ಐಎಎಸ್ ಅಧಿಕಾರಿಗಳ ವರ್ಗಾವಣೆ

ಬೆಂಗಳೂರು : ರಾಜ್ಯ ಏಡ್ಸ್ ನಿಯಂತ್ರಣ ಸೊಸೈಟಿಯ ಯೋಜನಾ ನಿರ್ದೇಶಕಿ ವಿನೋತ್ ಪ್ರಿಯಾ ಆರ್. ಅವರನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ರೇಶ್ಮೆ ಅಭಿವೃದ್ಧಿ ಆಯುಕ್ತೆ ಹಾಗೂ ನಿರ್ದೇಶಕಿಯಾಗಿ ವರ್ಗಾವಣೆ ಮಾಡಿ ರಾಜ್ಯ ಸರಕಾರ ಶನಿವಾರ ಆದೇಶ ಹೊರಡಿಸಿದೆ.
ಅಲ್ಲದೇ. ವಿನೋತ್ ಪ್ರಿಯಾ ಆರ್. ಅವರಿಗೆ ರಾಜ್ಯ ಏಡ್ಸ್ ನಿಯಂತ್ರಣ ಸೊಸೈಟಿಯ ಯೋಜನಾ ನಿರ್ದೇಶಕಿಯ ಹುದ್ದೆಯಲ್ಲಿ ಪ್ರಭಾರದಲ್ಲಿರಿಸಲಾಗಿದೆ. ಉತ್ತರ ಕನ್ನಡ ಜಿಲ್ಲೆಯ ಕಾರವಾರ ಉಪ ವಿಭಾಗದ ಹಿರಿಯ ಸಹಾಯಕ ಆಯುಕ್ತ ಕಾನಿಕ್ಷಾ ಅವರನ್ನು ವಾಣಿಜ್ಯ ತೆರಿಗೆ ಇಲಾಖೆಯ ಹೆಚ್ಚುವರಿ ಆಯುಕ್ತರನ್ನಾಗಿ ವರ್ಗಾವಣೆ ಮಾಡಲಾಗಿದೆ.
Next Story





