Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ನಿರುದ್ಯೋಗ ನಿವಾರಣೆಗೆ ಕೃಷಿ ಕ್ಷೇತ್ರ...

ನಿರುದ್ಯೋಗ ನಿವಾರಣೆಗೆ ಕೃಷಿ ಕ್ಷೇತ್ರ ಆಸರೆ: ಎನ್.ಚಲುವರಾಯಸ್ವಾಮಿ

ವಾರ್ತಾಭಾರತಿವಾರ್ತಾಭಾರತಿ12 Jun 2025 11:03 PM IST
share
ನಿರುದ್ಯೋಗ ನಿವಾರಣೆಗೆ ಕೃಷಿ ಕ್ಷೇತ್ರ ಆಸರೆ:  ಎನ್.ಚಲುವರಾಯಸ್ವಾಮಿ


ಬೆಂಗಳೂರು : ನಿರುದ್ಯೋಗ ಸಮಸ್ಯೆ ನಿವಾರಣೆಗೆ ಕೃಷಿ ಮತ್ತು ಕೃಷಿ ಉತ್ಪನ್ನಗಳ ಮೌಲ್ಯವರ್ಧನೆ ಹಾಗೂ ವ್ಯಾಪಾರ ಕ್ಷೇತ್ರಗಳು ಆಸರೆಯಾಗಿವೆ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಅಭಿಪ್ರಾಯಪಟ್ಟಿದ್ದಾರೆ.

ಗುರುವಾರ ನಗರದ ಪುರಭವನದಲ್ಲಿ ಕೇಂದ್ರ ಸರಕಾರದ ಆಹಾರ ಸಂಸ್ಕರಣ ಉದ್ಯಮ-ಮಂತ್ರಾಲಯ, ಖೇತಿವಾಲಾಸ್ ಹಾಗೂ ಕರ್ನಾಟಕ ರಾಜ್ಯ ಕೃಷಿ ಉತ್ಪನ್ನಗಳ ಸಂಸ್ಕರಣೆ ಮತ್ತು ರಫ್ತು ನಿಗಮದ ವತಿಯಿಂದ ನಡೆದ ಕೃಷಿ ಜಾಗೃತಿ ಕಾರ್ಯಗಾರ ಹಾಗೂ ಖೇತಿ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಕೃಷಿ ಮತ್ತು ಕೃಷಿ ಉತ್ಪನ್ನಗಳ ಮಾರುಕಟ್ಟೆ ವಹಿವಾಟು ವ್ಯವಸ್ಥೆಯಲ್ಲಿ ಹೆಚ್ಚಿನ ಉದ್ಯೋಗಗಳು ಸೃಷ್ಟಿಯಾಗುತ್ತಿವೆ. ಜೊತೆಗೆ ಸ್ವ-ಉದ್ಯೋಗಗಳ ಅವಕಾಶಗಳು ಹೆಚ್ಚುತ್ತಿವೆ. ಯುವ ಸಮುದಾಯ ಇದನ್ನು ಸದ್ಬಳಿಕೆ ಮಾಡಿಕೊಳ್ಳಬೇಕು ಎಂದು ಎನ್.ಚಲುವರಾಯಸ್ವಾಮಿ ತಿಳಿಸಿದರು.

ಸಾಂಪ್ರದಾಯಕ ಕೃಷಿಯೊಂದಿಗೆ ತಂತ್ರಜ್ಞಾನ, ವೈಜ್ಞಾನಿಕ ಪದ್ದತಿಗಳ ಅಳವಡಿಕೆಯಿಂದ ಸಮಯ, ಶ್ರಮದ ಉಳಿತಾಯದ ಜೊತೆಗೆ ಆದಾಯ ಹೆಚ್ಚುತ್ತಿದೆ. ರೈತರು ತಮ್ಮ ಉತ್ಪನ್ನಗಳ ಮೌಲ್ಯವರ್ಧನೆಗೂ ಆದ್ಯತೆ ನೀಡಬೇಕಾಗಿದೆ. ಮಾರುಕಟ್ಟೆಯ ಬಗ್ಗೆ ಜ್ಞಾನ ವಿಸ್ತಾರಗೊಳ್ಳಬೇಕು ಎಂದು ಎನ್.ಚಲುವರಾಯಸ್ವಾಮಿ ಹೇಳಿದರು.

ರೈತರ ಉತ್ಪನಗಳ ಮೌಲ್ಯವರ್ಧನೆ, ರಫ್ತು ಹಾಗೂ ಆಹಾರ ಉತ್ಪನಗಳ ತಯಾರಿಕೆ ಉದ್ಯಮದ ಪ್ರೋತ್ಸಾಹಕ್ಕೆ ಹಿಂದೆಂದಿಗಿಂತಲೂ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ಇದರೊಂದಿಗೆ ಖೇತಿವಾಲಾಸ್ ಸಂಸ್ಥೆಯು ರಾಜ್ಯ ಕೃಷಿ ಉತ್ಪನ್ನಗಳ ಸಂಸ್ಕರಣೆ ಮತ್ತು ರಫ್ತು ನಿಗಮದ ಫಲಾನುಭವಿಗಳಿಗೆ ದೇಸಿ ಹಾಗೂ ಅಂತಾರಾಷ್ಟ್ರೀಯ ಮಾರುಕಟ್ಟೆ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯ ಮಾಡುತ್ತಿರುವುದು ಅಭಿನಂದನಾರ್ಹ ಎಂದು ಎನ್.ಚಲುವರಾಯಸ್ವಾಮಿ ತಿಳಿಸಿದರು.

