಆಂಡ್‌ ಡಿಎಲ್‌ ರಾಯಭಾರಿ ನೇಮಕ ವಿಶ್ವಮಟ್ಟದ ಉತ್ಮನ್ನ ಮಾಡಲು ಕಾರ್ಯತಂತ್ರ : ಎಂ.ಬಿ.ಪಾಟೀಲ್‌

ಬೆಂಗಳೂರು : ರಾಜ್ಯದ ಹೆಮ್ಮೆಯ ಸಂಕೇತವಾಗಿರುವ ಕರ್ನಾಟಕ ಸಾಬೂನು ಮತ್ತು ಮಾರ್ಜಕಗಳ ನಿಯಮಿತ (ಕೆಎಸ್ ಆಂಡ್ ಡಿಎಲ್) ಸಂಸ್ಥೆಯನ್ನು ಜಾಗತಿಕ ಮಟ್ಟಕ್ಕೆ ಕೊಂಡೊಯ್ಯುವ ಉದ್ದೇಶದಿಂದ ನಟಿ ತಮನ್ನಾ ಭಾಟಿಯಾ ಅವರನ್ನು ಪ್ರಚಾರ ರಾಯಭಾರಿಯನ್ನಾಗಿ ನೇಮಿಸಿಕೊಳ್ಳಲಾಗಿದೆ. ಇದರಲ್ಲಿ ಅವರ ವರ್ಚಸ್ಸು, ಡಿಜಿಟಲ್ ಪ್ರಸ್ತುತಿ ಮತ್ತು ಯುವಜನರೊಂದಿಗೆ ಅವರ ಸಂಪರ್ಕ ಇವುಗಳನ್ನು ಮಾತ್ರ ಪರಿಗಣಿಸಲಾಗಿದೆ ಎಂದು ಬೃಹತ್ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಸ್ಪಷ್ಟಪಡಿಸಿದ್ದಾರೆ.

ಗುರುವಾರ ಈ ಸಂಬಂಧ ಪ್ರತಿಕ್ರಿಯೆ ನೀಡಿರುವ ಅವರು, ನಟಿ ತಮನ್ನಾ ಅವರನ್ನು 6.20 ಕೋಟಿ ರೂಪಾಯಿ ಸಂಭಾವನೆಯೊಂದಿಗೆ ಎರಡು ವರ್ಷಗಳ ಅವಧಿಗೆ ಕೆಎಸ್ ಆಂಡ್ ಡಿಎಲ್‍ನ ಪ್ರಚಾರ ರಾಯಭಾರಿಯನ್ನಾಗಿ ನೇಮಿಸಿಲಾಗಿದೆ. ಕೆಎಸ್ ಆಂಡ್ ಡಿಎಲ್‍ನ ಕಳೆದ ಸಾಲಿನಲ್ಲಿ 1,785ಕೋಟಿ ರೂ. ವಹಿವಾಟು ನಡೆಸಿದೆ. ಇದರಲ್ಲಿ ಕರ್ನಾಟಕದ ಪಾಲು ಶೇ.18ರಷ್ಟಿದೆ. ಉಳಿದದ್ದು ಆಂಧ್ರ, ತೆಲಂಗಾಣ, ತಮಿಳುನಾಡು, ಕೇರಳ ಮತ್ತು ಮಹಾರಾಷ್ಟ್ರದಿಂದ ಬಂದಿದೆ.

ಸಂಸ್ಥೆಯ ವಹಿವಾಟನ್ನು 2030ರ ವೇಳೆಗೆ 5ಸಾವಿರ ಕೋಟಿ ರೂಪಾಯಿಗೆ ಕೊಂಡೊಯ್ಯುವ ಗುರಿ ಇಟ್ಟುಕೊಂಡು ಈಗ ದಾಪುಗಾಲು ಹಾಕುತ್ತಿದ್ದೇವೆ. ಇಂತಹ ಸಂದರ್ಭದಲ್ಲಿ ಮಾರುಕಟ್ಟೆ ತಂತ್ರವೇ ಮುಖ್ಯವಾಗುತ್ತದೆ. ಇದು ಮಾರುಕಟ್ಟೆ ಪರಿಣತರ ಸಮಿತಿಯ ತೀರ್ಮಾನವಾಗಿದೆ ಎಂದು ಅವರು ಹೇಳಿದರು.

ನಾವು ದೀಪಿಕಾ ಪಡುಕೋಣೆ, ರಶ್ಮಿಕಾ ಮಂದಣ್ಣ, ಪೂಜಾ ಹೆಗಡೆ, ಕಿಯಾರಾ ಅಡ್ವಾಣಿ ಅವರನ್ನೂ ಪರಿಗಣಿಸಿ ನೋಡಿದೆವು. ಆದರೆ, ತಮನ್ನಾ ಅವರು ಡಿಜಿಟಲ್ ಲೋಕದಲ್ಲಿ 2.8ಕೋಟಿ ಪಾಲೋಯರ್ಸ್ ಹೊಂದಿ, ಉಳಿದವರಿಗಿಂತ ಮುಂದಿದ್ದಾರೆ. ಜತೆಗೆ ಅವರು ಅಖಿಲ ಭಾರತ ಮಟ್ಟದ ವರ್ಚಸ್ಸು ಹೊಂದಿದ್ದಾರೆ ಎಂದು ಅವರು ತಿಳಿಸಿದರು.

