Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಬೆಂಗಳೂರಿನ ಜನರಿಗೆ ಬಳಕೆದಾರರ ಶುಲ್ಕ...

ಬೆಂಗಳೂರಿನ ಜನರಿಗೆ ಬಳಕೆದಾರರ ಶುಲ್ಕ ವಿಧಿಸುವ ನಿರ್ಧಾರವನ್ನು ಹಿಂಪಡೆಯಿರಿ: ಆರ್.ಅಶೋಕ್ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ28 May 2025 7:24 PM IST
share
ಬೆಂಗಳೂರಿನ ಜನರಿಗೆ ಬಳಕೆದಾರರ ಶುಲ್ಕ ವಿಧಿಸುವ ನಿರ್ಧಾರವನ್ನು ಹಿಂಪಡೆಯಿರಿ: ಆರ್.ಅಶೋಕ್ ಆಗ್ರಹ

ಬೆಂಗಳೂರು : ಬೆಂಗಳೂರಿನ ಜನರ ಮೇಲೆ ಕಸದ ಸೆಸ್ ಜೊತೆಗೆ, ಬಳಕೆದಾರರ ಶುಲ್ಕ ವಿಧಿಸಲಾಗಿದೆ. ಈ ನಿರ್ಧಾರವನ್ನು ಸರಕಾರ ಹಿಂಪಡೆದು ಹಿಂದಿನಂತೆಯೇ ಚದರ ಅಡಿಗೆ ತಕ್ಕಂತೆ ಶುಲ್ಕ ವಿಧಿಸಬೇಕು ಎಂದು ವಿಪಕ್ಷ ನಾಯಕ ಆರ್.ಅಶೋಕ್ ಆಗ್ರಹಿಸಿದರು.

ಬುಧವಾರ ನಗರದಲ್ಲಿರುವ ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಆಡಳಿತಗಾರ ತುಷಾರ್ ಗಿರಿನಾಥ್ ಅವರಿಗೆ ಮನವಿ ಪತ್ರ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರಿನ ಜನರ ಮೇಲೆ ಕಾಂಗ್ರೆಸ್ ಸರಕಾರ ಟನ್ನುಗಟ್ಟಲೆ ತೆರಿಗೆಯ ಭಾರವನ್ನು ಹೇರಿದೆ. ಈಗ ಕಸದಿಂದ ರಸ ತೆಗೆಯುವ ಸ್ಕೀಮ್ ಮಾಡಿದ್ದಾರೆ ಎಂದು ಹೇಳಿದರು.

ಇಡೀ ದೇಶದಲ್ಲಿ ಅತಿ ಹೆಚ್ಚು ಕಸದ ತೆರಿಗೆಯನ್ನು ಕಾಂಗ್ರೆಸ್ ವಿಧಿಸಿದೆ. ಕೆಂಪೇಗೌಡರು ನಾಡು ಕಟ್ಟಿದ ನಾಡಪ್ರಭು ಎಂಬ ಹೆಸರು ಪಡೆದಿದ್ದರೆ, ಕಾಂಗ್ರೆಸ್ ನಾಯಕರು ನಾಡನ್ನು ಹಾಳು ಮಾಡಿದವರು ಎಂಬ ಬಿರುದು ಪಡೆದಿದ್ದಾರೆ. ಈ ಮೊದಲು ನಗರದಲ್ಲಿ ಸೆಸ್ ಇತ್ತು. ಈಗ ಇದರ ಜೊತೆಗೆ ಬಳಕೆದಾರರ ಶುಲ್ಕ ವಿಧಿಸಿದ್ದಾರೆ. ಸೆಸ್‍ನಿಂದಲೇ ಸುಮಾರು 250 ಕೋಟಿ ರೂ. ಸಂಗ್ರಹವಾಗುತ್ತಿದೆ ಎಂದು ಅವರು ಮಾಹಿತಿ ನೀಡಿದರು.

