ರಾಷ್ಟ್ರಕವಿ ಜಿ.ಎಸ್.ಶಿವರುದ್ರಪ್ಪ ಪ್ರತಿಷ್ಠಾನದ ಅಧ್ಯಕ್ಷರಾಗಿ ಮೋಹನ್ ಕೊಂಡಜ್ಜಿ ನೇಮಕ

ಬೆಂಗಳೂರು : ನಗರದಲ್ಲಿರುವ ರಾಷ್ಟ್ರಕವಿ ಜಿ.ಎಸ್.ಶಿವರುದ್ರಪ್ಪ ಪ್ರತಿಷ್ಠಾನಕ್ಕೆ ವಿಧಾನ ಪರಿಷತ್‌ನ ಮಾಜಿ ಸದಸ್ಯ ಮೋಹನ್ ಕೊಂಡಜ್ಜಿ ಅವರನ್ನು ಅಧ್ಯಕ್ಷರನ್ನಾಗಿ ನೇಮಕ ಮಾಡಿ, ರಾಜ್ಯ ಸರಕಾರವು ಆದೇಶ ಹೊರಡಿಸಿದೆ.
ವಿಮರ್ಶಕಿ ಡಾ.ಎಂ.ಎಸ್.ಆಶಾದೇವಿ, ಸಾಹಿತಿ ಡಾ.ಮೂಡ್ನಾಕೂಡು ಚಿನ್ನಸ್ವಾಮಿ, ಜಿ.ಗುಂಡಣ್ಣ, ಜಾಣಗೆರೆ ವೆಂಕಟರಾಮಯ್ಯ, ಚಂದ್ರಶೇಖರ ನಂಗಲಿ, ಸಾಸ್ವೆಹಳ್ಳಿ ಸತೀಶ್, ಸಿರಾಜ್ ಅಹ್ಮದ್, ಆರ್.ಜಿ. ಹಳ್ಳಿ ನಾಗರಾಜ್ ಪ್ರತಿಷ್ಠಾನದ ಸದಸ್ಯರಾಗಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರು ಸದಸ್ಯ ಕಾರ್ಯದರ್ಶಿಯಾಗಿ ನೇಮಕಗೊಂಡಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.
Next Story





