Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಕೋಮುವಾದಿ ಶಕ್ತಿಗಳು ಸಮಾಜವನ್ನು...

ಕೋಮುವಾದಿ ಶಕ್ತಿಗಳು ಸಮಾಜವನ್ನು ವಿಭಜಿಸುವ ಕೆಲಸ ಮಾಡುತ್ತಿವೆ : ಈಶ್ವರ್ ಖಂಡ್ರೆ

ವಾರ್ತಾಭಾರತಿವಾರ್ತಾಭಾರತಿ13 July 2025 10:53 PM IST
share
ಕೋಮುವಾದಿ ಶಕ್ತಿಗಳು ಸಮಾಜವನ್ನು ವಿಭಜಿಸುವ ಕೆಲಸ ಮಾಡುತ್ತಿವೆ : ಈಶ್ವರ್ ಖಂಡ್ರೆ

ಬೆಂಗಳೂರು : ದೇಶದೊಳಗೆ ಜಾತಿಯ ಹೆಸರಿನಲ್ಲಿ ಒಡೆದು ಆಳುವ ನೀತಿಯನ್ನು ಅನುಸರಿಸಲಾಗುತ್ತಿದ್ದು, ಕೋಮುವಾದಿ ಶಕ್ತಿಗಳು ಸಮಾಜವನ್ನು ವಿಭಜಿಸುವ ಕೆಲಸ ಮಾಡುತ್ತಿವೆ. ಇದು ದೇಶದ ಏಕತೆ ಮತ್ತು ಸಮಗ್ರತೆಗೆ ಮಾರಕವಾಗಿದೆ ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ಕಳವಳ ವ್ಯಕ್ತಪಡಿಸಿದ್ದಾರೆ.

ರವಿವಾರ ನಗರದ ಅಂಬೇಡ್ಕರ್ ಭವನದಲ್ಲಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಹಾಗೂ ನಾಗಪುರದ ಬುದ್ಧಿಸ್ಟ್ ಅಕಾಡೆಮಿ ಆಫ್ ಪರ್ಫಾರ್ಮಿಂಗ್ ಆರ್ಟ್ ಸಹಯೋಗದಲ್ಲಿ ಆಯೋಜಿಸಿದ್ದ ‘ಮಹಾನಾಯಕ ಸಾಮ್ರಾಟ್ ಅಶೋಕ’ ನಾಟಕ ಪ್ರದರ್ಶನದ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.

ಜಾತಿರಹಿತ ಸಮಸಮಾಜ ನಿರ್ಮಿಸುವುದಕ್ಕೆ ಬುದ್ಧ, ಬಸವ ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ಸೇರಿದಂತೆ ಅನೇಕ ಮಹಾನಾಯಕರು ಹೋರಾಡಿದರು. ಆದರೆ, ಇದುವರೆಗೂ ಸಾಧ್ಯವಾಗಿಲ್ಲ. ಇಂದಿಗೂ ಸಮಾಜದಲ್ಲಿ ಜಾತಿಯತೆ, ಮೂಢನಂಬಿಕೆ, ಅಸ್ಪೃಶ್ಯತೆ ಆಚರಣೆಯಲ್ಲಿದೆ ಎಂದು ಈಶ್ವರ್ ಖಂಡ್ರೆ ಹೇಳಿದರು.

ಸಾಮ್ರಾಟ ಅಶೋಕನ ಆಡಳಿತ ಕಾಲದಲ್ಲಿ ಎಲ್ಲ ಧರ್ಮಗಳನ್ನು ಗೌರವಿಸಲಾಗುತ್ತಿತ್ತು. ಅಶೋಕನ ತತ್ವ ಸಿದ್ಧಾಂತಗಳು ಇಂದಿಗೂ ಪ್ರಸ್ತುತವಾಗಿದ್ದು, ಇಂದಿನ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಇವುಗಳನ್ನು ಜಾರಿಗೊಳಿಸುವ ನಿಟ್ಟಿನಲ್ಲಿ ನಾವು ಕೆಲಸ ಮಾಡಬೇಕು ಎಂದು ಈಶ್ವರ್ ಖಂಡ್ರೆ ತಿಳಿಸಿದರು.

ದೇಶದಲ್ಲಿರುವ 140 ಕೋಟಿ ಜನ ಆರ್ಥಿಕವಾಗಿ, ಸಾಮಾಜಿಕವಾಗಿ, ಶೈಕ್ಷಣಿಕವಾಗಿ, ರಾಜಕೀಯವಾಗಿ ಸಬಲರಾದಾಗ ಮಾತ್ರ ನಮ್ಮ ದೇಶ ಬಲಾಢ್ಯವಾಗಲಿದೆ. ವಿಶೇಷವಾಗಿ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಗಳು, ಅಲ್ಪಸಂಖ್ಯಾತರು, ಮಹಿಳೆಯರು, ರೈತರು, ಕಾರ್ಮಿಕರ ಅಭಿವೃದ್ಧಿಗೆ ಒತ್ತು ನೀಡಬೇಕಿದೆ ಎಂದು ಈಶ್ವರ್ ಖಂಡ್ರೆ ಹೇಳಿದರು.

ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ.ಎಚ್.ಸಿ.ಮಹದೇವಪ್ಪ ಮಾತನಾಡಿ, ಕತ್ತಲೆಯನ್ನು ಓಡಿಸುವ ಶಕ್ತಿ ಬೌದ್ಧಧರ್ಮಕ್ಕೆ ಇದೆ. ಸಮಾಜದಲ್ಲಿ ಶಾಂತಿ, ಪ್ರೀತಿ, ಸಮಾನತೆ ಪ್ರಸಾರ ಮಾಡುವುದೇ ಬೌದ್ಧದಮ್ಮದ ಅನುಯಾಯಿಗಳ ಕರ್ತವ್ಯವಾಗಿದೆ ಎಂದರು. ಕಾರ್ಯಕ್ರಮದಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್‍ನ ರಾಜ್ಯ ಆಯುಕ್ತ ಪಿ.ಜಿ.ಆರ್.ಸಿಂಧ್ಯ, ದಸಂಸ ರಾಜ್ಯಾಧ್ಯಕ್ಷ ಡಿ.ಜಿ.ಸಾಗರ್, ದಸಂಸ ಸಂಚಾಲಕ ಅಣ್ಣಯ್ಯ, ಮಂಜುನಾಥ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X