Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ನಕಲಿ ವಹಿವಾಟಿಗೆ ತಡೆ, ಪ್ರತಿಯೊಬ್ಬರ...

ನಕಲಿ ವಹಿವಾಟಿಗೆ ತಡೆ, ಪ್ರತಿಯೊಬ್ಬರ ಆಸ್ತಿ ಮಾಲಕತ್ವಕ್ಕೆ ಬಲ: ಕೃಷ್ಣ ಬೈರೇಗೌಡ

ವಾರ್ತಾಭಾರತಿವಾರ್ತಾಭಾರತಿ29 Jun 2025 11:33 PM IST
share
ನಕಲಿ ವಹಿವಾಟಿಗೆ ತಡೆ, ಪ್ರತಿಯೊಬ್ಬರ ಆಸ್ತಿ ಮಾಲಕತ್ವಕ್ಕೆ ಬಲ: ಕೃಷ್ಣ ಬೈರೇಗೌಡ

ಬೆಂಗಳೂರು: ಕಷ್ಟಪಟ್ಚು ದುಡಿದ ಯಾರದ್ದೋ ಮನೆ-ಆಸ್ತಿಯನ್ನು ನಕಲಿ ದಾಖಲೆ ಸೃಷ್ಟಿಸಿ ಇನ್ಯಾರೋ ಕಬಳಿಸುವುದನ್ನು ತಪ್ಪಿಸಲು ಹಾಗೂ ಪ್ರತಿಯೊಬ್ಬರ ಆಸ್ತಿ ಮಾಲಕತ್ವಕ್ಕೆ ಬಲ ತುಂಬಬೇಕು ಎಂಬ ಏಕೈಕ ಉದ್ದೇಶದಿಂದಲೇ ಇ-ಖಾತಾ ವ್ಯವಸ್ಥೆಯನ್ನು ಜಾರಿಗೆ ತರಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅಭಿಪ್ರಾಯಪಟ್ಟರು.

ರವಿವಾರ ಬ್ಯಾಟರಾಯನಪುರ ಕ್ಷೇತ್ರದ ಸಹಕಾರ ನಗರ ಮೈದಾನದಲ್ಲಿ ಆಯೋಜಿಸಲಾಗಿದ್ದ ಇ-ಖಾತಾ ಅಭಿಯಾನದಲ್ಲಿ ಮಾತನಾಡಿದ ಅವರು, ‘ಪೇಪರ್ ಖಾತಾ ಚಾಲ್ತಿಯಲ್ಲಿದ್ದ ಸಂದರ್ಭದಲ್ಲಿ ಯಾರು ಬೇಕಾದರೂ ನಕಲಿ ಖಾತಾ ಸೃಷ್ಟಿಸುವ ಅಪಾಯ ಇತ್ತು. ನಕಲಿ ಖಾತಾಗಳ ಮೂಲಕ ಭೂ ಮಾಫಿಯಾದವರು ಹಲವರ ಆಸ್ತಿಗಳನ್ನು ಲಪಟಾಯಿಸಿರುವ ಉದಾಹರಣೆಗಳೂ ಸಾಕಷ್ಟಿವೆ’ ಎಂದರು.

ಮಧ್ಯಮ ವರ್ಗದ ಜನ ಕಷ್ಟಪಟ್ಟು ದುಡಿದು ನಗರ ಭಾಗದಲ್ಲಿ ಆಸ್ತಿ ಖರೀದಿಸಿದರೆ, ಅದನ್ನ ಮತ್ಯಾರೋ ನಕಲಿ ದಾಖಲೆ ಸೃಷ್ಟಿಸಿ ಕಬಳಿಸುವುದನ್ನು ಸರಕಾರ ನೋಡುತ್ತಾ ಕೂರಲಾಗದು. ಅಲ್ಲದೆ, ಇಂತಹ ಸಂದರ್ಭದಲ್ಲಿ ಆಸ್ತಿ ಮಾಲಕರು ತಮ್ಮ ಆಸ್ತಿಯನ್ನು ಉಳಿಸಿಕೊಳ್ಳಲು ಅಥವಾ ಮಾರಾಟ ಮಾಡಲು ಮಧ್ಯವರ್ತಿಗಳಿಗೆ ಲಕ್ಷಗಟ್ಟಲೆ ಹಣ ನೀಡಬೇಕಾದ ದುಸ್ಥಿತಿ ಇತ್ತು. ಇದೇ ಕಾರಣಕ್ಕೆ ಈ ಎಲ್ಲ ಸಮಸ್ಯೆಗಳಿಗೆ ಪೂರ್ಣ ವಿರಾಮ ಹಾಕುವ ನಿಟ್ಟಿನಲ್ಲಿ ಇ-ಖಾತಾ ವ್ಯವಸ್ಥೆಯನ್ನು ಜಾರಿಗೆ ತರಲಾಯಿತು ಎಂದು ಅವರು ತಿಳಿಸಿದರು.

