ಮುಡಾ ಹಗರಣ: ತನಿಖಾ ಸ್ಥಿತಿಗತಿ ವರದಿ ಸಲ್ಲಿಸಲು ಲೋಕಾಯುಕ್ತರಿಗೆ ಸೂಚನೆ

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ನಿ ಪಾರ್ವತಿ ವಿರುದ್ಧ ಮುಡಾ ಹಗರಣದ ತನಿಖಾ ಸ್ಥಿತಿಗತಿ ವರದಿ ಸಲ್ಲಿಸುವಂತೆ ನ್ಯಾಯಾಲಯ ಲೋಕಾಯುಕ್ತಕ್ಕೆ ಸೂಚನೆ ನೀಡಿತು.
ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಖಾಸಗಿ ದೂರು ವಿಚಾರಣೆ ನಡೆಯಿತು. ವಿಚಾರಣೆಗೂ ಮುನ್ನ ಲೋಕಾಯುಕ್ತ ತನಿಖಾಧಿಕಾರಿ ಈವರೆಗಿನ ತನಿಖಾ ಪ್ರಗತಿ ವರದಿಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಸಲ್ಲಿಸಿದರು.
ಈ ವೇಳೆ, ದೂರುದಾರ ಸ್ನೇಹಮಯಿ ಕೃಷ್ಣ ಸಲ್ಲಿಸಿದ ದಾಖಲೆಗಳನ್ನು ಲೋಕಾಯುಕ್ತ ಪೊಲೀಸರು ಪರಿಗಣಿಸಿಲ್ಲ. ದಾಖಲೆ ಪರಿಗಣಿಸದೇ ಸಿಎಂ ಸಿದ್ದರಾಮಯ್ಯ, ಪತ್ನಿ ಪಾರ್ವತಿ ಅವರ ವಿರುದ್ಧ ಬಿ ರಿಪೋರ್ಟ್ ಸಲ್ಲಿಸಲಾಗಿದೆ. ಹೀಗಾಗಿ ತನಿಖಾಧಿಕಾರಿ ವಿರುದ್ಧ ಕ್ರಮ ಕೋರಿರುವ ಅರ್ಜಿಗಳನ್ನು ಪರಿಗಣಿಸಬೇಕು ಎಂದು ಮನವಿ ಮಾಡಿದರು.
ಎಲ್ಲ ದಾಖಲೆಗಳನ್ನು ಪರಿಗಣಿಸಲಾಗಿದೆ ಎಂದು ಲೋಕಾಯುಕ್ತ ಎಸ್‌ಪಿಪಿ ಪೀಠಕ್ಕೆ ತಿಳಿಸಿದರು. ನ್ಯಾಯಾಲಯ ಜುಲೈ 28ರಂದು ತನಿಖಾ ಸ್ಥಿತಿಗತಿ ವರದಿ ಸಲ್ಲಿಸಲು ಸೂಚನೆ ನೀಡಿ ವಿಚಾರಣೆ ಮುಂದೂಡಿದೆ.
Next Story