ಕಸದ ಟೆಂಡರ್‍ನ ಮೌಲ್ಯವೇ 147 ಕೋಟಿ ರೂ. ಆಗಿದ್ದರೆ, ಜನರಿಂದ ಅತ್ಯಧಿಕ ಶುಲ್ಕ ವಸೂಲಿ ಮಾಡುತ್ತಿದ್ದಾರೆ. ಇನ್ನು ಬಳಕೆದಾರರ ಶುಲ್ಕವೂ ಸೇರಿದರೆ 500-600 ಕೋಟಿ ರೂ. ಸಂಗ್ರಹವಾಗುತ್ತದೆ. ಯಾರ ಮನೆ ಹಾಳು ಮಾಡಲು ಸರಕಾರ ಇಷ್ಟು ಹಣವನ್ನು ಸಂಗ್ರಹಿಸುತ್ತಿದೆ? ಎಂದು ಪ್ರಶ್ನೆ ಮಾಡಿದ ಅವರು, ಒಂದೋ ಬಳಕೆದಾರರ ಶುಲ್ಕ, ಇಲ್ಲವಾದರೆ ಸೆಸ್ ಸಂಗ್ರಹಿಸಬೇಕು. ಆದರೆ ಬೆಂಗಳೂರಿನಲ್ಲಿ ಎರಡೂ ಶುಲ್ಕ ವಿಧಿಸಲಾಗಿದೆ. ಇದರಿಂದಾಗಿ ಮನೆಗಳ ಬಾಡಿಗೆ ದರ ಹೆಚ್ಚಲಿದೆ ಎಂದು ಹೇಳಿದರು.

ವಾಣಿಜ್ಯ ಕಟ್ಟಡಗಳ ಬಾಡಿಗೆ, ಕಲ್ಯಾಣ ಮಂಟಪ, ಆಸ್ಪತ್ರೆ, ಶಾಲೆ, ಹೋಟೆಲ್‍ಗಳ ದರ ಹೆಚ್ಚಲಿದೆ. ಒಂದು ತೆರಿಗೆಯಿಂದಾಗಿ ಎಲ್ಲ ದರಗಳು ಹೆಚ್ಚಲಿದೆ. ಬೆಂಗಳೂರಿನ ಜನರನ್ನು ಕಾಂಗ್ರೆಸ್ ದರೋಡೆ ಮಾಡುತ್ತಿದೆ. ಇದು ಕೇಂದ್ರ ಸರಕಾರದ ಕಾಯ್ದೆ ಎಂದು ನೆಪ ಹೇಳುತ್ತಾರೆ. ಎರಡು ಬಗೆಯ ಶುಲ್ಕ ವಿಧಿಸಬೇಕೆಂದು ಕೇಂದ್ರ ಸರಕಾರ ಎಲ್ಲೂ ಹೇಳಿಲ್ಲ ಎಂದು ಅಶೋಕ್ ತಿಳಿಸಿದರು.

ಜನಪ್ರತಿನಿಧಿಗಳ ಸಭೆ ನಡೆಸಿ: ಬೆಂಗಳೂರಿನ ಶಾಸಕರ ಸಭೆ ಕರೆದು ಈ ಬಗ್ಗೆ ಚರ್ಚಿಸಬೇಕು. ಹಿಂದೆ ಚದರ ಅಡಿಗೆ ತಕ್ಕಂತೆ ಕಸದ ಸೆಸ್ ವಿಧಿಸಲಾಗುತ್ತಿತ್ತು. ಅದೇ ಮಾದರಿಯನ್ನು ಈಗ ಮತ್ತೆ ತರಬೇಕು. ಕಾಂಗ್ರೆಸ್‍ನ ಐದು ಗ್ಯಾರಂಟಿಗಳಿಗಾಗಿ ನಗರದ ಜನರಿಂದ ಇಷ್ಟು ತೆರಿಗೆ ವಸೂಲಿ ಮಾಡಲಾಗುತ್ತಿದೆ. ಈಗಾಗಲೇ ಬೆಂಗಳೂರಿನ ಜನರು ಹೋರಾಟ ಆರಂಭಿಸಿದ್ದಾರೆ. ಇದಕ್ಕೆ ಸಂಪೂರ್ಣ ಬೆಂಬಲ ನೀಡಲಾಗುವುದು ಎಂದು ಅವರು ಹೇಳಿದರು.