ಒಮ್ಮೆ ಇ-ಖಾತಾ ಪಡೆದುಕೊಂಡರೆ ಆಸ್ತಿ ಮಾಲಕತ್ವಕ್ಕೆ ರಕ್ಷಣೆ ದೊರಕಲಿದೆ. ನಕಲಿ ವಹಿವಾಟು ಶಾಶ್ವತವಾಗಿ ಕೊನೆಗೊಳ್ಳಲಿದೆ. ಅಲ್ಲದೆ, ಭವಿಷ್ಯದಲ್ಲಿ ಆಸ್ತಿ ಮಾರಾಟ-ವಹಿವಾಟು ಸಂದರ್ಭದಲ್ಲಿ ಮಧ್ಯವರ್ತಿಗಳ ಹಾವಳಿಯನ್ನೂ ತಡೆಯಬಹುದಾಗಿದೆ ಎಂದು ಕೃಷ್ಣ ಬೈರೇಗೌಡ ಭರವಸೆ ನೀಡಿದರು.

ನಾವು ಇ-ಖಾತಾ ಜಾರಿಗೆ ತಂದಾಗ ಕೆಲವರು ಟೀಕಿಸಿದ್ದರು. ಇದರಿಂದ ಸರಕಾರದ ಆದಾಯ ಕಡಿತವಾಗುವ ಸಾಧ್ಯತೆ ಇದೆ ಎಂದು ಆರೋಪಿಸಿದ್ದರು. ಆದರೆ, ಸರಕಾರ ಇಂತಹ ಅಕ್ರಮ ವಹಿವಾಟಿನಿಂದ ಹಣ ಮಾಡಬೇಕಾದ ಅಗತ್ಯ ಇದೆಯಾ? ಎಂದು ಕೃಷ್ಣ ಬೈರೇಗೌಡ ಪ್ರಶ್ನಿಸಿದರು.

ಸುಳ್ಳು ಸುದ್ದಿಗಳ ವಿರುದ್ಧ ಅಸಮಾಧಾನ: ಬ್ಯಾಟರಾಯನಪುರ ಕ್ಷೇತ್ರದಲ್ಲಿ ಕಳೆದ 5 ತಿಂಗಳಲ್ಲಿ 150ಕ್ಕೂ ಹೆಚ್ಚು ಇ-ಖಾತಾ ಅಭಿಯಾನ ನಡೆಸಲಾಗಿದೆ. ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಸ್ವಯಂ ಸೇವಕರು ತಮ್ಮ ಕೆಲಸ ಕಾರ್ಯ ಬಿಟ್ಟು 50 ಸಾವಿರ ಜನರಿಗೆ ಉಚಿತವಾಗಿ ಇ-ಖಾತಾ ಮಾಡಿಕೊಟ್ಟಿದ್ದಾರೆ. ಈ ಮೂಲಕ ರಾಜ್ಯದಲ್ಲೇ ಅತೀ ಹೆಚ್ಚು ಇ-ಖಾತಾ ವಿತರಿಸಿರುವ ಕ್ಷೇತ್ರ ಎಂಬ ಹೆಗ್ಗಳಿಕೆಗೆ ಬ್ಯಾಟರಾಯನಪುರ ಪಾತ್ರವಾಗಿದೆ. ಆದರೆ, ವಿಪಕ್ಷದ ಕೆಲವರು ಸಾಮಾಜಿಕ ಜಾಲತಾಣಗಳ ಮೂಲಕ ಈ ಬಗ್ಗೆಯೂ ಸುಳ್ಳುಸುದ್ದಿ ಹಬ್ಬಿಸುತ್ತಿರುವುದು ವಿಷಾದನೀಯ ಎಂದು ಅವರು ಬೇಸರ ವ್ಯಕ್ತಪಡಿಸಿದರು.

