Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಜಾತಿವಾದ, ಕೋಮುವಾದದಿಂದ ದೇಶ ಅಧಃಪತನದತ್ತ...

ಜಾತಿವಾದ, ಕೋಮುವಾದದಿಂದ ದೇಶ ಅಧಃಪತನದತ್ತ : ನ್ಯಾ.ಮಾರ್ಕಂಡೇಯ ಕಾಟ್ಜು

ವಾರ್ತಾಭಾರತಿವಾರ್ತಾಭಾರತಿ21 Jun 2025 11:49 PM IST
share
ಜಾತಿವಾದ, ಕೋಮುವಾದದಿಂದ ದೇಶ ಅಧಃಪತನದತ್ತ : ನ್ಯಾ.ಮಾರ್ಕಂಡೇಯ ಕಾಟ್ಜು

ಬೆಂಗಳೂರು : ಜಾತಿವಾದ ಮತ್ತು ಕೋಮುವಾದದಂತಹ ದುಷ್ಟಶಕ್ತಿಗಳು ಭಾರತವನ್ನು ಹಾಳು ಮಾಡುತ್ತಿದ್ದು, ದೇಶ ಮುಂದುವರಿಯಬೇಕಾದರೆ ಈ ಎರಡು ದುಷ್ಟಶಕ್ತಿಗಳು ನಾಶ ಆಗಲೇಬೇಕು ಎಂದು ಸುಪ್ರೀಂ ಕೋರ್ಟ್‌ನ ಮಾಜಿ ನ್ಯಾಯಾಧೀಶ ಹಾಗೂ ಪ್ರೆಸ್ ಕೌನ್ಸಿಲ್ ಆಫ್ ಇಂಡಿಯಾದ ಮಾಜಿ ಅಧ್ಯಕ್ಷ ನ್ಯಾ.ಮಾರ್ಕಂಡೇಯ ಕಾಟ್ಜು ಅಭಿಪ್ರಾಯಪಟ್ಟಿದ್ದಾರೆ.

ಶನಿವಾರ ವಸಂತ ನಗರದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಫಾಲ್ಕನ್ ಸಮೂಹ ಶಿಕ್ಷಣ ಸಂಸ್ಥೆಗಳ ವತಿಯಿಂದ ಆಯೋಜಿಸಿದ್ದ ಯುವ ಸಾಧಕರ ಶೃಂಗ ಸಮಾವೇಶದಲ್ಲಿ ಮಾತನಾಡಿದ ಅವರು, ಜಾತಿ ಮತ್ತು ಧರ್ಮಾಧಾರಿತ ಪ್ರಜಾಪ್ರಭುತ್ವ ನಮ್ಮ ದೇಶದಲ್ಲಿದೆ ಎಂದರು.

ನಮ್ಮ ದೇಶದ ಚುನಾವಣೆ ವ್ಯವಸ್ಥೆಯು ಬೇಸರ ಉಂಟು ಮಾಡುತ್ತಿದ್ದು, ಶೇ.90ರಷ್ಟು ಜನರು ತಾವು ವೋಟ್ ಮಾಡುವ ಅಭ್ಯರ್ಥಿಗಳ ಹಿನ್ನೆಲೆಯನ್ನು ಪರಿಶೀಲಿಸುತ್ತಿಲ್ಲ. ಅಭ್ಯರ್ಥಿಗಳು ಒಳ್ಳೆಯವರೇ-ಕೆಟ್ಟವರೇ, ಅಕ್ಷರಸ್ಥರೇ-ಅನಕ್ಷರಸ್ಥರೇ ಅಥವಾ ಕ್ರಿಮಿನಲ್ ಹಿನ್ನೆಲೆ ಹೊಂದಿದ್ದಾರೆಯೇ ಎಂದು ಮತದಾರರು ಪರಿಶೀಲಿಸುತ್ತಿಲ್ಲ. ಬದಲಾಗಿ ಮತದಾರರು ಅಭ್ಯರ್ಥಿಗಳ ಜಾತಿ, ಧರ್ಮವನ್ನು ಮಾತ್ರ ಪರಿಗಣನೆಗೆ ತೆಗೆದುಕೊಳ್ಳುತ್ತಿದ್ದಾರೆ. ಹೀಗಾಗಿ ಇಂದು ಸಂಸತ್ತು ಹಾಗೂ ರಾಜ್ಯ ಶಾಸಕಾಂಗಗಳಲ್ಲಿ ಕ್ರಿಮಿನಲ್‌ಗಳು ಸದಸ್ಯರಾಗಿದ್ದಾರೆ ಎಂದು ಅವರು ಬೇಸರ ವ್ಯಕ್ತಪಡಿಸಿದರು.

ಈ ದೇಶದಲ್ಲಿ ಯಾವಾಗಲೂ ಚುನಾವಣೆಗಳು ನಡೆಯುತ್ತಿರುತ್ತವೆ. ಭಾರತದಲ್ಲಿ 28 ರಾಜ್ಯಗಳು ಮತ್ತು ಎಂಟು ಕೇಂದ್ರಾಡಳಿತ ಪ್ರದೇಶಗಳು ಇವೆ. ಭಾರತದ ಯಾವುದಾರರೂ ಒಂದು ಭಾಗದಲ್ಲಿ ಚುನಾವಣೆ ನಡೆಯುತ್ತಿರುತ್ತದೆ ಅಥವಾ ಚುನಾವಣೆಗೆ ಸಿದ್ಧತೆಗಳು ನಡೆಯುತ್ತಿರುತ್ತವೆ. ಈ ಚುನಾವಣೆಗಳನ್ನು ಗೆಲ್ಲಲು ಕೋಮು ಧ್ರುವೀಕರಣ, ದ್ವೇಷವನ್ನು ಹರಡಲಾಗುತ್ತದೆ ಎಂದು ಅವರು ಹೇಳಿದರು.

