Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಧರ್ಮಸ್ಥಳ ದೂರು | ನಿಷ್ಪಕ್ಷ ತನಿಖೆಗೆ...

ಧರ್ಮಸ್ಥಳ ದೂರು | ನಿಷ್ಪಕ್ಷ ತನಿಖೆಗೆ ಆಗ್ರಹಿಸಿ ಎಐಎಂಎಸ್ಎಸ್ ನಿಂದ ಮುಖ್ಯಮಂತ್ರಿಗೆ ಮನವಿ

ವಾರ್ತಾಭಾರತಿವಾರ್ತಾಭಾರತಿ23 July 2025 3:32 PM IST
share
ಧರ್ಮಸ್ಥಳ ದೂರು | ನಿಷ್ಪಕ್ಷ ತನಿಖೆಗೆ ಆಗ್ರಹಿಸಿ ಎಐಎಂಎಸ್ಎಸ್ ನಿಂದ ಮುಖ್ಯಮಂತ್ರಿಗೆ ಮನವಿ

ಬೆಂಗಳೂರು: ದ.ಕ. ಜಿಲ್ಲೆಯ ಧರ್ಮಸ್ಥಳ ವ್ಯಾಪ್ತಿಯಲ್ಲಿ ನಡೆದಿದೆ ಎನ್ನಲಾದ ಮಹಿಳೆಯರ ಕೊಲೆ, ಅತ್ಯಾಚಾರ ಆಘಾತಕಾರಿ ಪ್ರಕರಣಗಳ ಕುರಿತು ನಿಷ್ಪಕ್ಷ ತನಿಖೆಗೆ ಒತ್ತಾಯಿಸಿ ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆ (ಎಐಎಂಎಸ್ಎಸ್)ಯ ಬೆಂಗಳೂರು ಜಿಲ್ಲಾ ಸಮಿತಿ ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದೆ.

