Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಕನ್ನಡದಲ್ಲಿ ಆರ್ಥಿಕ, ಸಮಾಜಶಾಸ್ತ್ರ...

ಕನ್ನಡದಲ್ಲಿ ಆರ್ಥಿಕ, ಸಮಾಜಶಾಸ್ತ್ರ ವಿಷಯಕ್ಕೆ ಸಂಬಂಧಪಟ್ಟ ಕೃತಿಗಳೇ ಕಡಿಮೆ : ಶಿವಸುಂದರ್

‘ಏಕಸ್ವಾಮ್ಯ ಖರೀದಿ ಬಂಡವಾಳಶಾಹಿ’, ‘ಏಕಸ್ವಾಮ್ಯ ಖರೀದಿ ಬಂಡವಾಳ’ ಕೃತಿಗಳ ಬಿಡುಗಡೆ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ12 July 2025 9:24 PM IST
share
ಕನ್ನಡದಲ್ಲಿ ಆರ್ಥಿಕ, ಸಮಾಜಶಾಸ್ತ್ರ ವಿಷಯಕ್ಕೆ ಸಂಬಂಧಪಟ್ಟ ಕೃತಿಗಳೇ ಕಡಿಮೆ : ಶಿವಸುಂದರ್

ಬೆಂಗಳೂರು : ಕನ್ನಡ ಸಾಹಿತ್ಯ ಹಲವಾರು ವಿಷಯಗಳಲ್ಲಿ ಮುಂದಿದೆ. ಜ್ಞಾನಪೀಠ ಪ್ರಶಸ್ತಿಗಳ ಮಾನದಂಡಗಳ ಆಧಾರದಲ್ಲಿ ನೋಡುವುದಾದರೆ ಬೇರೆ ಭಾಷೆಗಳಿಗಿಂತ ಸಾಂಸ್ಕೃತಿಕ, ಸಾಹಿತ್ಯಕವಾಗಿ ಮುಂದಿರುವ ಭಾಷೆಯಾಗಿದೆ. ಆದರೆ ನಿರ್ದಿಷ್ಟವಾಗಿ ಆರ್ಥಿಕ, ಸಮಾಜಶಾಸ್ತ್ರ ವಿಷಯಗಳಿಗೆ ಸಂಬಂಧಪಟ್ಟಂತೆ ಬೇರೆ ಭಾಷೆಗಳಿಗೆ ಹೋಲಿಸಿದರೆ ಕನ್ನಡದಲ್ಲಿ ಕೃತಿಗಳೇ ಕಡಿಮೆ ಎಂದು ಅಂಕಣಕಾರ ಶಿವಸುಂದರ್ ಅಭಿಪ್ರಾಯಪಟ್ಟಿದ್ದಾರೆ.

ಶನಿವಾರ ನಗರದ ಚಿತ್ರಕಲಾ ಪರಿಷತ್ತಿನಲ್ಲಿ ಆಕೃತಿ ಪುಸ್ತಕ ಹಾಗೂ ಜೀರುಂಡೆ ಪುಸ್ತಕ ಪ್ರಕಾಶನ ಹೊರತಂದಿರುವ ಲೇಖಕ ಅಶೋಕ್ ಕುಮಾರ್ ರಚಿಸಿರುವ ‘ಏಕಸ್ವಾಮ್ಯ ಖರೀದಿ ಬಂಡವಾಳಶಾಹಿ’, ‘ಏಕಸ್ವಾಮ್ಯ ಖರೀದಿ ಬಂಡವಾಳ’ ಕೃತಿಗಳ ಬಿಡುಗಡೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕನ್ನಡದಲ್ಲಿ ನಿರ್ದಿಷ್ಟವಾಗಿ ರಾಜಕೀಯ ಅರ್ಥಶಾಸ್ತ್ರಗಳಿಗೆ ಸಂಬಂಧಪಟ್ಟತೆ ಕನ್ನಡದಲ್ಲಿ ತೀರ ಕಡಿಮೆ. ಅದರಲ್ಲೂ ಮಾರ್ಕ್ಸ್‌ ವಾದಿ ರಾಜಕೀಯ ಅರ್ಥಶಾಸ್ತ್ರದ ಕೃತಿಗಳು ಇನ್ನೂ ಕಡಿಮೆ ಎಂದರು.