ಕರಾವಳಿ ಭಾಗದಲ್ಲಿ ಭಯೋತ್ಪಾದನಾ ಚಟುವಟಿಕೆ ಹೆಚ್ಚಿದೆ. ಕೊಲೆಗೆ ಕೊಲೆ ಎಂಬ ಮನಸ್ಥಿತಿ ಬಂದಿರುವುದು ಒಳ್ಳೆಯದಲ್ಲ. ಸರಕಾರ ಯಾರನ್ನೋ ಓಲೈಕೆ ಮಾಡುತ್ತಿದ್ದು, ಕಾನೂನು ಕಾಪಾಡುವಲ್ಲಿ ಸೋತಿದೆ. ಸರಕಾರ ಮತೀಯವಾದಕ್ಕೆ ಪುಷ್ಠಿ ನೀಡುತ್ತಿರುವುದರಿಂದ ಇಂತಹ ಘಟನೆ ನಡೆಯುತ್ತಿದೆ ಎಂದು ಅವರು ದೂರಿದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ತಿನ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಮಾಜಿ ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ್, ಶಾಸಕರಾದ ಕೆ. ಗೋಪಾಲಯ್ಯ, ಎಸ್.ರಘು, ಎಸ್.ಮುನಿರಾಜು, ಎಲ್.ಎ.ರವಿಸುಬ್ರಮಣ್ಯ, ಸಿ.ಕೆ.ರಾಮಮೂರ್ತಿ, ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ಎಸ್.ಹರೀಶ್, ಬೆಂಗಳೂರು ಕೇಂದ್ರ ಜಿಲ್ಲಾಧ್ಯಕ್ಷ ಸಪ್ತಗಿರಿ ಗೌಡ, ಬಿಜೆಪಿ ರಾಜ್ಯ ಮುಖ್ಯ ವಕ್ತಾರ ಅಶ್ವತ್ಥನಾರಾಯಣ್, ರಾಜ್ಯ ಮಾಧ್ಯಮ ಸಂಚಾಲಕ ಕರುಣಾಕರ ಖಾಸಲೆ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಕಮಲ್ ಹಾಸನ್ ಒಬ್ಬ ಹುಚ್ಚ :

ಕಮಲ್ ಹಾಸನ್ ಒಬ್ಬ ಹುಚ್ಚ. ಕನ್ನಡ ಸಿನಿಮಾದಲ್ಲಿ ಆತನಿಗೆ ಅವಕಾಶ ಸಿಕ್ಕಿತ್ತು. ಕನ್ನಡವನ್ನು ಅವಹೇಳನ ಮಾಡುವುದನ್ನು ನೋಡಿದರೆ ಆತನೊಬ್ಬ ನಗರ ನಕ್ಸಲ್ ಎಂಬುದು ಸ್ಪಷ್ಟವಾಗಿದೆ. ಎಲ್ಲ ಕನ್ನಡಿಗರು ಕಮಲ್ ಹಾಸನ್‍ಗೆ ಬಹಿಷ್ಕಾರ ಹಾಕಬೇಕು. ರಾಜ್ಯದೊಳಗೆ ಬರಲು ಕೂಡ ಅವಕಾಶ ನೀಡಬಾರದು. ಕನ್ನಡಕ್ಕೆ ದ್ರೋಹ ಬಗೆದ ಈತನ ಚಿತ್ರ ಪ್ರದರ್ಶನಕ್ಕೆ ಅವಕಾಶ ನೀಡಬಾರದು. ಈ ಕುರಿತು ಸರಕಾರ ಕ್ರಮ ಕೈಗೊಳ್ಳಬೇಕು.

ಆರ್.ಅಶೋಕ್, ವಿಪಕ್ಷ ನಾಯಕ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X