ಬೈಕ್ ಟ್ಯಾಕ್ಸಿಗಳ ಸಂಚಾರಕ್ಕೆ ಮಧ್ಯಂತರ ಅನುಮತಿಗೆ ಹೈಕೋರ್ಟ್ ನಕಾರ

ಬೆಂಗಳೂರು : ಓಲಾ, ಉಬರ್, ರಾಪಿಡೋ ಬೈಕ್ ಟ್ಯಾಕ್ಸಿಗಳಿಗೆ ಹೈಕೋರ್ಟ್ ಶಾಕ್ ನೀಡಿದ್ದು, ಬೈಕ್ ಟ್ಯಾಕ್ಸಿಗಳ ಸಂಚಾರಕ್ಕೆ ಮಧ್ಯಂತರ ಅನುಮತಿಗೆ ನಿರಾಕರಿಸಿದೆ.
ಇದೇ ವೇಳೆ ಹೈಕೋರ್ಟ್ ಮೇಲ್ಮನವಿ ಅರ್ಜಿಗಳ ವಿಚಾರಣೆಯನ್ನು ಜೂನ್ 24ಕ್ಕೆ ಹೈಕೋರ್ಟ್ ನಿಗದಿಪಡಿಸಿದೆ. ವಿಚಾರಣೆ ವೇಳೆ ಸರಕಾರದ ಪರವಾಗಿ ಎಜಿ ಶಶಿಕಿರಣ್ ಶೆಟ್ಟಿ, ಬೈಕ್ ಟ್ಯಾಕ್ಸಿಗಳ ಪರ್ಮಿಟ್ ನಿಯಮ ರೂಪಿಸಲು ಸರಕಾರ ಸಿದ್ದವಿಲ್ಲ. 8 ರಾಜ್ಯಗಳಲ್ಲಿ ಮಾತ್ರ ಬೈಕ್ ಟ್ಯಾಕ್ಸಿಗೆ ಪರ್ಮಿಟ್ ನೀಡಲಾಗಿದೆ. ಕರ್ನಾಟಕ ಸೇರಿ ಉಳಿದ ರಾಜ್ಯಗಳಲ್ಲಿ ಅನುಮತಿ ನೀಡಲಾಗಿಲ್ಲ. ಕರ್ನಾಟಕದಲ್ಲಿ ಸರ್ಕಾರ ಬೈಕ್ ಟ್ಯಾಕ್ಸಿಗೆ ಪರ್ಮಿಟ್ ನೀಡಿಲ್ಲ. 4 ವರ್ಷಗಳಿಂದ ಮಧ್ಯಂತರ ಆದೇಶದ ಮೇಲೆ ಬೈಕ್ ಟ್ಯಾಕ್ಸಿ ನಡೆಯುತ್ತಿದೆ. ಸುಪ್ರೀಂ ಕೋರ್ಟ್ ಕೂಡಾ ಮಧ್ಯಂತರ ಆದೇಶ ನಿರಾಕರಿಸಿದೆ ಎಂದು ವಾದ ಮಂಡಿಸಿದರು.
ಮೇಲ್ಮನವಿ ಅರ್ಜಿಗಳನ್ನು ಜೂ.24 ರಂದು ಅಂತಿಮವಾಗಿ ತೀರ್ಮಾನಿಸಲಾಗುವುದು ಎಂದು ನ್ಯಾ.ವಿ.ಕಾಮೇಶ್ವರ ರಾವ್, ನ್ಯಾ.ಶ್ರೀನಿವಾಸ್ ಹರೀಶ್ ಕುಮಾರ್ ಅವರಿದ್ದ ಪೀಠ ಆದೇಶ ನೀಡಿದೆ.
Next Story





