ಇಂದು ಐದು ಕೋವಿಡ್ ಪ್ರಕರಣ ಪತ್ತೆ; ಸೋಂಕಿಗೆ ಒಬ್ಬರು ಬಲಿ

ಸಾಂದರ್ಭಿಕ ಚಿತ್ರ
ಬೆಂಗಳೂರು : ರಾಜ್ಯದಲ್ಲಿ ಮತ್ತೆ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿದ್ದು, ಶನಿವಾರದಂದು ಐದು ಹೊಸ ಪ್ರಕರಣಗಳು ಪತ್ತೆಯಾಗಿವೆ. ಬೆಂಗಳೂರು ನಗರದಲ್ಲಿ ಕೋವಿಡ್ ಸೋಂಕಿನಿಂದ ಒಬ್ಬರು ಮೃತಪಟ್ಟಿದ್ದಾರೆ.
ರಾಜ್ಯದಲ್ಲಿ ಒಟ್ಟು ಕೋವಿಡ್ ಸಕ್ರಿಯ ಪ್ರಕರಣಗಳು 38ಕ್ಕೆ ಏರಿಕೆಯಾಗಿದ್ದು, ಬೆಂಗಳೂರಿನಲ್ಲಿ 32, ಬಳ್ಳಾರಿ 1, ಬೆಂಗಳೂರು ಗ್ರಾಮಾಂತರ 1, ದಕ್ಷಿಣ ಕನ್ನಡ 1, ಮೈಸೂರು 2, ವಿಜಯನಗರ 1 ಕೋವಿಡ್ ಸಕ್ರಿಯ ಪ್ರಕರಣ ಪತ್ತೆಯಾಗಿದೆ.
ಶನಿವಾರದಂದು ಒಟ್ಟು 108 ಮಂದಿಗೆ ಕೋವಿಡ್ ಪರೀಕ್ಷೆ (ಟೆಸ್ಟ್) ಮಾಡಲಾಗಿದ್ದು, ಒಬ್ಬರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
Next Story





