ಬೆಂಗಳೂರು | ವಿದ್ಯುತ್ ತಂತಿ ತುಳಿದು ಬಾಲಕ ಮೃತ್ಯು

ಸಾಂದರ್ಭಿಕ ಚಿತ್ರ | PC : freepik
ಬೆಂಗಳೂರು: ಇಲ್ಲಿನ ಕೆ.ಆರ್.ಪುರಂನಲ್ಲಿರುವ ಸ್ವಾತಂತ್ರ್ಯ ನಗರದ ಮನೆಯ ಆವರಣದಲ್ಲಿ ವಿದ್ಯುತ್ ಪ್ರವಹಿಸುತ್ತಿದ್ದ ತಂತಿಯನ್ನು ತುಳಿದು ಬಾಲಕ ಮೃತಪಟ್ಟಿರುವ ಘಟನೆ ಶುಕ್ರವಾರ ವರದಿಯಾಗಿದೆ.
ಅನಂತ್(10) ಮೃತಪಟ್ಟ ಬಾಲಕ ಎಂದು ಗುರುತಿಸಲಾಗಿದೆ. ನೇಪಾಳ ಮೂಲದ ತಾಯಿ ಹಾಗೂ ಇಬ್ಬರು ಸಹೋದರಿಯರೊಂದಿಗೆ ಬಾಲಕ ಕೆ.ಆರ್.ಪುರಂನ ಸ್ವಾತಂತ್ರ್ಯ ನಗರದಲ್ಲಿ ವಾಸವಿದ್ದ. ಜೂ.15ರಂದು ಮನೆಯ ಆವರಣದಲ್ಲಿ ಆಟವಾಡುತ್ತಿದ್ದಾಗ ಆಕಸ್ಮಿಕವಾಗಿ ಪಕ್ಕದಲ್ಲೇ ಇದ್ದ ವಿದ್ಯುತ್ ತಂತಿಯನ್ನು ತುಳಿದಿದ್ದು, ಶಾಕ್ ಹೊಡೆದಿದೆ.
ಘಟನೆಯಲ್ಲಿ ಬಾಲಕನ ಕೈ, ಕಾಲು ಮತ್ತು ದೇಹದ ಕೆಲವು ಭಾಗಗಳಲ್ಲಿ ಗಂಭೀರವಾಗಿ ಸುಟ್ಟ ಗಾಯಗಳಾದ ಹಿನ್ನೆಲೆ ನಗರದ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಹೆಚ್ಚಿನ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ಜೂ.20ರ ಶುಕ್ರವಾರ ಚಿಕಿತ್ಸೆ ಫಲಕಾರಿಯಾಗದೆ ಬಾಲಕ ಸಾವನ್ನಪ್ಪಿದ್ದಾನೆ ಎಂದು ವೈದ್ಯರು ತಿಳಿಸಿದ್ದಾರೆ.
Next Story