ಕರ್ನಾಟಕ ರಾಜ್ಯ ಕೃಷಿ ಉತ್ಪನ್ನಗಳ ಸಂಸ್ಕರಣೆ ಮತ್ತು ರಫ್ತು ನಿಗಮದಲ್ಲಿ ಪಿಎಂಎಫ್‍ಎಂಇ ಯೋಜನೆಯಡಿಯಲ್ಲಿ ಕಿರು ಆಹಾರ ಸಂಸ್ಕರಣೆ ಉದ್ಯಮ ಸ್ಥಾಪಿಸಲು ಅವಕಾಶವಿದೆ. ರಾಜ್ಯ ಹಾಗೂ ಕೇಂದ್ರ ಸರಕಾರದಿಂದ ಒಟ್ಟು 15 ಲಕ್ಷ ರೂಪಾಯಿ ಸಬ್ಸಿಡಿ ಕೂಡ ದೊರೆಯಲಿದೆ. ಇದಕ್ಕಾಗಿ 206 ಕೋಟಿ ರೂ. ಮೀಸಲಿಡಲಾಗಿದೆ. ಈ ಅವಕಾಶವನ್ನು ರೈತರ ಮಕ್ಕಳು ಸದ್ಬಳಿಕೆ ಮಾಡಿಕೊಳ್ಳಬೇಕು ಎಂದು ಎನ್.ಚಲುವರಾಯಸ್ವಾಮಿ ಕರೆ ನೀಡಿದರು.

ರೈತರನ್ನು ಯಾಂತ್ರಿಕವಾಗಿಯು ಸಬಲರನ್ನಾಗಿ ಮಾಡಲು ಈಗಾಗಲೇ ರಾಜ್ಯ ಸರಕಾರದಿಂದ 900 ಕೋಟಿ ವೆಚ್ಚದಲ್ಲಿ ಕೃಷಿ ಯಂತ್ರೋಪಕರಣಗಳು, 1075 ಕೋಟಿ ರೂಪಾಯಿ ವೆಚ್ಚದಲ್ಲಿ ಸೂಕ್ಷ್ಮ ನೀರಾವರಿ ಪರಿಕರಗಳನ್ನು ವಿತರಿಸಲಾಗಿದೆ ಎಂದು ಎನ್.ಚಲುವರಾಯಸ್ವಾಮಿ ತಿಳಿಸಿದರು.

ಕಾರ್ಯಕ್ರಮದಲ್ಲಿ ಜಲಾನಯನ ಇಲಾಖೆ ನಿರ್ದೇಶಕ ಬಂಥನಾಳ, ಕರ್ನಾಟಕ ರಾಜ್ಯ ಕೃಷಿ ಉತ್ಪನ್ನಗಳ ಸಂಸ್ಕರಣೆ ಮತ್ತು ರಫ್ತು ನಿಗಮದ ವ್ಯವಸ್ಥಾಪಕ ನಿರ್ದೇಶಕ ಶಿವಕುಮಾರ್, ನರ್ಬಾಡ್ ವ್ಯವಸ್ಥಾಪಕ ನಿರ್ದೇಶಕ ಪ್ರಕಾಶ್, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ವ್ಯವಸ್ಥಾಪಕ ನಿರ್ದೇಶಕ ವಿ.ಎನ್.ಶರ್ಮಾ ಸೇರಿದಂತೆ ಇತರರು ಉಪಸ್ಥಿತರಿದ್ದರು. ಇದೆ ವೇಳೆ ಖೇತಿ ಪುರಸ್ಕಾರಕ್ಕೆ ಭಾಜನರಾದ ಅಧಿಕಾರಿಗಳು, ಸಂಸ್ಥೆಯ ಪ್ರತಿನಿಧಿಗಳನ್ನು ಸನ್ಮಾನಿಸಲಾಯಿತು.

5 ಸಾವಿರ ಹೊಸ ಆಹಾರ ಉದ್ಯಮಗಳ ಸೃಷ್ಟಿಯ ಗುರಿ: ‘ಕರ್ನಾಟಕ ರಾಜ್ಯ ಕೃಷಿ ಉತ್ಪನ್ನಗಳ ಸಂಸ್ಕರಣೆ ಮತ್ತು ರಫ್ತು ನಿಗಮದಲ್ಲಿ ಪ್ರಸಕ್ತ ವರ್ಷ 5 ಸಾವಿರ ಹೊಸ ಆಹಾರ ಉದ್ಯಮಗಳ ಸೃಷ್ಟಿಯ ಗುರಿ ಹೊಂದಲಾಗಿದೆ. ಇದಲ್ಲದೆ ಕೃಷಿ ಇಲಾಖೆಯಲ್ಲಿಯೂ ಹಲವು ವಿನೂತನ ಯೋಜನೆಗಳನ್ನು ಜಾರಿಗೊಳಿಸಲಾಗಿದೆ. ಕೃಷಿ ನವೋದ್ಯಮ 8 ಕೋಟಿ ರೂ. ಸಹಾಯಧನದಲ್ಲಿ 40 ನವೋದ್ಯಮಗಳ ಸ್ಥಾಪಿಸಲಾಗಿದೆ’ ಎಂದು ಸಚಿವ ಎನ್.ಚಲುವರಾಯಸ್ವಾಮಿ ಮಾಹಿತಿ ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X