ಧರ್ಮಸ್ಥಳ ವ್ಯಾಪ್ತಿಯಲ್ಲಿ ಕಳೆದ 20 ವರ್ಷಗಳಲ್ಲಿ ನಡೆದಿವೆ ಎನ್ನಲಾದ ಅನೇಕ ಮಹಿಳೆಯರ ಮತ್ತು ವಿದ್ಯಾರ್ಥಿನಿಯರ ನಾಪತ್ತೆ ಹಾಗೂ ಅಸಹಜ ಸಾವು, ಘೋರ ಕೊಲೆ, ಅತ್ಯಾಚಾರ, ದೌರ್ಜನ್ಯಗಳ ಪ್ರಕರಣಗಳು ಇಡೀ ದೇಶದ ಆತ್ಮಸಾಕ್ಷಿಯನ್ನು ಕಲುಕಿ ಜನತೆಯಲ್ಲಿ ತೀವ್ರ ಆತಂಕವನ್ನು ಹುಟ್ಟಿಸಿವೆ. ಅತ್ಯಾಚಾರಕ್ಕೊಳಗಾದ ನೂರಕ್ಕೂ ಹೆಚ್ಚು ಶಾಲಾ ಬಾಲಕಿಯರ, ಮಹಿಳೆಯರ ಮೃತದೇಹಗಳನ್ನು 1995ರಿಂದ 2014ರ ನಡುವೆ ಅಲ್ಲಿ ಸುತ್ತಮುತ್ತ ಹೂತಿದ್ದೇನೆ ಎಂದು ಧರ್ಮಸ್ಥಳದ ಮಾಜಿ ಸ್ವಚ್ಛತಾ ಕಾರ್ಮಿಕ ಎನ್ನಲಾದ ವ್ಯಕ್ತಿಯ ದೂರನ್ನು ಆಧರಿಸಿ ಎಫ್.ಐ.ಆರ್. ದಾಖಲಾಗಿದೆ. ಅವರು ಹೂತಿರುವ ಬಹುಪಾಲು ಮೃತದೇಹಗಳು ಬಾಲಕಿಯರು ಮತ್ತು ಮಹಿಳೆಯರದ್ದು ಎಂಬುದು ಬಹಳ ಅಘಾತಕಾರಿ ವಿಷಯವಾಗಿದೆ. 2010ರಲ್ಲಿ ಆತ ಶಾಲಾ ಬ್ಯಾಗ್ ಸಮೇತ ಹೂತಿದ್ದ ಸುಮಾರು 12 ವರ್ಷದ ಬಾಲಕಿಯ ಮೃತದೇಹದ ನೆನಪು ಆತನಿಗೆ ನಿದ್ರಿಸಲು ಕೊಡದೆ ಈ ಎಲ್ಲಾ ವಿಷಯಗಳನ್ನು ಬಹಿರಂಗ ಪಡಿಸಲು ಪ್ರೇರೇಪಿಸಿರುವುದಾಗಿ ಆತ ಹೇಳಿಕೊಂಡಿರುವುದು ಮಾಧ್ಯಮಗಳಲ್ಲಿ ಪ್ರಕಟವಾಗಿದೆ. ಅಲ್ಲದೆ ಈ ವಿಷಯಗಳು ಸಾರ್ವಜನಿಕ ವಲಯದಲ್ಲಿ ವ್ಯಾಪಕವಾಗಿ ಚರ್ಚೆಗೆ ಒಳಪಡುತ್ತಿವೆ. ಅಷ್ಟೇ ಅಲ್ಲದೆ, ಈ ಪ್ರಕರಣಗಳ ವಿರುದ್ಧ ಹಲವಾರು ವರ್ಷಗಳಿಂದ ಪ್ರತಿರೋಧಗಳು, ಹೋರಾಟಗಳು ನಡೆಯುತ್ತಲೇ ಬರುತ್ತಿವೆ. ಈ ಹಿನ್ನೆಲೆಯಲ್ಲಿ ಸರಕಾರ ಇತ್ತೀಚೆಗಷ್ಟೆ ಈ ನೂರಾರು ಮೃತದೇಹಗಳ ಸಮಾಧಿ ಪ್ರಕರಣಗಳ ಕುರಿತು ಸಮಗ್ರ ಹಾಗೂ ನಿಷ್ಪಕ್ಷ ತನಿಖೆ ನಡೆಸಲು (ಎಸ್.ಐ.ಟಿ.) ವಿಶೇಷ ತನಿಖಾ ದಳವನ್ನು ನೇಮಿಸಿದೆ. ಈ ಪ್ರಕ್ಷಬ್ದ ಪರಿಸ್ಥಿತಿಯಲ್ಲಿ ಶೀಘ್ರವಾಗಿ ಈ ನೂರಾರು ಸಾವುಗಳ ಕುರಿತು ಸಮಗ್ರ ನಿಷ್ಪಕ್ಷ ತನಿಖೆ ನಡೆಯಬೇಕು. ಯಾರೇ ತಪ್ಪಿತಸ್ಥರು, ಎಷ್ಟೇ ಉನ್ನತ ಸ್ಥಾನದಲ್ಲಿದ್ದರೂ, ಎಷ್ಟೇ ಪ್ರಭಾವಿ ವಲಯದವರಾಗಿದ್ದರೂ ಅವರಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.

ಹಾಗೂ ಎಲ್ಲಾ ಸಾಕ್ಷಿಗಳಿಗೆ ಮತ್ತು ಸಂತ್ರಸ್ತ ಕುಟುಂಬಗಳಿಗೆ ರಕ್ಷಣೆ ನೀಡಬೇಕು. ಆತಂಕ, ನೋವು, ಆಕ್ರೋಶದಲ್ಲಿರುವ ಜನತೆಗೆ ಭರವಸೆ ನೀಡಬೇಕೆಂದು ಆಗ್ರಹಿಸಿ ಎಐಎಂಎಸ್ಎಸ್ ಬೆಂಗಳೂರು ಜಿಲ್ಲಾ ಸಮಿತಿಯು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್ ಬಿ. ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದೆ.

ಈ ಸಂದರ್ಭ ಎಐಎಂಎಸ್ಎಸ್ ಬೆಂಗಳೂರು ಜಿಲ್ಲಾ ಅಧ್ಯಕ್ಷೆ ಹೇಮಾವತಿ ಕೆ. ಜಿಲ್ಲಾ ಕಾರ್ಯದರ್ಶಿ ನಿರ್ಮಲಾ ಎಚ್. ಎಲ್., ಉಪಾಧ್ಯಕ್ಷೆ ಅನುರಾಧಾ ವಿ. ಆರ್ , ಕಾರ್ಯಕಾರಿ ಸಮಿತಿ ಸದಸ್ಯೆ ವೈಷ್ಣವಿ, ಹಾಗೂ ಸ್ಥಳೀಯರಾದ ವಿಮಲಾ, ಲಾವಣ್ಯ ಮುಂತಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X