Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಭಾರತ ಜಾಗತಿಕ ತಂತ್ರಜ್ಞಾನ ಕೇಂದ್ರವಾಗುವ...

ಭಾರತ ಜಾಗತಿಕ ತಂತ್ರಜ್ಞಾನ ಕೇಂದ್ರವಾಗುವ ಗುರಿ ಹೊಂದಿದೆ : ಕೇಂದ್ರ ಸಚಿವ ಪ್ರಿಯೂಷ್ ಗೋಯಲ್

ವಾರ್ತಾಭಾರತಿವಾರ್ತಾಭಾರತಿ5 July 2025 9:23 PM IST
share
ಭಾರತ ಜಾಗತಿಕ ತಂತ್ರಜ್ಞಾನ ಕೇಂದ್ರವಾಗುವ ಗುರಿ ಹೊಂದಿದೆ : ಕೇಂದ್ರ ಸಚಿವ ಪ್ರಿಯೂಷ್ ಗೋಯಲ್

ಬೆಂಗಳೂರು : ನಾವೀನ್ಯತೆಯ ಸಂಸ್ಕೃತಿ ಉತ್ತೇಜನ ಹಾಗೂ ಪ್ರತಿಭೆಗಳನ್ನು ಆಕರ್ಷಿಸುವ ಮೂಲಕ ಭಾರತವು ಜಾಗತಿಕ ತಂತ್ರಜ್ಞಾನ ಕೇಂದ್ರವಾಗುವ ಗುರಿ ಹೊಂದಿದೆ ಎಂದು ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪಿಯೂಷ್ ಗೋಯಲ್ ಹೇಳಿದರು.

ಶನಿವಾರ ನಗರದ ಖಾಸಗಿ ಹೊಟೇಲ್‍ನಲ್ಲಿ ಐಐಟಿ ಮದ್ರಾಸ್‍ನ ಸಂಗಮ್ 2025 ಜಾಗತಿಕ ಅನ್ವೇಷಣೆ ಮತ್ತು ಹಳೆಯ ವಿದ್ಯಾರ್ಥಿಗಳ ಶೃಂಗಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಭಾರತವನ್ನು 2047ರೊಳಗಾಗಿ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ರೂಪಿಸಲು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ದೃಷ್ಟಿಕೋನವನ್ನು ಹೊಂದಿದೆ. ಅದರಂತೆ, ಅಭಿವೃದ್ಧಿಶೀಲ ಭಾರತದ ಸಂಕಲ್ಪ, ವಸಾಹತು ಚಿಂತನೆಗೆ ವಿದಾಯ, ಇತಿಹಾಸ ಹಾಗೂ ಸಂಸ್ಕೃತಿಗೆ ಮೌಲ್ಯ, ರಾಷ್ಟ್ರದ ಏಕತೆ ಹಾಗೂ ಅಖಂಡತೆಗೆ ಬದ್ಧತೆ ಮತ್ತು ಸಮಗ್ರ ಪಾಲ್ಗೊಳ್ಳುವಿಕೆ ನಮ್ಮ ಬದ್ಧತೆಗಳಾಗಿವೆ ಎಂದು ಪಿಯೂಷ್ ಗೋಯಲ್ ಹೇಳಿದರು.

ದಶಕದ ಹಿಂದೆ ಭಾರತ ಹಿಂದುಳಿದ ಆರ್ಥಿಕತೆಗಳಲ್ಲಿ ಒಂದಾಗಿತ್ತು. ಆದರೆ, ಕಳೆದ 11 ವರ್ಷಗಳಲ್ಲಿ ಪ್ರಧಾನಿ ಮೋದಿ ಹಲವು ಮಹತ್ವದ ಕಾರ್ಯಕ್ರಮಗಳ ಮೂಲಕ ಈ ತಡೆಗೋಡೆಯನ್ನು ದಾಟಿದರು. ಮೇಕ್ ಇನ್ ಇಂಡಿಯಾ, ವೋಕಲ್ ಫಾರ್ ಲೋಕಲ್, ಲೋಕಲ್ ಟು ಗ್ಲೋಬಲ್, ಸ್ಟಾರ್ಟ್ ಅಪ್ ಇಂಡಿಯಾ, ಡಿಜಿಟಲ್ ಇಂಡಿಯಾ, ಸ್ವಚ್ಛ ಭಾರತ ಮಿಷನ್, ಜಲ್ ಜೀವನ್ ಮಿಷನ್ ಮುಂತಾದ ಕಾರ್ಯಕ್ರಮಗಳು ಒಂದು ಹಾರದ ಮುತ್ತುಗಳಿದ್ದಂತೆ. ಒಂದು ಮುತ್ತು ಕಡಿಮೆಯಾದರೂ, ಆ ಹಾರ ಸಂಪೂರ್ಣವಾಗದು ಎಂದು ಅವರು ಪ್ರತಿಪಾದಿಸಿದರು.

