Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಸರಕಾರಿ ಪ್ರಾಥಮಿಕ ಶಾಲೆಗಳಲ್ಲಿ ಆಂಗ್ಲ...

ಸರಕಾರಿ ಪ್ರಾಥಮಿಕ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ತೆರೆಯುವುದಕ್ಕೆ ವಿರೋಧ: ಡಾ.ಬಿಳಿಮಲೆ

ವಾರ್ತಾಭಾರತಿವಾರ್ತಾಭಾರತಿ4 July 2025 8:09 PM IST
share
ಸರಕಾರಿ ಪ್ರಾಥಮಿಕ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ತೆರೆಯುವುದಕ್ಕೆ ವಿರೋಧ: ಡಾ.ಬಿಳಿಮಲೆ

ಬೆಂಗಳೂರು : ರಾಜ್ಯಾದ್ಯಂತ 4,134 ಸರಕಾರಿ ಪ್ರಾಥಮಿಕ ಶಾಲೆಗಳಲ್ಲಿ ಹೊಸದಾಗಿ ಆಂಗ್ಲ ಮಾಧ್ಯಮ ತರಗತಿಗಳನ್ನು ತೆರೆಯುವ ರಾಜ್ಯ ಸರಕಾರದ ನಿರ್ಧಾರಕ್ಕೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ.ಪುರುಷೋತ್ತಮ ಬಿಳಿಮಲೆ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.

ಶುಕ್ರವಾರ ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ, ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹಾಗೂ ಸರಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಅವರಿಗೆ ಪತ್ರ ಬರೆದಿರುವ ಅವರು, ಸಂವಹನಕ್ಕಾಗಿ ತಾಯ್ನುಡಿಯನ್ನು ಹೊರತಾದ ಯಾವುದೇ ಭಾಷೆಗಳನ್ನು ಕಲಿಯುವುದು ತಪ್ಪಲ್ಲ, ಆದರೆ ಅಂತಹ ಪ್ರಯತ್ನಗಳು ನಮ್ಮ ಮಾತೃಭಾಷೆಯನ್ನೇ ಮೂಲೆಗುಂಪಾಗಿಸುವ ಕಾರ್ಯಕ್ಕೆ ಪ್ರಾಧಿಕಾರ ಸಾಕ್ಷಿಯಾಗಬಯಸುವುದಿಲ್ಲ ಎಂದು ಹೇಳಿದ್ದಾರೆ.

ನಾಡಿನ ಅಭಿವೃದ್ಧಿ ಎನ್ನುವುದು ಸಂಪೂರ್ಣವಾಗಿ ಅಲ್ಲಿನ ಶಿಕ್ಷಣ ವ್ಯವಸ್ಥೆಯನ್ನು ಅವಲಂಬಿಸಿದೆ. ಸಾಮಾಜಿಕ, ಆರ್ಥಿಕ, ರಾಜಕೀಯ ಹಾಗೂ ಸಾಂಸ್ಕೃತಿಕ ಬದುಕಿಗೆ ಕಲಿಕಾ ವ್ಯವಸ್ಥೆಯೇ ನಿರ್ಣಾಯಕ ಪಾತ್ರವನ್ನು ಹೊಂದಿರುತ್ತದೆ. ವಿಶ್ವದ್ಯಾಂತ ನಡೆಸಿರುವ ಅಧ್ಯಯನಗಳಲ್ಲಿ ಪ್ರಾರಂಭಿಕವಾಗಿ ತಾಯ್ನುಡಿಯನ್ನು ಪ್ರಭುತ್ವದ ಮಟ್ಟಕ್ಕೆ ಕಲಿಸುವುದೇ ಜ್ಞಾನಾರ್ಜನೆಯ ದೃಷ್ಠಿಯಿಂದ ಬುನಾದಿ ಎಂಬುದನ್ನು ನಿರೂಪಿಸಿವೆ ಎಂದು ಹೇಳಿದ್ದಾರೆ.

