Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಬಾನು ಮುಷ್ತಾಕ್ ಕನ್ನಡದ ಕೀರ್ತಿ...

ಬಾನು ಮುಷ್ತಾಕ್ ಕನ್ನಡದ ಕೀರ್ತಿ ಹೆಚ್ಚಿಸಿದ್ದಾರೆ: ಸಿದ್ದರಾಮಯ್ಯ

ಲೇಖಕಿ, ಅನುವಾದಕಿಗೆ ತಲಾ 10 ಲಕ್ಷ ರೂ. ಪುರಸ್ಕಾರ ಘೋಷಿಸಿದ ಸಿಎಂ

ವಾರ್ತಾಭಾರತಿವಾರ್ತಾಭಾರತಿ2 Jun 2025 2:20 PM IST
share
ಬಾನು ಮುಷ್ತಾಕ್  ಕನ್ನಡದ ಕೀರ್ತಿ ಹೆಚ್ಚಿಸಿದ್ದಾರೆ: ಸಿದ್ದರಾಮಯ್ಯ

ಬೆಂಗಳೂರು, ಜೂ 2: ಸಾಹಿತ್ಯಕ್ಕೆ ಸಮಾಜವನ್ನು ಬೆಸೆಯುವ ಶಕ್ತಿ ಇದೆ. ಸಾಹಿತ್ಯದ ಮೂಲಕ ಸಮಾಜವನ್ನು ಒಗ್ಗೂಡಿಸಬೇಕೇ ಹೊರತು ವಿಭಜಿಸಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯಪಟ್ಟರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬ್ಯಾಂಕ್ವೆಂಟ್ ಹಾಲ್ ನಲ್ಲಿ ಆಯೋಜಿಸಿದ್ದ ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು ಮುಷ್ತಾಕ್ ಅವರಿಗೆ ಸರ್ಕಾರಿ ಅಭಿನಂದನಾ ಕಾರ್ಯಕ್ರಮದಲ್ಲಿ ಬಾನು ಅವರನ್ನು ಅಭಿನಂದಿಸಿ, ಸನ್ಮಾನಿಸಿ ಸಿಎಂ ಮಾತನಾಡುತ್ತಿದ್ದರು.

ಬಾನು ಮುಷ್ತಾಕ್ ಅವರು ನಮ್ಮ ಭಾಷೆಗೆ ಬೂಕರ್ ಒದಗಿಸಿಕೊಡುವ ಮೂಲಕ ಕನ್ನಡದ ಕೀರ್ತಿ ಹೆಚ್ಚಿಸಿದ್ದಾರೆ. ಇದು ಇಡೀ ಕನ್ನಡ ಜಗತ್ತಿನ ಹೆಮ್ಮೆ‌ ಎಂದು ಮೆಚ್ಚುಗೆ ಸೂಚಿಸಿದರು.

ಬಾನು ಅವರ ಕತೆಗಳನ್ನು ಇಂಗ್ಲಿಷ್ ಗೆ ಪ್ರಕಟಿಸಲು, ಅನುವಾದಕ್ಕೆ ಸರ್ಕಾರದ ನೆರವು ನೀಡಲಾಗುವುದು. ತಮ್ಮ ಕತೆಗಳ ಮೂಲಕ ಮತ್ತು ಅನುವಾದದ ಮೂಲಕ ಕನ್ನಡಕ್ಕೆ ಕೀರ್ತಿ ತಂದ ಬಾನು ಮುಷ್ತಾಕ್ , ದೀಪಾ ಬಾಸ್ತಿ ಅವರಿಗೆ ತಲಾ 10 ಲಕ್ಷ ಪುರಸ್ಕಾರ ನೀಡಲಾಗುವುದು ಎಂದು ಘೋಷಿಸಿದರು.

ಪತ್ರಕರ್ತೆಯಾಗಿ, ಲೇಖಕಿಯಾಗಿ, ವಕೀಲರಾಗಿ, ಹೋರಾಟಗಾರ್ತಿಯಾಗಿ ಸಮಾಜದಲ್ಲಿ ಗುರುತಿಸಿಕೊಂಡಿರುವುದೇ ಬಾನು ಮುಷ್ತಾಕ್ ಅವರ ಬರವಣಿಗೆಯ ಶಕ್ತಿ ಎಂದು ವಿಶ್ಲೇಷಿಸಿದರು.

ಲಂಕೇಶ್ ಪತ್ರಿಕೆಯಲ್ಲಿ ಪತ್ರಕರ್ತೆಯಾಗಿ ಬರೆಯುತ್ತಲೇ, ವಕೀಲೆಯಾಗಿ ಬಡವರ ಪರ ವಕಾಲತ್ತು ವಹಿಸುತ್ತಾ ರಾಜ್ಯೋತ್ಸವ ಪ್ರಶಸ್ತಿ ಸೇರಿ ಹಲವು ಪ್ರಶಸ್ತಿಗಳು ಲಭಿಸಿರುವುದೇ ಬಾನು ಮುಷ್ತಾಕ್ ಅವರ ಬರವಣಿಗೆಗಳಲ್ಲಿ ಸಮಾಜಮುಖಿ ಸತ್ವ ಇದೆ ಎನ್ನುವುದಕ್ಕೆ ಸಾಕ್ಷಿ ಎಂದರು.

ಮುಸ್ಲಿಂ ಸಮುದಾಯದ ಹೆಣ್ಣು‌ಮಕ್ಕಳ ಧ್ವನಿಯಾಗಿ ಮೌಢ್ಯ ವಿರೋಧಿಸಿ ಬರೆಯುವ ಪ್ರಗತಿಪರ ಎದೆಗಾರಿಕೆ ಬಾನು ಅವರಲ್ಲಿದೆ. ಸಾಹಿತ್ಯದ ಮೂಲಕ ಮಾನವೀಯ ಸಂದೇಶ ನೀಡುವ ಜವಾಬ್ದಾರಿ ಬಾನು ಮುಷ್ತಾಕ್ ಅವರು ನಿರ್ವಹಿಸಿದ್ದಾರೆ.

ಕವಿರಾಜಮಾರ್ಗದಲ್ಲಿ ಪರಧರ್ಮ ಮತ್ತು ಪರ ವಿಚಾರಗಳನ್ನು ಸಹಾನುಭೂತಿಯಿಂದ ನೋಡುಬೇಕು ಎಂದು ಕರೆ ನೀಡಿದ್ದರೆ, ಆದಿಕವಿ ಪಂಪ ಅವರು ಮನುಷ್ಯ ಜಾತಿ ತಾನೊಂದೇ ವಲಂ ಎಂದಿದ್ದಾರೆ, ಬಸವಣ್ಣನವರು "ಇವ ನಮ್ಮವ" ಎಂದು ಹೇಳಿದ್ದಾರೆ. ಹೆಣ್ಣಿನ ಧ್ವನಿಯಾದ ಅಕ್ಕಮಹಾದೇವಿ ಅವರೂ ಇದನ್ನೇ ಧ್ವನಿಸಿದ್ದಾರೆ. ಇವರೆಲ್ಲರ ಆಶಯಗಳ ಮುಂದುವರಿಕೆಯಾಗಿ ಬಾನು ಮುಷ್ತಾಕ್ ಕೆಲಸ ಮಾಡಿದ್ದಾರೆ ಎಂದರು.















share
ವಾರ್ತಾಭಾರತಿ
ವಾರ್ತಾಭಾರತಿ
Next Story
X