ಸ್ಥಿರತೆ, ಹವಾಮಾನ ಬದಲಾವಣೆಯ ವಿರುದ್ಧ ಹೋರಾಟ, ಎಲ್ಲರಿಗೂ ಉತ್ತಮ ಗುಣಮಟ್ಟದ ಜೀವನದ ಅವಕಾಶ ನೀಡುವ ಗುರಿ, ಇವುಗಳ ಸಮ್ಮಿಲಿತ ಜೋಡಣೆಯೆ ಭಾರತದ ಬೆಳವಣಿಗೆಯ ಇಂದಿನ ಪಯಣವನ್ನು ವಿವರಿಸುತ್ತವೆ. ವಿಶ್ವದ 11ನೇ ಅತಿದೊಡ್ಡ ಜಿಡಿಪಿಯಿಂದ ಇಂದು (2025ರಲ್ಲಿಗೆ) 5ನೇ ಸ್ಥಾನಕ್ಕೇರಿದ ಭಾರತ, ಈ ವರ್ಷಾಂತ್ಯ ದೊಳಗೆ 4ನೇ ಸ್ಥಾನಕ್ಕೇರಲಿದೆ ಮತ್ತು 2027ರ ಹೊತ್ತಿಗೆ 3ನೇ ಅತಿದೊಡ್ಡ ಆರ್ಥಿಕತೆ ಆಗಬಹುದು ಎಂದು ಪ್ರಿಯೂಷ್ ಗೋಯಲ್ ವಿಶ್ವಾಸ ವ್ಯಕ್ತಪಡಿಸಿದರು.

ಹಿಂದಿನ ಬಜೆಟ್‍ನಲ್ಲಿ ಆಳವಾದ ತಂತ್ರಜ್ಞಾನ ಪರಿಸರ ವ್ಯವಸ್ಥೆ ಅಭಿವೃದ್ಧಿಪಡಿಸಲು 10 ಸಾವಿರ ಕೋಟಿ ರೂ. ಹಂಚಿಕೆ ಮಾಡಲಾಗಿತ್ತು ಎಂದು ಗಮನ ಸೆಳೆದ ಅವರು, ನಾವೀನ್ಯತೆ ಮತ್ತು ಉದಯೋನ್ಮುಖ ತಂತ್ರಜ್ಞಾನಗಳನ್ನು ಮತ್ತಷ್ಟು ಬೆಂಬಲಿಸಲು ಈಗ ಹೆಚ್ಚುವರಿಯಾಗಿ 10 ಸಾವಿರ ಕೋಟಿ ರೂ.ಮಂಜೂರು ಮಾಡಲಾಗಿದೆ ಎಂದು ಹೇಳಿದರು.

ಕೇಂದ್ರ ಸಚಿವ ಸಂಪುಟ ಸಭೆಯು ಇತ್ತೀಚೆಗೆ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಗೆ 1 ಲಕ್ಷ ಕೋಟಿ ರೂ.ಅನುಮೋದಿಸಿದೆ. ತಾಂತ್ರಿಕ ನಾವೀನ್ಯತೆ ಹೆಚ್ಚಿಸಲು ಇದನ್ನು 50 ವರ್ಷಗಳಲ್ಲಿ ಶೂನ್ಯ ಬಡ್ಡಿದರದ ಸಾಲವಾಗಿ ನೀಡಲಾಗುವುದು ಎಂದು ಅವರು ತಿಳಿಸಿದರು.

