ಬೆಂಗಳೂರು | ಚಲಿಸುತ್ತಿದ್ದ ದ್ವಿಚಕ್ರ ವಾಹನದ ಮೇಲೆ ಬಿದ್ದ ಮರದ ಕೊಂಬೆ: ಕೋಮಾಗೆ ಜಾರಿದ ಸವಾರ

ಸಾಂದರ್ಭಿಕ ಚಿತ್ರ (credit: Grok)
ಬೆಂಗಳೂರು: ಚಲಿಸುತ್ತಿದ್ದ ದ್ವಿಚಕ್ರ ವಾಹನದ ಮೇಲೆ ಮರದ ಕೊಂಬೆ ಬಿದ್ದ ಪ್ರಕರಣದಲ್ಲಿ ಸವಾರ ಅಕ್ಷಯ್ ಎಂಬಾತ ಗಂಭೀರವಾಗಿ ಗಾಯಗೊಂಡು ಕೋಮಾಗೆ ತಲುಪಿದ್ದು, ಆತನ ಸ್ಥಿತಿ ಚಿಂತಾಜನಕವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.
ಈ ಬಗ್ಗೆ ವಿವರ ನೀಡಿರುವ ನ್ಯೂರೋ ಸರ್ಜನ್ ಡಾ.ಶ್ರೀದತ್, ಅಕ್ಷಯ್ ತಲೆ ಮೇಲೆ ಕೊಂಬೆ ಬಿದ್ದು ಆಸ್ಪತ್ರೆಗೆ ದಾಖಲಾಗಿದ್ದರು. ಮೆದುಳಿಗೆ ತೀವ್ರವಾಗಿ ಪೆಟ್ಟು ಬಿದ್ದಿದೆ. ಆಪರೇಷನ್ ಮಾಡಿದ್ದು, ಸದ್ಯಕ್ಕೆ ಗಾಯಾಳು ಸ್ಥಿತಿ ಕಷ್ಟಕರವಾಗಿದೆ. ಅಂಗಾಂಗಗಳು ಕೆಲಸ ಮಾಡಲು ಮೆಡಿಸನ್ ನೀಡಲಾಗುತ್ತಿದೆ. ನಾವು ಪ್ರಯತ್ನ ಮಾಡುತ್ತಿದ್ದೇವೆ. ಅವರು ಕೋಮಾ ಸ್ಥಿತಿಯಲ್ಲಿದ್ದಾರೆ ಎಂದರು.
ಜೂ.14ರ ರವಿವಾರ ಮಧ್ಯಾಹ್ನ 1:15ರ ಸುಮಾರಿಗೆ ಬನಶಂಕರಿಯ ಬ್ರಹ್ಮಚೈತನ್ಯ ಮಂದಿರದ ಬಳಿ ಅಕ್ಷಯ್, ದ್ವಿಚಕ್ರವಾಹನದಲ್ಲಿ ಹೋಗುತ್ತಿದ್ದ. ಈ ವೇಳೆ ಮರದ ಕೊಂಬೆ ಬಿದ್ದ ಪರಿಣಾಮ ಆತನ ತಲೆಗೆ ತೀವ್ರ ಗಾಯವಾಗಿತ್ತು. ಸ್ಥಳೀಯರು ತಕ್ಷಣ ಜಯನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು.
Next Story