ಹೀಗಾಗಿ ಅವರನ್ನೇ ಬ್ರ್ಯಾಂಡ್ ಅಂಬಾಸಿಡರ್ ಆಗಿ ನೇಮಿಸಿಕೊಳ್ಳಲಾಗಿದೆ. ಇದು ಕೆಎಸ್ಡಿಎಲ್ ಸಂಸ್ಥೆಗೆ ನಾವು ತರುತ್ತಿರುವ ಸಮಗ್ರ ಪರಿವರ್ತನೆಯಲ್ಲಿ ಕೇವಲ ಒಂದು ಅಂಶವಷ್ಟೇ. ಕೆಎಸ್ ಆಂಡ್ ಡಿಎಲ್‍ನ ಉದ್ಯೋಗಿಗಳು ಕನ್ನಡಿಗರೇ ಆಗಿದ್ದಾರೆ. ಬರುವ ಲಾಭಾಂಶದಲ್ಲಿ ಶೇ.30ರಷ್ಟನ್ನು ಸರಕಾರಕ್ಕೆ ಕೊಡಲಾಗುತ್ತಿದೆ.

ಈಗ ಯೂರೋಪ್ ಮತ್ತು ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ಮಾರುಕಟ್ಟೆ ವಿಸ್ತರಣೆ ಮಾಡಲಾಗುತ್ತಿದೆ. ಇವುಗಳ ಭಾಗವಾಗಿ 435 ವಿತರಕರನ್ನು ಹೊಸದಾಗಿ ನೇಮಿಸಿಕೊಳ್ಳಲಾಗಿದೆ. ಜತೆಗೆ ಇ-ಕಾಮರ್ಸ್ ಮೂಲಕ 500 ಕೋಟಿ ರೂ.ವಹಿವಾಟು ನಡೆಸುವ ಮತ್ತು ರಫ್ತಿನಿಂದ 150 ಕೋಟಿ ರೂ.ಗಳಿಸುವ ಗುರಿ ಹೊಂದಿದ್ದೇವೆ ಎಂದು ಪಾಟೀಲ ಪ್ರತಿಪಾದಿಸಿದರು.

ಇಷ್ಟಕ್ಕೂ ಒಂದು ಸರಕಾರಿ ಸಂಸ್ಥೆ ಹೊಸ ಘಟಕವನ್ನು ವಿಜಯಪುರದಲ್ಲಿ ಆರಂಭಿಸುವ ಹಂತಕ್ಕೆ ಹೋಗುತ್ತಿದೆ ಎನ್ನುವುದೇ ಹೆಮ್ಮೆಯ ವಿಷಯ. ಹೀಗೆ ಮಾಡಿದ ನಂತರ ಅದನ್ನು ವಿಶ್ವಮಟ್ಟಕ್ಕೆ ತೆಗೆದುಕೊಂಡು ಹೋಗಬೇಕಾಗಿದೆ. ಹಾಗೆಯೇ ಬ್ರ್ಯಾಂಡಿಂಗ್ ಹೆಚ್ಚಿಸಲು ಪ್ಯಾಕಿಂಗ್ ಬದಲಿಸುವ ವ್ಯವಸ್ಥೆ ಮಾಡಲಾಗುತ್ತಿದೆ ಎಂದು ಹೇಳಿದರು.

‘109 ವರ್ಷಗಳ ಇತಿಹಾಸವಿರುವ ಕೆಎಸ್ ಆಂಡ್ ಡಿಎಲ್‍ನ ಕರ್ನಾಟಕದ ಹೆಮ್ಮೆಯ ಉದ್ಯಮ. ಇದಕ್ಕೆ ಸಂಪೂರ್ಣ ಹೊಸತನದ ಸ್ಪರ್ಶ ನೀಡುತ್ತಿದ್ದು, ಉತ್ತರ ಭಾರತ ಮತ್ತು ವಿದೇಶಗಳಲ್ಲೂ ಮಾರುಕಟ್ಟೆ ವಿಸ್ತರಣೆ ಮಾಡಲಾಗುತ್ತಿದೆ. ಇದರಲ್ಲಿ ಗೆಲ್ಲಬೇಕೆಂದರೆ ನಾವು ಅದಕ್ಕೆ ತಕ್ಕಂತೆ ಕಾರ್ಯತಂತ್ರ ರೂಪಿಸಬೇಕು. ತಮನ್ನಾರನ್ನು ರಾಯಭಾರಿಯನ್ನಾಗಿ ಮಾಡಿಕೊಂಡಿರುವುದನ್ನು ಯಾರೂ ತಪ್ಪಾಗಿ ಭಾವಿಸಬಾರದು’

-ಅಪ್ಪಾಜಿ ನಾಡಗೌಡ, ಕೆಎಸ್ ಆಂಡ್ ಡಿಎಲ್‍ನ ಅಧ್ಯಕ್ಷ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X