Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಇಸ್ರೇಲ್-ಇರಾನ್ ಸಂಘರ್ಷ |...

ಇಸ್ರೇಲ್-ಇರಾನ್ ಸಂಘರ್ಷ | ಇಸ್ರೇಲ್‌ನಲ್ಲಿರುವ ಕನ್ನಡಿಗರ ಜತೆ ಮಾತನಾಡಿದ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ

"ವಿದೇಶದಲ್ಲಿರುವ ಭಾರತೀಯರ ಸುರಕ್ಷತೆಗೆ ಕ್ರಮ"

ವಾರ್ತಾಭಾರತಿವಾರ್ತಾಭಾರತಿ15 Jun 2025 11:34 PM IST
share
ಇಸ್ರೇಲ್-ಇರಾನ್ ಸಂಘರ್ಷ | ಇಸ್ರೇಲ್‌ನಲ್ಲಿರುವ ಕನ್ನಡಿಗರ ಜತೆ ಮಾತನಾಡಿದ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ

ಹೊಸದಿಲ್ಲಿ: ಕೇಂದ್ರ ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಇಸ್ರೇಲ್ ಮತ್ತು ಇರಾನ್ ನಡುವಿನ ಸಂಘರ್ಷದಿಂದಾಗಿ ಪ್ರಸ್ತುತ ಇಸ್ರೇಲ್‌ನಲ್ಲಿ ಸಿಲುಕಿರುವ ಹಲವಾರು ಕನ್ನಡಿಗರೊಂದಿಗೆ ವೀಡಿಯೋ ಕರೆ ಮಾಡಿ ಅವರ ಕ್ಷೇಮ, ಸುರಕ್ಷತೆ ಬಗ್ಗೆ ಮಾಹಿತಿ ಪಡೆದುಕೊಂಡರು.

ಬೆಂಗಳೂರಿನಿಂದ ಹೊಸದಿಲ್ಲಿಗೆ ರವಿವಾರ ಸಂಜೆ ವಾಪಸ್ಸಾದ ಕೇಂದ್ರ ಸಚಿವರು, ತಮ್ಮ ಅಧಿಕೃತ ನಿವಾಸದಿಂದ ಇಸ್ರೇಲ್‌ ನಲ್ಲಿ ಸಿಲುಕಿರುವ ಕನ್ನಡಿಗರ ಜತೆ ಮಾತನಾಡಿದರು.

ಮಾತುಕತೆ ಸಮಯದಲ್ಲಿ ಸಚಿವರು, ಅವರೆಲ್ಲರ ಯೋಗಕ್ಷೇಮ ವಿಚಾರಿಸಿದರು ಮತ್ತು ಭಾರತ ಸರಕಾರದಿಂದ ಸಂಪೂರ್ಣ ಬೆಂಬಲದ ಭರವಸೆ ನೀಡಿದರು.

ನಮ್ಮ ಜನರು ಸುರಕ್ಷಿತವಾಗಿ ಮತ್ತು ತ್ವರಿತವಾಗಿ ತಾಯ್ನಾಡಿಗೆ ಮರಳುವುದನ್ನು ಖಚಿತಪಡಿಸಿಕೊಳ್ಳಲು ವಿದೇಶಾಂಗ ಸಚಿವಾಲಯದೊಂದಿಗೆ ಈ ವಿಷಯವನ್ನು ತಕ್ಷಣವೇ ಚರ್ಚಿಸುವುದಾಗಿ ಸಚಿವರು ಹೇಳಿದರು.

