ನಟಿ ಬಿ.ಸರೋಜಾದೇವಿ ಹೆಸರಿನಲ್ಲಿ ಚಲನಚಿತ್ರ ಪ್ರಶಸ್ತಿ ಘೋಷಣೆಗೆ ಸಿಎಂಗೆ ಮನವಿ

ಬೆಂಗಳೂರು, ಜು. 23: ಅಭಿನಯ ಸರಸ್ವತಿ ಎಂದೇ ಖ್ಯಾತರಾದ ಹಿರಿಯ ನಟಿ ಬಿ.ಸರೋಜಾದೇವಿ ಅವರ ಹೆಸರಿನಲ್ಲಿ ಚಲನಚಿತ್ರ ಪ್ರಶಸ್ತಿ ಘೋಷಣೆ ಮಾಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಲಾಗಿದೆ.
ಬುಧವಾರ ಸಿಎಂ ಅಧಿಕೃತ ನಿವಾಸ ಕಾವೇರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಖುದ್ದು ಭೇಟಿ ಮಾಡಿದ ಬಿಜೆಪಿಯ ನಾಯಕಿ ಹಾಗೂ ಹಿರಿಯ ನಟಿ ತಾರಾ ಅನುರಾಧ, ‘ಹಿರಿಯ ನಟಿ ಬಿ. ಸರೋಜಾದೇವಿ ಅವರ ಹೆಸರಿನಲ್ಲಿ ಚಲನಚಿತ್ರ ಪ್ರಶಸ್ತಿ ಘೋಷಣೆ ಮಾಡಬೇಕು’ ಎಂದು ಮನವಿ ಸಲ್ಲಿಸಿದರು.
Next Story