ನಮ್ಮ ದೇಶದಲ್ಲಿ ಯೋಗ ದಿನಾಚಾರಣೆ ಮಾಡಲಾಗುತ್ತಿದೆ. ಜನರು ಊಟಕ್ಕಾಗಿ, ರೊಟ್ಟಿಗಾಗಿ ಪರದಾಡುತ್ತಿದ್ದಾರೆ. ಆದರೆ ನಮ್ಮ ಕೇಂದ್ರ ಮತ್ತು ರಾಜ್ಯ ಸರಕಾರಗಳು ಹಸಿದವರಿಗೆ ಯೋಗ ಮಾಡು ಎಂದು ಹೇಳುತ್ತಿವೆ. ‘ಉದ್ಯೋಗ ಇಲ್ಲವೇ, ಹಾಗಾದರೆ, ನೀನು ಯೋಗ ಮಾಡು’ ಎಂದು ಹೇಳುತ್ತಿವೆ ಎಂದು ಮಾರ್ಕಂಡೇಯ ಕಾಟ್ಜು ಹೇಳಿದರು.

ಇದೇ ವೇಳೆ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದವರನ್ನು ಸನ್ಮಾನಿಸಲಾಯಿತು. ಮುಖ್ಯಮಂತ್ರಿಯ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಸಚಿವ ರಹೀಂ ಖಾನ್, ಶಾಸಕ ರಿಝ್ವಾನ್ ಅರ್ಶದ್, ಮಾಜಿ ಲೋಕಾಯುಕ್ತ ಎನ್. ಸಂತೋಷ್ ಹೆಗ್ಡೆ, ಕೆಪಿಸಿಸಿಯ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಮನ್ನಾನ್ ಸೇಠ್, ಫಾಲ್ಕನ್ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಅಬ್ದುಲ್ ಸುಭಾನ್ ಮತ್ತಿತರರು ಉಪಸ್ಥಿತರಿದ್ದರು.

ಚೀನಾದಲ್ಲಿ ಪ್ರಜಾಪ್ರಭುತ್ವ ಇಲ್ಲ. ಆದರೂ ಕೈಗಾರೀಕರಣ, ಆಧುನೀಕರಣದಿಂದಾಗಿ ಶಕ್ತಿಯುತ ದೇಶವಾಗಿದೆ. ಆದರೆ ನಮ್ಮ ದೇಶದಲ್ಲಿ ಪ್ರಜಾಪ್ರಭುತ್ವವಿದ್ದು, ರಾಜಕಾರಣಿಗಳು ರಾಮಮಂದಿರಗಳನ್ನು ಕಟ್ಟುವ ಮನಸ್ಥಿತಿಯನ್ನು ಹೊಂದಿದ್ದಾರೆ. ಇಂತಹದ್ದೇ ನಮ್ಮ ರಾಜಕಾರಣಿಗಳ ಗುರಿ ಆಗಿರುತ್ತದೆ. ಇದೇ ಚೀನಾ ಮತ್ತು ಭಾರತದ ರಾಜಕಾರಣಿಗಳಿಗೆ ಇರುವ ವ್ಯತ್ಯಾಸ.

-ನ್ಯಾ. ಮಾರ್ಕಂಡೇಯ ಕಾಟ್ಜು, ಸುಪ್ರೀಂ ಕೋರ್ಟ್‌ನ ಮಾಜಿ ನ್ಯಾಯಾಧೀಶ.

ಅರ್ಧದಷ್ಟು ನ್ಯಾಯಾಧೀಶರು ಭ್ರಷ್ಟರು

ನಮ್ಮ ದೇಶದ ನ್ಯಾಯಾಂಗ ವ್ಯವಸ್ಥೆ ವಿಫಲವಾಗಿದೆ. ಒಂದು ಪ್ರಕರಣ ಅಂತ್ಯವಾಗಲು 25 ವರ್ಷ ಸಮಯ ತೆಗೆದುಕೊಳ್ಳಲಾಗುತ್ತಿದೆ. ಅರ್ಧದಷ್ಟು ನ್ಯಾಯಾಧೀಶರು ಭ್ರಷ್ಟರಾಗಿದ್ದಾರೆ. ಇಂತಹ ವ್ಯವಸ್ಥೆಯಲ್ಲಿ ಕೋರ್ಟ್‌ಗಳ ಅವಶ್ಯಕತೆ ಏನಿದೆ? ಕೋರ್ಟ್‌ಗಳನ್ನು ಮುಚ್ಚುವುದೇ ಒಳ್ಳೆಯದಲ್ಲವೇ ಎಂದು ನ್ಯಾ.ಮಾರ್ಕಂಡೇಯ ಕಾಟ್ಜು ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X