Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಬೆಂಗಳೂರಿನ ರಸ್ತೆಗೆ ಸರೋಜಾದೇವಿ ಹೆಸರು :...

ಬೆಂಗಳೂರಿನ ರಸ್ತೆಗೆ ಸರೋಜಾದೇವಿ ಹೆಸರು : ಸಿಎಂ ಸಿದ್ದರಾಮಯ್ಯ

ವಾರ್ತಾಭಾರತಿವಾರ್ತಾಭಾರತಿ15 July 2025 7:18 PM IST
share
ಬೆಂಗಳೂರಿನ ರಸ್ತೆಗೆ ಸರೋಜಾದೇವಿ ಹೆಸರು : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಬಿ.ಸರೋಜಾದೇವಿ ಒಬ್ಬ ಮೇರು ನಟಿ ಆಗಿದ್ದು, ಪಂಚಭಾಷೆ ತಾರೆಯಾಗಿ ಕನ್ನಡ, ತಮಿಳು, ತೆಲುಗು ಹಿಂದಿ ಭಾಷೆಗಳಲ್ಲಿ ಪಾತ್ರಗಳನ್ನು ಮಾಡಿ ಸೈ ಎನಿಸಿಕೊಂಡಿದ್ದ ಅದ್ಭುತ ನಟಿ. ಅವರ ಹೆಸರನ್ನು ಬೆಂಗಳೂರಿನ ರಸ್ತೆವೊಂದಕ್ಕೆ ನಾಮಕರಣ ಮಾಡಲು ಗ್ರೇಟರ್ ಬೆಂಗಳೂರು ಪ್ರಾಧಿಕಾರದೊಂದಿಗೆ ಚರ್ಚಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಮಂಗಳವಾರ ಮಲ್ಲೇಶ್ವರಂನಲಿ ಸರೋಜದೇವಿ ಅವರ ಪ್ರಾರ್ಥಿವ ಶರೀರಕ್ಕೆ ಅಂತಿಮ ನಮನ ಸಲ್ಲಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸರೋಜಾದೇವಿಯವರ ಹೆಸರನ್ನು ಅವರು ವಾಸಿಸುತ್ತಿದ್ದ ರಸ್ತೆಗೆ ಇಡಬೇಕೆಂಬ ಆಸೆಯಿತ್ತು. ಈ ಬಗ್ಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದೊಂದಿಗೆ ಚರ್ಚಿಸುವುದಾಗಿ ಹೇಳಿದರು.

ಬಹುಭಾಷಾ ನಟಿ ಬಿ.ಸರೋಜಾದೇವಿ ಅವರ ನಿಧನ ಇಡೀ ಚಿತ್ರರಂಗಕ್ಕೆ ದೊಡ್ಡ ಆಘಾತವನ್ನುಂಟು ಮಾಡಿದೆ. ಚಿಕ್ಕವಯಸ್ಸಿನಲ್ಲಿಯೇ ಸಿನಿಮಾರಂಗವನ್ನು ಪ್ರವೇಶಿಸಿ ಏಳು ದಶಕಗಳ ಕಾಲ ಕಲಾವಿದೆಯಾಗಿದ್ದವರು. ಅಭಿನವ ಸರಸ್ವತಿ ಎಂಬ ಬಿರುದು ಚಿಕ್ಕವಯಸ್ಸಿಗೆ ದೊರೆತಿತ್ತು. ಎಲ್ಲ ಭಾಷೆಯ ಹೆಸರಾಂತ ನಟರೊಂದಿಗೆ ನಟಿಸಿದ್ದರು. ಸೂಪರ್ ಸ್ಟಾರ್‍ಗಳಾದ ದಿಲೀಪ್ ಕುಮಾರ್, ರಾಜೇಂದ್ರ ಕುಮಾರ್, ದೇವ್ ಆನಂದ್, ಎಂಜಿಆರ್, ಎನ್‍ಟಿಆರ್, ಶಿವಾಜಿ ಗಣೇಶನ್, ಡಾ.ರಾಜ್ ಕುಮಾರ್ ಅವರೊಂದಿಗೂ ಅನೇಕ ಚಿತ್ರಗಳಲ್ಲಿ ನಟಿಸಿದ್ದರು ಎಂದರು.

ಯಾವುದೇ ಪಾತ್ರಕ್ಕೂ ಜೀವ ತುಂಬುತ್ತಿದ್ದರು. ಖಾಸಗಿ ಜೀವನದಲ್ಲಿಯೂ ಶಿಸ್ತುಬದ್ಧ ಜೀವನವನ್ನು ನಡೆಸಿದವರು. ಕನ್ನಡ ಚಿತ್ರರಂಗ ಬೆಳೆಯಲು ಅಪಾರ ಕೊಡುಗೆಯನ್ನು ಕೊಟ್ಟಿದ್ದಾರೆ. ಅವರ ಸಾವಿನಿಂದ ಚಿತ್ರರಂಗಕ್ಕೆ ಅಪಾರವಾದ ನಷ್ಟವಾಗಿದೆ. ಅವರ ಆತ್ಮಕ್ಕೆ ಚಿರಶಾಂತಿ ದೊರಕಲಿ ಹಾಗೂ ಅವರ ಕುಟುಂಬ ವರ್ಗದವರಿಗೆ ಅವರ ಸಾವಿನಿಂದಾದ ದುಃಖವನ್ನು ಭರಿಸುವ ಶಕ್ತಿ ದೊರೆಯಲಿ ಎಂದು ಪ್ರಾರ್ಥಿಸುವುದಾಗಿ ಅವರು ತಿಳಿಸಿದರು.

ಅನೇಕ ಬಾರಿ ಸರೋಜಾದೇವಿಯವರನ್ನು ಭೇಟಿ ಮಾಡಿದ್ದೇನೆ. ಎಲ್ಲರೊಂದಿಗೆ ಆತ್ಮೀಯವಾಗಿ, ಪ್ರೀತಿಯಿಂದ ಮಾತನಾಡುತ್ತಿದ್ದರು. ದೊಡ್ಡ ವ್ಯಕ್ತಿತ್ವವಿದ್ದ ನಟಿ. ಅವರ ಸಿನಿಮಾಗಳಲ್ಲಿ ಮಲ್ಲಮ್ಮನ ಪವಾಡ, ಕಿತ್ತೂರು ಚೆನ್ನಮ್ಮ, ಭಾಗ್ಯವಂತರು, ಬಬ್ರುವಾಹನ, ನ್ಯಾಯವೇ ದೇವರು ಸೇರಿದಂತೆ ಅನೇಕ ಚಿತ್ರಗಳನ್ನು ನೋಡಿರುವುದಾಗಿ ಇದೇ ಸಂದರ್ಭದಲ್ಲಿ ನುಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X