ಸಾಗರದ ಶರಾವತಿ ಹಿನ್ನೀರಿನ ಸೇತುವೆಗೆ ಯಡಿಯೂರಪ್ಪ ಹೆಸರು ಇಡುವ ವಿಚಾರ | ಕೇಂದ್ರ, ರಾಜ್ಯ ಸರಕಾರಕ್ಕೆ ಹೈಕೋರ್ಟ್ ನೋಟಿಸ್

ಬೆಂಗಳೂರು : ಸಾಗರದ ಶರಾವತಿ ಹಿನ್ನೀರಿನ ಸೇತುವೆಗೆ ಹೆಸರಿಡುವ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ, ರಾಜ್ಯ ಸರಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿ ಆದೇಶಿಸಿದೆ.
ಮಾಜಿ ಸಿಎಂ ಯಡಿಯೂರಪ್ಪ ಹೆಸರು ಇಡಲು ಅನುಮತಿ ನೀಡವಂತೆ ಕೇಂದ್ರ ಸರಕಾರಕ್ಕೆ ನಿರ್ದೇಶನ ಕೋರಿ ಶಿವಮೊಗ್ಗದ ಕೆ.ಹರನಾಥರಾವ್ ಎಂಬವರು ರಿಟ್ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ಹೈಕೋರ್ಟ್ ಏಕಸದಸ್ಯ ಪೀಠ ವಿಚಾರಣೆ ನಡೆಸಿತು.
ಈ ವೇಳೆ ಅರ್ಜಿದಾರ ಪರ ವಕೀಲರು ಸೇತುವೆಗೆ ಬಿ.ಎಸ್.ಯಡಿಯೂರಪ್ಪ ಹೆಸರಿಡಲು ಮನವಿ ಮಾಡಲಾಗಿದೆ. ಈ ಮನವಿಯನ್ನು ಪರಿಗಣಿಸುವಂತೆ ಕೇಂದ್ರ ಸರಕಾರಕ್ಕೆ ನಿರ್ದೇಶನ ನೀಡಲು ನ್ಯಾಯಪೀಠಕ್ಕೆ ಮನವಿ ಮಾಡಿದರು.
ವಾದ ಆಲಿಸಿದ ಹೈಕೋರ್ಟ್ ನ್ಯಾಯಪೀಠ ಕೇಂದ್ರ, ರಾಜ್ಯ ಸರಕಾರಗಳಿಗೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿ, ವಿಚಾರಣೆಯನ್ನು ಜುಲೈ 17ಕ್ಕೆ ನಿಗದಿಪಡಿಸಿದೆ.
Next Story