2013-18ರಲ್ಲಿ ಸರಕಾರವು ಮಕ್ಕಳ ಹಕ್ಕು ಕಾಯ್ದೆಯ ಪ್ರಕರಣ 29 (ಎಫ್)ಗೆ ತಿದ್ದುಪಡಿ ಮಾಡುವ ಮಸೂದೆಯನ್ನು ಸದನಗಳಲ್ಲಿ ಮಂಡಿಸಿ ರಾಷ್ಟ್ರಪತಿಯವರ ಅಂಗೀಕಾರಕ್ಕೆ ಕಳುಹಿಸಿದ್ದು, ಅದರಂತೆ ಕನಿಷ್ಟ 8ನೇ ತರಗತಿವರೆಗೆ ಶಿಕ್ಷಣ ಮಾಧ್ಯಮ ಮಾತೃಭಾಷೆಯಲ್ಲಿರಬೇಕಾಗುತ್ತದೆ ಎಂದು ತಿಳಿಸಿದ್ದಾರೆ.

ಕನ್ನಡ ಅಭಿವೃದ್ಧಿ ಪ್ರಾಧಿಕಾರ 2017ರಲ್ಲಿ ಸಲ್ಲಿಸಿರುವ ಸರಕಾರಿ ಶಾಲೆಗಳ ಸಬಲೀಕರಣ ವರದಿಯನ್ನು ಕೂಡಲೇ ಜಾರಿಗೊಳಿಸಬೇಕು. ಕನ್ನಡವನ್ನು ಪ್ರಥಮ ಅಥವಾ ದ್ವಿತೀಯ ಭಾಷೆಯನ್ನಾಗಿ ಕಲಿಸಲು ರೂಪಿಸಿರುವ ಕನ್ನಡ ಕಲಿಕಾ ಅಧಿನಿಯಮ 2015ಅನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಮುಂದಾಗಬೇಕು. ಅಲ್ಲದೇ, ಸರಕಾರಿ, ಅನುದಾನಿತ ಮತ್ತು ಅನುದಾನ ರಹಿತ ಕನ್ನಡ ಶಾಲೆಗಳ ಸಬಲೀಕರಣಕ್ಕಾಗಿ ಒಂದು ಪ್ರತ್ಯೇಕ ಪ್ರಾಧಿಕಾರವನ್ನು ರಚಿಸಿ ಸರಕಾರವು ಈ ಶಾಲೆಗಳ ಬೆಂಬಲಕ್ಕೆ ನಿಲ್ಲಬೇಕು ಎಂದು ಆಗ್ರಹಿಸಿದ್ದಾರೆ.

ದ್ವಿಭಾಷಾ ನೀತಿ ಅನುಷ್ಠಾನಕ್ಕೆ ಪ್ರಯತ್ನ: ಕನ್ನಡ ಅಭಿವೃದ್ಧಿ ಪ್ರಾಧಿಕಾರ ರಾಜ್ಯದಲ್ಲಿ ದ್ವಿಭಾಷಾ ನೀತಿಯ ಅಗತ್ಯವನ್ನು ಪ್ರತಿಪಾದಿಸಿದ್ದು, ತನ್ನ ನಿರ್ಧಾರವನ್ನು ಎಲ್ಲ ವೇದಿಕೆಗಳಲ್ಲಿ ಸ್ಪಷ್ಟಪಡಿಸಿದೆ. ರಾಜ್ಯ ಶಿಕ್ಷಣ ನೀತಿ ನಿರೂಪಣಾ ಪ್ರಕ್ರಿಯೆಯಲ್ಲಿಯೂ ಪ್ರಾಧಿಕಾರವು ಇದೇ ಸಲಹೆಯನ್ನು ನೀಡಿದ್ದು, ಜುಲೈ ಅಂತ್ಯಕ್ಕೆ ಸಲ್ಲಿಕೆಯಾಗುವ ಶಿಕ್ಷಣ ನೀತಿಯ ವರದಿಯನ್ನು ಕಾಯುತ್ತಿದ್ದೇವೆ. ವರದಿಯ ಸಂಪೂರ್ಣ ಅಧ್ಯಯನವನ್ನು ನಡೆಸಿ ರಾಜ್ಯದಲ್ಲಿ ದ್ವಿಭಾಷಾ ನೀತಿಯ ಅನುಷ್ಠಾನಕ್ಕೆ ಸಾರ್ವಜನಿಕ ಒಮ್ಮತವನ್ನು ಮೂಡಿಸುವಲ್ಲಿ ಪ್ರಾಧಿಕಾರವು ಪ್ರಾಮಾಣಿಕ ಪ್ರಯತ್ನವನ್ನು ಮಾಡಲಿದೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ.ಪುರುಷೋತ್ತಮ ಬಿಳಿಮಲೆ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X