ವಿಡಿಯೋ ಕರೆಯ ಮೂಲಕ ಮಾತನಾಡಿದ ಎಲ್ಲಾ ಕನ್ನಡಿಗರು, ತಾವು ಸುರಕ್ಷಿತರಾಗಿದ್ದೇವೆ ಮತ್ತು ಟೆಲ್ ಅವೀವ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಯ ಅಧಿಕಾರಿಗಳು ಅಗತ್ಯವಿರುವ ಎಲ್ಲಾ ಸಹಾಯವನ್ನು ನೀಡುತ್ತಿದ್ದಾರೆ ಎಂದು ಸಚಿವರಿಗೆ ತಿಳಿಸಿದರು. "ನಮ್ಮನ್ನು ಚೆನ್ನಾಗಿ ನೋಡಿಕೊಳ್ಳಲಾಗುತ್ತಿದೆ" ಎಂದು ಸಚಿವರಿಗೆ ಮಾಹಿತಿ ನೀಡಿದರಲ್ಲದೆ, ಇದಕ್ಕಾಗಿ ರಾಯಭಾರ ಕಚೇರಿಗೆ ಕೃತಜ್ಞತೆಗಳನ್ನು ಸಲ್ಲಿಸಿದರು.

ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಭಾರತ ಸರಕಾರವು ವಿದೇಶದಲ್ಲಿರುವ ಭಾರತೀಯ ಪ್ರಜೆಗಳ ಸುರಕ್ಷತೆ ಮತ್ತು ಯೋಗಕ್ಷೇಮವನ್ನು ಖಚಿತಪಡಿಸಿಕೊಳ್ಳಲು ಎಲ್ಲ ಕ್ರಮಗಳನ್ನು ಕೈಗೊಳ್ಳುತ್ತಿದೆ ಎಂದು ಹೇಳಿದರು.

ಪ್ರಸ್ತುತ ಸಂಘರ್ಷದ ವೇಳೆ ಇಸ್ರೇಲ್‌ನಲ್ಲಿ ಸಿಲುಕಿರುವ ಹಲವಾರು ಕನ್ನಡಿಗರೊಂದಿಗೆ ದೂರವಾಣಿಯಲ್ಲಿ ಮಾತನಾಡಿ ಅವರ ಕ್ಷೇಮ, ಸುರಕ್ಷತೆ ಬಗ್ಗೆ ವಿಚಾರಿಸಿದೆ. ಅವರೆಲ್ಲರೂ ತಾಯ್ನಾಡಿಗೆ ಸುರಕ್ಷಿತವಾಗಿ ಮತ್ತು ತ್ವರಿತವಾಗಿ ಮರಳುವುದಕ್ಕೆ ತುರ್ತು ಕ್ರಮ ವಹಿಸಿ, ವಿದೇಶ ಸಚಿವಾಲಯದ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸುವ ಭರವಸೆ ನೀಡಿದ್ದೇನೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಭಾರತ ಸರಕಾರವು ಸಂಘರ್ಷಪೀಡಿತ ವಿದೇಶಗಳಲ್ಲಿರುವ ಭಾರತೀಯ ಪ್ರಜೆಗಳ ಸುರಕ್ಷತೆ ಬಗ್ಗೆ ಎಲ್ಲಾ ರೀತಿಯ ತುರ್ತು ಕ್ರಮಗಳನ್ನು ಕೈಗೊಂಡಿದೆ ಎಂದು ತಿಳಿಸಿದ್ದೇನೆ. ಇಂತಹ ಕಠಿಣ ಸಂದರ್ಭದಲ್ಲಿ ನಮ್ಮ ನಾಗರಿಕರಿಗೆ ಸಕಾಲಿಕ ನೆರವು ನೀಡಿದ್ದಕ್ಕಾಗಿ ಇಸ್ರೇಲ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿ ಅಧಿಕಾರಿಗಳ ಪ್ರಯತ್ನಗಳು ಶ್ಲಾಘನೀಯ.

-ಎಚ್.ಡಿ.ಕುಮಾರಸ್ವಾಮಿ, ಕೇಂದ್ರ ಸಚಿವರು

share
ವಾರ್ತಾಭಾರತಿ
ವಾರ್ತಾಭಾರತಿ
Next Story
X