Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ರಾಜ್ಯದ ಆಡಳಿತ ಕಾಂಗ್ರೆಸ್ ಹೈಕಮಾಂಡ್...

ರಾಜ್ಯದ ಆಡಳಿತ ಕಾಂಗ್ರೆಸ್ ಹೈಕಮಾಂಡ್ ನಿವಾಸದಿಂದ ನಡೆಯುತ್ತಿದೆ : ವಿಜಯೇಂದ್ರ

ವಾರ್ತಾಭಾರತಿವಾರ್ತಾಭಾರತಿ26 July 2025 7:55 PM IST
share
ರಾಜ್ಯದ ಆಡಳಿತ ಕಾಂಗ್ರೆಸ್ ಹೈಕಮಾಂಡ್ ನಿವಾಸದಿಂದ ನಡೆಯುತ್ತಿದೆ : ವಿಜಯೇಂದ್ರ

ಬೆಂಗಳೂರು : ಕರ್ನಾಟಕದ ಆಡಳಿತ ನಡೆಯುತ್ತಿರುವುದು ವಿಧಾನಸೌಧದಿಂದಲ್ಲ, ದಿಲ್ಲಿಯ ಕಾಂಗ್ರೆಸ್ ಹೈಕಮಾಂಡ್ ನಿವಾಸದಿಂದ ಎಂಬುದು ಇದೀಗ ಸ್ಪಷ್ಟವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ.

ಈ ಸಂಬಂಧ ಎಕ್ಸ್‌ ನಲ್ಲಿ ಪೋಸ್ಟ್ ಹಾಕಿರುವ ಅವರು, ದಿಲ್ಲಿಗೆ ಹೋಗಿ ರಾಹುಲ್ ಗಾಂಧಿ ಅವರ ಆದೇಶ ಪಡೆದು ಅಲ್ಲಿಂದಲೆ ನಿರ್ಧಾರಗಳನ್ನು ಪ್ರಕಟಿಸುತ್ತಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಅಂಕುಶ ಹಾಕಿದಂತಿರುವ ಹೈಕಮಾಂಡ್ (ಉದಾಹರಣೆಗೆ ಕಾಂತರಾಜು ಆಯೋಗದ ವರದಿ ತಿರಸ್ಕಾರ) ಪಕ್ಷದ ಉಸ್ತುವಾರಿ ಸುರ್ಜೆವಾಲಾ ಅವರನ್ನು ಸರಕಾರದ ಆಡಳಿತವನ್ನು ನಿಯಂತ್ರಿಸುವ ರಾಯಭಾರಿಯನ್ನಾಗಿ ನೇಮಿಸಿದಂತಿದೆ ಎಂದು ಟೀಕಿಸಿದ್ದಾರೆ.

ಅದರ ಸಾಕ್ಷಿಯಾಗಿ ಸುರ್ಜೆವಾಲಾ ಸರಕಾರಿ ಹಿರಿಯ ಅಧಿಕಾರಿಗಳ ಜೊತೆ ನಿರಂತರ ಸಭೆ ನಡೆಸುತ್ತಿರುವುದೆ ಸಾಕ್ಷಿಯಾಗಿದೆ. ಈ ಸಂಬಂಧ ಅನೇಕ ಸಚಿವರು ಅಸಮಾಧಾನ ವ್ಯಕ್ತಪಡಿಸಿದ್ದು ಸಚಿವ ಕೆ.ಎನ್.ರಾಜಣ್ಣ ಅವರು ಬಹಿರಂಗವಾಗಿಯೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ ಎಂದು ವಿಜಯೇಂದ್ರ ತಿಳಿಸಿದ್ದಾರೆ.

ದೇಶದಲ್ಲಿ ಬಹುತೇಕ ಅಸ್ಥಿತ್ವ ಕಳೆದುಕೊಂಡಿರುವ ಕಾಂಗ್ರೆಸ್ ಪಕ್ಷಕ್ಕೆ ಕರ್ನಾಟಕ ರಾಜ್ಯ ಒಂದೇ ಆಧಾರಸ್ತಂಭವಾಗಿದೆ, ನೆಹರು ಕುಟುಂಬಕ್ಕೆ ಎಟಿಎಂ ಕೇಂದ್ರವಾಗಿದೆ. ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಆರ್ಥಿಕ ನೆರವಿನ ಭರವಸೆ ಪಡೆದುಕೊಂಡ ಸಂಕಷ್ಟಿತ ರೋಗಿಗಳ ಚಿಕಿತ್ಸೆಗೂ ಹಣ ಜಮೆ ಆಗುತ್ತಿಲ್ಲ ಎಂಬ ದೂರುಗಳು ಕೇಳಿ ಬರುವಷ್ಟರ ಮಟ್ಟಿಗೆ ಸರಕಾರದ ಆರ್ಥಿಕ ಸ್ಥಿತಿ ದಿವಾಳಿಯ ಹಂತ ತಲುಪಿದೆ. ಇಂತಹ ಪರಿಸ್ಥಿತಿಯಲ್ಲಿ ರಾಜ್ಯದ ಜನತೆಯ ಗೋಳು ಕೇಳುವವರೇ ಇಲ್ಲದಂತಾಗಿದೆ ಎಂದು ಅವರು ಹೇಳಿದ್ದಾರೆ.

ಆಂತರಿಕ ಕಲಹದಲ್ಲಿ ರಾಜ್ಯದ ಆಡಳಿತ ಯಂತ್ರ ಈಗಾಗಲೇ ನಿಂತ ನೀರಾಗಿದ್ದರೆ, ಸುರ್ಜೆವಾಲಾ ಅವರು ತಳಕಚ್ಚಿರುವ ಬಾವಿಯಲ್ಲೆ ನೀರು ಸೇದುವ ಕಾರ್ಯದಲ್ಲಿ ನಿರತರಾಗಿದ್ದಾರೆ. ಈ ನಡುವೆ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ನಡುವಿನ ಶೀತಲ ಸಮರ, ದಿಲ್ಲಿಯ ಅವರ ಇಬ್ಬರು ಅತ್ಯಾಪ್ತ ಸಿಬ್ಬಂದಿಗಳವರೆಗೂ ವ್ಯಾಪಿಸಿದೆ. ಕರ್ನಾಟಕದ ಆಡಳಿತವನ್ನು ದೇವರೆ ಬಂದು ಸರಿದೂಗಿಸಬೇಕಾದ ಸ್ತಿತಿ ಬಂದೊದಗಿದೆ ಎಂದು ವಿಜಯೇಂದ್ರ ಬೇಸರ ವ್ಯಕ್ತಪಡಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X