‘ಗ್ರಾಮೀಣಾಭಿವೃದ್ಧಿ ಅಧಿಕಾರಿ ಮತ್ತು ನೌಕರರ ಬೇಡಿಕೆ’ | ಸಚಿವ ಪ್ರಿಯಾಂಕ್ ಖರ್ಗೆಗೆ ವರದಿ ಸಲ್ಲಿಸಿದ ಸಮಿತಿ

ಬೆಂಗಳೂರು: ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಧಿಕಾರಿ ಮತ್ತು ನೌಕರರ ಸಂಘದ ವಿವಿಧ ವೃಂದದ ಬೇಡಿಕೆಗಳ ಬಗ್ಗೆ ಪಂಚಾಯತ್ ರಾಜ್ ಆಯುಕ್ತೆ ಡಾ.ಅರುಂಧತಿ ಚಂದ್ರಶೇಖರ್ ಅಧ್ಯಕ್ಷತೆಯಲ್ಲಿ ನೇಮಿಸಿದ್ದ ಸಮಿತಿ ಸಿದ್ಧಪಡಿಸಿರುವ ವರದಿಯನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಶುಕ್ರವಾರ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ (ಪಂಚಾಯತ್ ರಾಜ್) ಉಮಾ ಮಹದೇವನ್ ಸೇರಿದಂತೆ ಇನ್ನಿತರ ಅಧಿಕಾರಿಗಳು ಹಾಜರಿದ್ದರು.
Next Story