ಭಾರತದ ಯುವಜನಾಂಗದ ಆಶಯಗಳು ಮತ್ತು ಇಚ್ಛೆಗಳು ಇಂದಿನ ವಿಶ್ವದೊಂದಿಗೆ ಹೋಲಿಸಿದರೆ ಹೆಚ್ಚು ಪ್ರಬಲವಾಗಿದೆ. ಇದು ನಾವೀನ್ಯತೆ, ಸಂಶೋಧನೆ, ಸ್ಟಾರ್ಟ್‍ಅಪ್ ಪರಿಸರ ವ್ಯವಸ್ಥೆ, ತಂತ್ರಜ್ಞಾನ ಮತ್ತು ಭವಿಷ್ಯಯೋಗ್ಯ ಭಾರತವನ್ನು ರೂಪಿಸುತ್ತಿದೆ. ಎಐ, ಮೆಷಿನ್ ಕಲಿಕೆ, ದತ್ತಾಂಶಗಳ ವಿಮರ್ಶೆ ಮೊದಲಾದ ಕ್ಷೇತ್ರಗಳಲ್ಲಿ ಭಾರತ ಮುಂಚೂಣಿಯಲ್ಲಿದೆ ಎಂದು ಪಿಯೂಷ್ ಗೋಯಲ್ ಹೇಳಿದರು.

ಕೋವಿಡ್ ಸಮಯದಲ್ಲಿ ಭಾರತ ಕಾರ್ಯಗಳನ್ನು ಉಲ್ಲೇಖಿಸಿದ ಅವರು, ನಾವು ಪ್ರತಿಯೊಂದು ವಿಷಮ ಪರಿಸ್ಥಿತಿಯನ್ನು ಅವಕಾಶವಾಗಿ ಕಾಣುತ್ತೇವೆ. ಕೋವಿಡ್ ಸಂದರ್ಭದಲ್ಲಿ ಭಾರತದಲ್ಲಿ ಪಿಪಿಇ ಕಿಟ್‍ಗಳ ಕೊರತೆಯಾಗಿತ್ತು. ಆದರೆ, ಮೋದಿಯವರ ಮಾರ್ಗದರ್ಶನದಲ್ಲಿ ಡಿಆರ್‍ಡಿಒ, ಇಸ್ರೋ ಹಾಗೂ ಎಲ್ಲ ಕೈಗಾರಿಕೆಗಳು ಒಟ್ಟಾಗಿ ಕೆಲಸ ಮಾಡಿ, ಭಾರತವನ್ನು ಪಿಪಿಇ ಕಿಟ್ ಗಳ ಉತ್ಪಾದನೆಯಲ್ಲಿ ಎರಡನೇ ಅತಿದೊಡ್ಡ ದೇಶವನ್ನಾಗಿ ರೂಪಿಸಿದವು ಎಂದು ಹೇಳಿದರು.

ಅಷ್ಟೇ ಅಲ್ಲದೇ ನಾವು ಪಿಪಿಇ ಕಿಟ್‍ಗಳನ್ನು ಇತರ ದೇಶಗಳಿಗೂ ಸರಬರಾಜು ಮಾಡಿದೆವು. ಇದೇ ದಿಸೆಯಲ್ಲಿ ಭಾರತ 100 ಹಿಂದುಳಿದ ರಾಷ್ಟ್ರಗಳಿಗೆ ಉಚಿತವಾಗಿ ಕೋವಿಡ್ ಲಸಿಕೆಯನ್ನು ಪೂರೈಸಿತು ಎಂದು ಹೇಳಿದ ಅವರು, ಅಮೃತ ಕಾಲದಲ್ಲಿ ತಾಯ್ನಾಡಿಗೆ ಸೇವೆ ಸಲ್ಲಿಸೋಣ, ಆತ್ಮನಿರ್ಭರ ಭಾರತ ನಿರ್ಮಿಸಿ, ಭಾರತವನ್ನು ಜಾಗತಿಕ ಶಕ್ತಿಯಾಗಿ ರೂಪಿಸೋಣ ಎಂದು ಯುವ ಸಮುದಾಯಕ್ಕೆ ಕರೆ ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X