ಬೆಂಗಳೂರು | ಬಿಎಂಟಿಸಿ ಬಸ್ ಢಿಕ್ಕಿ: ಮಹಿಳೆ ಮೃತ್ಯು

ಸಾಂದರ್ಭಿಕ ಚಿತ್ರ
ಬೆಂಗಳೂರು : ದ್ವಿಚಕ್ರ ವಾಹನಕ್ಕೆ ಬಿಎಂಟಿಸಿ ಬಸ್ ಢಿಕ್ಕಿ ಹೊಡೆದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ನಗರದ ತಲಘಟ್ಟಪುರ ಪೋಲಿಸ್ ಠಾಣೆ ವ್ಯಾಪ್ತಿಯ ರೇಷ್ಟಮೆ ಸಂಸ್ಥೆ ಮೆಟ್ರೋ ನಿಲ್ದಾಣದ ಬಳಿ ಮಂಗಳವಾರ ನಡೆದಿದೆ.
ಕೆ.ಆರ್.ಮಾರ್ಕೆಟ್ನಿಂದ ಹಂಚಿಪುರ ಕಾಲೋನಿಗೆ ಹೋಗುತ್ತಿದ್ದ ಬಸ್, ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದಿದೆ. ಈ ಪರಿಣಾಮ ಹಿಂಬದಿ ಕುಳಿತಿದ್ದ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದು, ದ್ವಿಚಕ್ರ ವಾಹನ ಸವಾರ ಗಂಭೀರ ಗಾಯಗೊಂಡು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿಲಾಗಿದೆ.
ಘಟನೆ ವೇಳೆಯಲ್ಲಿ ಸಾರ್ವಜನಿಕರು ಬಸ್ ಚಾಲಕನ ಮೇಲೆ ಹಲ್ಲೆಗೆ ಯತ್ನಿಸಿದ್ದು, ಕೂಡಲೇ ಚಾಲಕ ಹಾಗೂ ನಿರ್ವಾಹಕ ಸ್ಥಳದಿಂದ ಪರಾರಿಯಾಗಿದ್ದಾರೆ.
Next Story





