Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ನೂತನ ಕನಿಷ್ಠ ವೇತನ ಪದ್ದತಿ ಜಾರಿಗೊಳಿಸಿ...

ನೂತನ ಕನಿಷ್ಠ ವೇತನ ಪದ್ದತಿ ಜಾರಿಗೊಳಿಸಿ : ಸುಧಾಕರ್ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ13 July 2025 6:28 PM IST
share
ನೂತನ ಕನಿಷ್ಠ ವೇತನ ಪದ್ದತಿ ಜಾರಿಗೊಳಿಸಿ : ಸುಧಾಕರ್ ಆಗ್ರಹ

ಬೆಂಗಳೂರು : ಕಾರ್ಮಿಕರ ಜೀವನ ನಿರ್ವಹಣೆ ವೆಚ್ಚ ಹೆಚ್ಚಾಗಿದ್ದು ಹಳೆಯ ವೇತನ ಪದ್ಧತಿ ಮುಂದುವರಿಸುವುದು ಸೂಕ್ತವಲ್ಲ. ಆದುದರಿಂದ ಸರಕಾರ ಕೂಡಲೇ ನೂತನವಾಗಿ ಮಂಡನೆಯಾಗಿರುವ ಕನಿಷ್ಠ ವೇತನವನ್ನು ಜಾರಿಗೊಳಿಸಬೇಕು ಎಂದು ಸರಕಾರಿ ಹೊರಗುತ್ತಿಗೆ ನೌಕರರ ಸಂಘದ ರಾಜ್ಯಾಧ್ಯಕ್ಷ ಸುಧಾಕರ್ ಆಗ್ರಹಿಸಿದ್ದಾರೆ.

ರವಿವಾರ ನಗರದಲ್ಲಿ ಸರಕಾರಿ ಹೊರಗುತ್ತಿಗೆ ನೌಕರರ ಸಂಘದ ವತಿಯಿಂದ ಹಮ್ಮಿಕೊಂಡಿದ್ದ ಜಿಲ್ಲಾಧ್ಯಕ್ಷರುಗಳ ಜಾಗೃತಿ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಸರಕಾರಿ ಹೊರಗುತ್ತಿಗೆ ನೌಕರರು ಸೇವಾ ಭದ್ರತೆ ಇಲ್ಲದೆ ದುಡಿಯುತ್ತಿರುವುದರಿಂದ ದಿನನಿತ್ಯದ ಜೀವನ ನಿರ್ವಹಣೆ ಕಷ್ಟವಾಗಿದೆ. ಗುತ್ತಿಗೆ ಕಾರ್ಮಿಕರು ಖಾಯಂ ಸಿಬ್ಬಂದಿಯಂತೆಯೇ ಕೆಲಸ ಮಾಡುತ್ತಿದ್ದರೂ, ಇವರು ಎಲ್ಲ ಸೌಲಭ್ಯಗಳಿಂದ ದೂರ ಉಳಿಯುವಂತಾಗಿದೆ ಎಂದರು.

ಕನಿಷ್ಠ ವೇತನ ಕಾಯ್ದೆ 1948 ಯಂತೆ, ರಾಜ್ಯವು ಐದು ವರ್ಷಗಳಿಗೊಮ್ಮೆ ನಿಯಮಿತ ಮಧ್ಯಂತರದಲ್ಲಿ ಕನಿಷ್ಠ ವೇತನವನ್ನು ಪರಿಷ್ಕರಿಸಬೇಕು. ಒಂದು ವೇಳೆ ಸರಕಾರ ಕನಿಷ್ಠ ವೇತನವನ್ನು ಪರಿಷ್ಕರಿಸಲು ವಿಫಲವಾದರೆ ಅದು ಬಲವಂತದ ಕಾರ್ಮಿಕ ಪದ್ಧತಿಯಾಗಿರುತ್ತದೆ. ಅಷ್ಟೇ ಅಲ್ಲದೇ, ಸಂವಿಧಾನದ 21 ಮತ್ತು 23ನೇ ವಿಧಿಗಳ ಉಲ್ಲಂಘನೆಯಾಗುತ್ತದೆ ಎಂದು ಹೈಕೋರ್ಟ್ ಸ್ಪಷ್ಟವಾಗಿ ಹೇಳಿದೆ. ಕನಿಷ್ಠ ವೇತನವು ರಾಜಕೀಯ ಅನುಕೂಲತೆಯ ವಿಷಯವಲ್ಲ, ಅವು ಕಾರ್ಮಿಕರ ಮೂಲಭೂತ ಹಕ್ಕು ಎಂದು ಸುಧಾಕರ್ ಹೇಳಿದರು.

ನೂತನ ನಾಲ್ಕು ಕಾರ್ಮಿಕ ಸಂಹಿತೆಗಳನ್ನು ಹಿಂಪಡೆಯಬೇಕು ಮತ್ತು ಕೆಲಸದ ಭದ್ರತೆ, ವೇತನ ಭದ್ರತೆ ಹಾಗೂ ಸಾಮಾಜಿಕ ಭದ್ರತೆಯನ್ನು ಕಲ್ಪಿಸಲು ಸೂಕ್ತ ತಿದ್ದುಪಡಿಗಳನ್ನು ತರಬೇಕು. ಜೀತಪದ್ದತಿ ಜೀವಂತಗೊಳಿಸಿರುವ ಗುತ್ತಿಗೆ, ಹೊರಗುತ್ತಿಗೆ, ಫಿಕ್ಸೆಡ್ ಟರ್ಮ್ ಎಂಪ್ಲಾಯ್‍ಮೆಂಟ್ ಪದ್ದತಿ ರದ್ದುಗೊಳಿಸಿ, ಎಲ್ಲ ಕಾರ್ಮಿಕರನ್ನು ಖಾಯಂಗೊಳಿಸಬೇಕು. ಕಾರ್ಮಿಕರಿಗೆ ಕನಿಷ್ಠ ವೇತನವನ್ನು ಕೂಡಲೇ ಪರಿಷ್ಕರಿಸಿ 42 ಸಾವಿರ ರೂ.ಕನಿಷ್ಠ ವೇತನ ಘೋಷಿಸಬೇಕು ಎಂದು ಸುಧಾಕರ್ ಆಗ್ರಹಿಸಿದರು.

ಕಾರ್ಯಕ್ರಮದಲ್ಲಿ ಸಂಘದ ಪ್ರಧಾನ ಕಾರ್ಯದರ್ಶಿ ರಾಘವೇಂದ್ರ ರೆಡ್ಡಿ, ಕಾರ್ಯಾಧ್ಯಕ್ಷ ನಾಗಪ್ಪ, ವಕೀಲ ಮುನಿರಾಜ್, ಗುತ್ತಿಗೆದಾರರ ಸಂಘದ ಅಧ್ಯಕ್ಷ ಮಹಾಲಿಂಗಯ್ಯ, ಮಹಿಳಾ ಘಟಕದ ಅಧ್ಯಕ್ಷೆ ಅನಿತಾ ಸ್ವಾಮಿ, ಸಂಚಾಲಕ ಗಂಗಾಧರ್ ಸೇರಿದಂತೆ ಸರಕಾರಿ ಹೊರಗುತ್ತಿಗೆ ನೌಕರರ ಸಂಘದ ಜಿಲ್ಲಾಧ್ಯಕ್ಷರುಗಳು ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X