ಏಕಸ್ವಾಮ್ಯವು ಹಲವರು ಇರುವ ಕಡೆ ಕೆಲವರೇ ಆಗುತ್ತಾ, ಕೆಲವರು ಇರುವ ಕಡೆ ಒಬ್ಬರೇ ಆಗುತ್ತಾ ಮಾಲಕರು ಉತ್ಪಾದನೆ ಮಾಡುವ ಸರಕುಗಳಿಗೆ ಇಷ್ಟ ಬಂದಂತೆ ಬೆಲೆ ಏರಿಕೆ ಮಾಡುತ್ತಾರೆ. ಭಾರತ, ಚೀನಾ, ವಿಯೇಟ್ನಾಂ ಸೇರಿದಂತೆ ಮಧ್ಯ ಅಮೆರಿಕದ ಹಲವಾರು ದೇಶಗಳಲ್ಲಿ ದೊಡ್ಡ ಮಟ್ಟದಲ್ಲಿ ಶ್ರಮದ ಸುಳಿಗೆ ಆಗುತ್ತಿರುವುದು, ಅಮಾನುಷವಾದ ಪರಿಸ್ಥಿತಿಯಲ್ಲಿ ಜನ ದುಡಿಮೆ ಮಾಡುತ್ತಿರುವುದು ಗಾರ್ಮೆಂಟ್ಸ್ ಕ್ಷೇತ್ರದಲ್ಲಿ ಮತ್ತು ಸಿದ್ದ ಉಡುಪು ಕ್ಷೇತ್ರದಲ್ಲಿ ಎಂದು ಶಿವಸುಂದರ್ ಕಳವಳ ವ್ಯಕ್ತಪಡಿಸಿದರು.

ಮಾರ್ಕ್ಸ್‌ ವಾದ ಮತ್ತು ರಾಜಕೀಯ ಅರ್ಥಶಾಸ್ತ್ರ ಕಗ್ಗಂಟಾದ ರೀತಿಯಲ್ಲಿದೆ. ಮಾರ್ಕ್ಸ್‌ ವಾದದ ಕನ್ನಡ ಅನುವಾದವು ಇನ್ನಷ್ಟು ಕಠಿಣವಾಗಿದೆ. ಆದರೆ ಮಾರ್ಕ್ಸ್‌ವಾದ ತಿಳಿದುಕೊಳ್ಳುವುದು ಅತ್ಯಂತ ಅಗತ್ಯವಾದದ್ದು. ಅದರಲ್ಲೂ ಜಗತ್ತಿನ ಹಲವಾರು ಚಾರಿತ್ರಿಕ ವಿದ್ಯಮಾನಗಳನ್ನು ಅರ್ಥ ಮಾಡಿಕೊಂಡು ಬಂಡವಾಳಶಾಹಿ ವ್ಯವಸ್ಥೆ ಎಲ್ಲಿಂದ ಬಂತು, ಅದನ್ನು ಮುರಿಯುವುದು ಹೇಗೆ ಎನ್ನುವುದನ್ನು ಅರ್ಥ ಮಾಡಿಕೊಳ್ಳದೇ ಇದ್ದರೆ, ಗೆಲವು ಸಾಧಿಸುವುದು ಕಷ್ಟ ಎಂದು ಅವರು ನುಡಿದರು.

ಮಾರ್ಕ್ಸ್‌ವಾದದ ದೃಷ್ಟಿಯಿಂದ ಜಗತ್ತನ್ನು ನೋಡಿದಾಗ, ವಿಶ್ಲೇಷಣೆಗಳು ಹೇಗೆ ಶಕ್ತಿ ಕೊಡುತ್ತದೆ ಮತ್ತು ಬದಲಾವಣೆಯ ಬಗ್ಗೆ ಭರವಸೆ ಕೊಡುತ್ತದೆ ಎನ್ನುವುದಕ್ಕೆ ಈ ಪುಸ್ತಕಗಳೇ ಸಾಕ್ಷಿ. ಮಾರ್ಕ್ಸ್‌ವಾದಿ ಕಾರ್ಯಕರ್ತರಿಗೆ ಒಂದು ವಿಷಯವನ್ನು ಹೇಗೆ ನೋಡಬೇಕು ಎನ್ನುವದಕ್ಕೆ ಇದು ಮಾಕ್ರ್ಸಿಸ್ಟ್ ಟೂಲ್‍ಕಿಟ್ ಆಗಿದೆ ಎಂದು ಲೇಖಕ ಅಶೋಕ್ ಕುಮಾರ್ ಕೃತಿಗಳಲ್ಲಿ ತಿಳಿಸಿದ್ದಾರೆ ಎಂದು ಶಿವಸುಂದರ್ ಅಭಿನಂದಿಸಿದರು.

ಕಾರ್ಯಕ್ರಮದಲ್ಲಿ ಪತ್ರಕರ್ತ ದೊಡ್ಡಿಪಾಳ್ಯ ನರಸಿಂಹಮೂರ್ತಿ, ಲೇಖಕರಾದ ಡಾ.ಮಂಜುನಾಥ್ ಬಿ.ಆರ್., ನಟ ಚೇತನ್ ಅಹಿಂಸಾ, ಡಾ.ಟಿ.ಪದ್ಮಶ್ರೀ, ಡಾ.ಮಂಗಳಾ, ಆಕೃತಿ ಪ್ರಕಾಶನದ ಗುರುಪ್ರಸಾದ್, ಜೀರುಂಡೆ ಪ್ರಕಾಶನದ ಧನಂಜಯ್, ಸೇರಿದಂತೆ ಹಲವರು ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X