ಬೆಂಗಳೂರು | ಕಮಲ್ ಹಾಸನ್ ಪ್ರತಿಕೃತಿ ದಹಿಸಿ ಕರವೇ ಪ್ರತಿಭಟನೆ

ಬೆಂಗಳೂರು0: ತಮಿಳಿನಿಂದ ಕನ್ನಡ ಹುಟ್ಟಿದೆ ಎಂಬ ತಮಿಳು ನಟ ಕಮಲ್ ಹಾಸನ್ ಹೇಳಿಕೆಯನ್ನು ಖಂಡಿಸಿ, ಕರ್ನಾಟಕ ರಕ್ಷಣಾ ವೇದಿಕೆಯ ಕಾರ್ಯಕರ್ತರು ನಗರದಲ್ಲಿ ಕಮಲ್ ಹಾಸನ್ ಪ್ರತಿಕೃತಿ ದಹಿಸಿ ಪ್ರತಿಭಟನೆ ನಡೆಸಿದರು.
ನಟ ಕಮಲ್ ಹಾಸನ್ ಅವರ ಕನ್ನಡದ ಕುರಿತು ನೀಡಿರುವ ಹೇಳಿಕೆಯಿಂದ ಕನ್ನಡಿಗರ ಭಾವನೆಗೆ ಧಕ್ಕೆ ಉಂಟಾಗಿದೆ. ಆದ್ದರಿಂದ ಕೂಡಲೇ ಕನ್ನಡಿಗರನ್ನು ಕ್ಷಮೆ ಕೇಳಬೇಕು ಎಂದು ಪ್ರತಿಭಟನಾ ನಿರತರು ಆಕ್ರೋಶ ವ್ಯಕ್ತಪಡಿಸಿದರು.
Next Story