ಆಸ್ತಿ ಮಾಲಕರಿಂದ ಅವರ ಆಸ್ತಿ ಮಾಹಿತಿ ಪಡೆದು ಲಪಟಾಯಿಸುವುದು ಇ-ಖಾತಾ ಅಭಿಯಾನದ ಉದ್ದೇಶ ಎಂದು ಬ್ಯಾಟರಾಯನಪುರ ಕ್ಷೇತ್ರದ ಕೆಲ ವಿಪಕ್ಷ ನಾಯಕರು ಸಾಮಾಜಿಕ ಜಾಲತಾಣಗಳ ಮೂಲಕ ಸುಳ್ಳು ಸುದ್ದಿ ಹಬ್ಬಿಸಿದ್ದಾರೆ. ಬಿಜೆಪಿಗರಿಗಂತು ಸುಳ್ಳು ಸುದ್ದಿ ಹರಡುವುದು ಬಿಟ್ಟರೆ ಬೇರೇನೂ ಗೊತ್ತಿಲ್ಲ. ಆದರೆ, ಈ ಸುಳ್ಳನ್ನೂ ನಂಬುವ ಜನರ ಬಗ್ಗೆ ಏನೆಂದು ಹೇಳುವುದು? ಎಂದು ಕೃಷ್ಣ ಬೈರೇಗೌಡ ಖೇದ ವ್ಯಕ್ತಪಡಿಸಿದರು.

ಇ-ಖಾತಾ ಅಭಿಯಾನದಲ್ಲಿ ನಿರೀಕ್ಷೆಗೂ ಮೀರಿ ಸುಮಾರು 4 ಸಾವಿರಕ್ಕೂ ಅಧಿಕ ಜನ ಭಾಗವಹಿಸಿದ್ದರು. ಈ ಪೈಕಿ ಸುಮಾರು 1,500 ಜನಕ್ಕೆ ರವಿವಾರ ಸ್ಥಳದಲ್ಲೇ ಇ-ಖಾತಾ ನೀಡಲಾಯಿತು. ಅಭಿಯಾನ ನಾಳೆ(ಸೋಮವಾರ)ಯೂ ಮುಂದುವರೆಯಲಿದ್ದು, ಎಲ್ಲರಿಗೂ ಇ-ಖಾತಾ ನೀಡುವ ಬಗ್ಗೆ ಕೃಷ್ಣ ಬೈರೇಗೌಡ ಭರವಸೆ ನೀಡಿದರು.

ಮನೆ ಮನೆಗೆ ತೆರಳಿ ಇ-ಖಾತಾ ವಿತರಣೆ: ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಇ-ಖಾತಾ ಅಭಿಯಾನಕ್ಕೂ ಮುನ್ನ ಬ್ಯಾಟರಾಯನಪುರ ಕ್ಷೇತ್ರದಲ್ಲಿ ಮನೆ ಮನೆಗೆ ತೆರಳಿ ಇ-ಖಾತಾ ಡ್ರಾಫ್ಟ್ ವಿತರಿಸಿದರು. ಐದು ತಿಂಗಳಿನಿಂದ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಸ್ವಯಂ ಸೇವಕರ ತಂಡ ಬ್ಯಾಟರಾಯನಪುರ ಕ್ಷೇತ್ರದಲ್ಲಿ 50 ಸಾವಿರಕ್ಕೂ ಹೆಚ್ಚು ಜನರಿಗೆ ಉಚಿತವಾಗಿ ಮನೆ ಮನೆಗೆ ತೆರಳಿ ಇ-ಖಾತಾ ಮಾಡಿಕೊಟ್ಟಿರುವುದು ವಿಶೇಷ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X