Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಶೋಷಿತರನ್ನು ವಂಚಿಸುತ್ತ ಬಂದ ಕಾಂಗ್ರೆಸ್...

ಶೋಷಿತರನ್ನು ವಂಚಿಸುತ್ತ ಬಂದ ಕಾಂಗ್ರೆಸ್ : ವಿಜಯೇಂದ್ರ

"ಕಾಂಗ್ರೆಸ್‌ನಿಂದ ಪರಿಶಿಷ್ಟ ಸಮುದಾಯಕ್ಕೆ ಮೀಸಲಿಟ್ಟ ಹಣ ದುರ್ಬಳಕೆ"

ವಾರ್ತಾಭಾರತಿವಾರ್ತಾಭಾರತಿ28 July 2025 10:28 PM IST
share
ಶೋಷಿತರನ್ನು ವಂಚಿಸುತ್ತ ಬಂದ ಕಾಂಗ್ರೆಸ್ : ವಿಜಯೇಂದ್ರ

ಬೆಂಗಳೂರು : ರಾಜ್ಯದ ಆಡಳಿತಾರೂಢ ಕಾಂಗ್ರೆಸ್ ಪಕ್ಷದ ನೇತೃತ್ವದ ಸರಕಾರ ಅಧಿಕಾರಕ್ಕೆ ಬಂದ ಎರಡೂವರೆ ವರ್ಷಗಳಲ್ಲಿ ಪರಿಶಿಷ್ಟ ಸಮುದಾಯಕ್ಕೆ ಮೀಸಲಿಟ್ಟ ಹಣವನ್ನು ದುರ್ಬಳಕೆ ಮಾಡಿಕೊಂಡಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಗಂಭೀರ ಆರೋಪ ಮಾಡಿದ್ದಾರೆ.

ಸೋಮವಾರ ಇಲ್ಲಿನ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷ ಮತ್ತು ಸರಕಾರವು ಶೋಷಿತ ಸಮುದಾಯವನ್ನು ಮತಬ್ಯಾಂಕಾಗಿ ಬಳಸಿಕೊಳ್ಳುತ್ತಿದೆ. ಆ ಸಮುದಾಯಗಳಿಗೆ ಕಾಂಗ್ರೆಸ್ ಪಕ್ಷ ಹಿಂದಿನಿಂದಲೂ ವಂಚನೆ ಮಾಡುತ್ತ ಬಂದಿದೆ ಎಂದು ಆಕ್ಷೇಪಿಸಿದರು.

ಶೋಷಿತ ಸಮುದಾಯಗಳ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ವಿಚಾರಗಳಿಗೆ ಬಳಸಿಕೊಳ್ಳಬೇಕಾದ ಅನುದಾನವನ್ನು ಗ್ಯಾರಂಟಿಗಳಿಗೆ ವರ್ಗಾವಣೆ ಮಾಡಿ, ಆ ಸಮುದಾಯಗಳಿಗೆ ಅನ್ಯಾಯ ಮಾಡುತ್ತಿದೆ. ಬಿಜೆಪಿ ಇದರ ವಿರುದ್ಧ ನಿರಂತರ ಹೋರಾಟ ಮಾಡುತ್ತ ಬಂದಿದೆ. ಸದನದ ಒಳಗೆ ಮತ್ತು ಹೊರಗಡೆ ಹೋರಾಟ ನಡೆಸಲಾಗಿದೆ ಎಂದು ಅವರು ವಿವರಿಸಿದರು.

ಸಿದ್ದರಾಮಯ್ಯನವರು ಈಗಲೂ ಶೋಷಿತ ಸಮುದಾಯಗಳನ್ನು ವಂಚಿಸುವ ಕಾರ್ಯವನ್ನು ಮುಂದುವರೆಸಿದ್ದಾರೆ. 2025-26ರಲ್ಲಿ ಪರಿಶಿಷ್ಟ ಜಾತಿ, ಪಂಗಡಗಳ ಅಭಿವೃದ್ಧಿಗೆ ಮೀಸಲಿಟ್ಟ 11,896 ಕೋಟಿ ರೂ.ಗಳನ್ನು ಮತ್ತೊಮ್ಮೆ ಇತರ ಕಾರ್ಯಕ್ರಮಗಳಿಗೆ ವರ್ಗಾಯಿಸಿದ್ದಾರೆ. ಈ ಮೂಲಕ ಈ ಸಮುದಾಯಗಳಿಗೆ ವಂಚಿಸುತ್ತಿದ್ದಾರೆ ಎಂದು ಟೀಕಿಸಿದರು.

ಈ ಕುರಿತು ಸದನದಲ್ಲಿ ಚರ್ಚೆ ಮಾಡಲಿದ್ದೇವೆ. ಸರಕಾರದ ಕಿವಿ ಹಿಂಡುತ್ತೇವೆ. ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸವಲತ್ತು ತಲುಪಬೇಕೆಂದು ಹಾಗೂ ನ್ಯಾಯ ಸಿಗಬೇಕೆಂದು ಬಿಜೆಪಿ ನಂಬಿದೆ. ಇದೇ ನಿಟ್ಟಿನಲ್ಲಿ ಬಿಜೆಪಿ ಬಲವಾದ ಹೋರಾಟ ಸಂಘಟಿಸಲಿದೆ ಎಂದು ಇನ್ನೊಂದು ಪ್ರಶ್ನೆಗೆ ಉತ್ತರಿಸಿದರು. ಬಿಜೆಪಿ ಶೋಷಿತ ಸಮುದಾಯಗಳ ಪರವಾಗಿ ಧ್ವನಿ ಎತ್ತುವ ಕರ್ತವ್ಯ ಮಾಡಲಿದೆ ಎಂದು ನುಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X