ರಾಜ್ಯದ ವಿವಿಧೆಡೆ ಮುಂದುವರೆದ ಮಳೆ

ಬೆಂಗಳೂರು : ಈ ವರ್ಷ ವಾಡಿಕೆಗಿಂತ ಮೊದಲೇ ರಾಜ್ಯಕ್ಕೆ ಮುಂಗಾರು ಪ್ರವೇಶ ಮಾಡಿರುವ ಹಿನ್ನೆಲೆ ರಾಜಧಾನಿ ಬೆಂಗಳೂರು, ಕರಾವಳಿ, ಮಲೆನಾಡು, ಒಳನಾಡಿನ ಕೆಲವಡೆ ಮಳೆ ಮುಂದುವರೆದಿದೆ.
ಬೆಂಗಳೂರಿನಲ್ಲಿ ರವಿವಾರ ಜಿಟಿ ಜಿಟಿ ಮಳೆ ಮುಂದುವರೆದಿದ್ದು, ಇನ್ನೊಂದು ವಾರ ಮಳೆ ಮುಂದುವರಿಯಲಿದೆ ಎಂದು ಹೇಳಲಾಗಿದೆ. ಮೇ ತಿಂಗಳ ಅಂತ್ಯ ವರೆಗೆ ಮೋಡ ಕವಿದ ವಾತಾವರಣ ಇರಲಿದ್ದು, ಸಾಧಾರಣ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಗಂಟೆಗೆ 40-50 ಕಿ.ಮೀ. ವೇಗದಲ್ಲಿ ಗಾಳಿ ಬೀಸಲಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 27ಡಿಗ್ರಿ ಸೆಲ್ಸಿಯಸ್ ಹಾಗೂ 21ಡಿಗ್ರಿ ಸೆಲ್ಸಿಯಸ್ ಇರಲಿದೆ ಎಂದು ಹೇಳಲಾಗಿದೆ. ಇನ್ನೊಂದೆಡೆ, ನಗರದಲ್ಲಿ ಕಳೆದ ವಾರ ಸುರಿದ ಮಳೆಗೆ ನಗರದ ತಗ್ಗು ಪ್ರದೇಶಗಳಲ್ಲಿ ಭಾರೀ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿತ್ತು. ಇದೀಗ ಬೆಂಗಳೂರಿನಲ್ಲಿ ಮತ್ತೆ ಧಾರಾಕಾರ ಮಳೆ ಆಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು. ಮುಂದಿನ ದಿನಗಳಲ್ಲಿ ಭಾರೀ ಮಳೆ ಆಗಲಿದೆ ಎಂದು ಹೇಳಿರುವುದು ತಗ್ಗು ಪ್ರದೇಶದಲ್ಲಿ ಇರುವವರಿಗೆ ಆತಂಕ ಮೂಡಿಸಿದೆ.
ಮುಂದಿನ 24 ಗಂಟೆಯ ಅವಧಿಯಲ್ಲಿ ಬೆಂಗಳೂರಿನಲ್ಲಿ ಮಳೆ ಇರಲಿದೆ. ಗಾಳಿಯ ವೇಗವು ಪ್ರತಿ ಕಿ.ಮೀ ಗಂಟೆಗೆ 40ರಿಂದ 50 ಕಿ.ಮೀ ವೇಗದಲ್ಲಿ ಇರಲಿದೆ. ಗರಿಷ್ಠ ತಾಪಮಾನವು 27 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ತಾಪಮಾನವು 21 ಡಿಗ್ರಿ ಸೆಲ್ಸಿಯಸ್ ಇರಲಿದೆ ಎಂದು ಹೇಳಲಾಗಿದೆ.
ಸಾಮಾನ್ಯವಾಗಿ ಜೂನ್ 1ಕ್ಕೆ ಕೇರಳ ಕರಾವಳಿಗೆ ಅಪ್ಪಳಿಸುವ ಮುಂಗಾರು ಮಳೆ, ತದ ನಂತರ ಒಂದು ವಾರದಲ್ಲಿ ಕರ್ನಾಟಕಕ್ಕೆ ಕಾಲಿಡುತ್ತಿತ್ತು. ಆದರೆ, ಈ ಸಲ ಒಂದು ವಾರ ಮೊದಲು ಕೇರಳಕ್ಕೆ, ರಾಜ್ಯಕ್ಕೆ ಎರಡು ವಾರ ಮೊದಲೇ ಆಗಮಿಸಿದೆ. ನಿರಂತರ ಬಿರುಗಾಳಿ ಮಳೆಯಿಂದ ಚಿಕ್ಕಮಗಳೂರು ಹಾಸನ ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಸಾಲು ಸಾಲು ಅವಾಂತರಗಳು ಸೃಷ್ಟಿಯಾಗಿವೆ.







