ನಾಲ್ವರು ಐಎಎಸ್ ಅಧಿಕಾರಿಗಳಿಗೆ ಹೆಚ್ಚುವರಿ ಹೊಣೆಗಾರಿಕೆ

ಬೆಂಗಳೂರು : ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್ ಜಿ. ಸೇರಿ ನಾಲ್ವರು ಐಎಎಸ್ ಅಧಿಕಾರಿಗಳಿಗೆ ಹೆಚ್ಚುವರಿ ಹೊಣೆಗಾರಿಕೆ ನೀಡಿ ರಾಜ್ಯ ಸರಕಾರ ಗುರುವಾರ ಆದೇಶ ಹೊರಡಿಸಿದೆ.
ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್ ಜಿ. ಅವರಿಗೆ ಹೆಚ್ಚುವರಿಯಾಗಿ ಬೆಂಗಳೂರು ನಗರ ಜಿಲ್ಲಾ ಪಂಚಾಯತ್ ನ ಮುಖ್ಯ ಕಾರ್ಯನಿರ್ವಾಹಕರಾಗಿ ಹೆಚ್ಚುವರಿ ಹೊಣೆಗಾರಿಕೆ ವಹಿಸಲಾಗಿದೆ.
ವಾಣಿಜ್ಯ ತೆರಿಗೆಗಳ ಕಾರ್ಯಪಡೆ ವಿಭಾಗದ ಹೆಚ್ಚುವರಿ ಆಯುಕ್ತ ಚಂದ್ರಶೇಖರ ನಾಯಕ ಎಲ್. ಅವರನ್ನು ವಾಣಿಜ್ಯ ತೆರಿಗೆಗಳ ಸರ್ವಿಸ್ ಅನಾಲಿಸಿಸ್ ವಿಂಗ್ ನ ಹೆಚ್ಚುವರಿ ಆಯುಕ್ತರಾಗಿ ನೇಮಕ ಮಾಡಲಾಗಿದೆ.
ಬಾಗಲಕೋಟೆ ಜಿಲ್ಲಾಧಿಕಾರಿ ಸಂಗಪ್ಪ ಅವರನ್ನು ಬಾಗಲಕೋಟೆ ಜಿಲ್ಲೆಯ ಪುನರ್ವಸತಿ ಮತ್ತು ಪುನರ್ ರ್ನಿರ್ಮಾಣ ವಿಭಾಗದ ಜನರಲ್ ಮ್ಯಾನೇಜರ್ ಹೆಚ್ಚವರಿ ಹುದ್ದೆಗೆ ನೇಮಕ ಮಾಡಲಾಗಿದೆ.
ಸ್ಮಾರ್ಟ್ ಗೌವರ್ನೆನ್ಸ್ ನ ಕೇಂದ್ರದ ರಾಹುಲ್ ರತ್ನಮ್ ಪಾಂಡೆ ಅವರನ್ನು ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಇ-ಗೌವರ್ನೆನ್ಸ್ ನ ನಿರ್ದೇಶಕರಾಗಿ ನೇಮಕ ಮಾಡಲಾಗಿದೆ.
Next Story





