‘ಮುಡಾ’ ಯಾರೇ ಪ್ರಾಮಾಣಿಕವಾಗಿ ತನಿಖೆ ನಡೆಸಿದರೂ ಕ್ಲೀನ್‌ಚಿಟ್ ಸಿಗಲಿದೆ : ಯತೀಂದ್ರ

ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ದಲ್ಲಿ ಹಗರಣವೇ ನಡೆದಿಲ್ಲ, ಯಾರೇ ಪ್ರಾಮಾಣಿಕವಾಗಿ ತನಿಖೆ ನಡೆಸಿದರೂ ಕ್ಲೀನ್‌ಚಿಟ್ ಸಿಗಲಿದೆ ಎಂದು ವಿಧಾನಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ಮುಡಾದಲ್ಲಿ ಹಗರಣವೇ ನಡೆದಿಲ್ಲ, ಯಾರೇ ಪ್ರಾಮಾಣಿಕವಾಗಿ ತನಿಖೆ ನಡೆಸಿದರೂ ಕ್ಲೀನ್‌ಚಿಟ್ ಸಿಗಲಿದೆ. ರಾಜಕೀಯ ಪಿತೂರಿಯಿಂದ ಕೆಲವರು ಮುಡಾದಲ್ಲಿ ಹಗರಣ ನಡೆದಿದೆ ಎಂಬ ಆರೋಪ ಮಾಡಿ ರಾಜಕೀಯವಾಗಿ ಸಿಲುಕಿಸುವ ಪ್ರಯತ್ನ ಪಟ್ಟರು. ಆದರೆ ಅಂತಹ ಯಾವುದೇ ಹಗರಣ ನಡೆದಿಲ್ಲ ಎಂಬುದು ಈಗ ಸ್ಪಷ್ಟವಾಗಿದೆ ಎಂದರು.
ಮೈಸೂರಿನಲ್ಲಿ ಡ್ರಗ್ಸ್ ತಯಾರಿಕಾ ಘಟಕ ಪತ್ತೆ ಹಿನ್ನ್ನೆಲೆಯಲ್ಲಿ ಪ್ರತಿಕ್ರಿಯಿಸಿದ ಅವರು, ಈ ವಿಚಾರದ ಬಗ್ಗೆ ನಮ್ಮ ತಂದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಳಿ ಬಂದು ಜನರು ಮೈಸೂರಿನಲ್ಲಿ ಡ್ರಗ್ಸ್ ಹಾವಳಿ ಹೆಚ್ಚಾಗಿದೆ ಎಂದು ಹೇಳುತ್ತಿದ್ದರು. ಇದನ್ನು ಸಂಪೂರ್ಣವಾಗಿ ತಡೆಗಟ್ಟುವಂತೆ ಪೊಲೀಸರಿಗೆ ಸೂಚಿಸಿದ್ದರು. ಮಹಾರಾಷ್ಟ್ರ ಪೊಲೀಸರು ಡ್ರಗ್ಸ್ ಪೆಡ್ಲರ್ ಪತ್ತೆ ಹಚ್ಚಿ ಎಲ್ಲಿಂದ ಇದು ಬರುತ್ತಿದೆ ಎಂದಾಗ ಮೈಸೂರು ಎಂದು ಹೇಳಿದ್ದಾನೆ. ಇದರಿಂದ ಪತ್ತೆಯಾಗಿದೆ. ಇದನ್ನು ತಡೆಗಟ್ಟುವಲ್ಲಿ ಪೊಲೀಸರು ಬಿಗಿ ಕ್ರಮಕೈಗೊಳ್ಳಲಿದ್ದಾರೆ ಎಂದು ಹೇಳಿದರು.







