Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಆರ್‌ಟಿಐ ಮಾಹಿತಿ ಕೊಡದಿದ್ದರೆ ಅಧಿಕಾರಿಗೆ...

ಆರ್‌ಟಿಐ ಮಾಹಿತಿ ಕೊಡದಿದ್ದರೆ ಅಧಿಕಾರಿಗೆ ದಂಡ : ಹರೀಶ್ ಕುಮಾರ್

ವಾರ್ತಾಭಾರತಿವಾರ್ತಾಭಾರತಿ3 Aug 2025 12:40 AM IST
share
ಆರ್‌ಟಿಐ ಮಾಹಿತಿ ಕೊಡದಿದ್ದರೆ ಅಧಿಕಾರಿಗೆ ದಂಡ : ಹರೀಶ್ ಕುಮಾರ್

ಬೆಂಗಳೂರು : ಮಾಹಿತಿ ಅಧಿಕಾರಿಯು ಯಾವುದೇ ಕಾರಣವಿಲ್ಲದೇ ಮಾಹಿತಿಯನ್ನು ನೀಡದಿದ್ದಲ್ಲಿ ಅಥವಾ ದುರುದ್ದೇಶದಿಂದ ತಪ್ಪಾದ ಮಾಹಿತಿ ನೀಡಿದ್ದಲ್ಲಿ ದಂಡ ಪಾವತಿಸಬೇಕಾಗುತ್ತದೆ ಎಂದು ರಾಜ್ಯ ಮಾಹಿತಿ ಆಯೋಗದ ಆಯುಕ್ತ ಡಾ.ಹರೀಶ್ ಕುಮಾರ್ ಹೇಳಿದ್ದಾರೆ.

ಶನಿವಾರ ಜಿಲ್ಲಾಡಳಿತ, ಜಿಲ್ಲಾಪಂಚಾಯತ್, ಪೊಲೀಸ್ ಇಲಾಖೆ ವತಿಯಿಂದ ಇಲ್ಲಿನ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಆಯೋಜಿಸಿದ್ದ ಜಿಲ್ಲಾ ಮಟ್ಟದ ಅಧಿಕಾರಿಗಳು ಮತ್ತು ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಮಾಹಿತಿ ಹಕ್ಕು ಅಧಿನಿಯಮ 2005 ರನ್ವಯ ಹಮ್ಮಿಕೊಂಡಿದ್ದ ತರಬೇತಿ ಕಾರ್ಯಾಗಾರದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಮಾಹಿತಿ ಹಕ್ಕು ಬಹಳ ಸರಳ ಹಾಗೂ ಗಂಭೀರ ಸ್ವರೂಪ ಹೊಂದಿದ್ದು, ಸರಕಾರವನ್ನು ಬುಡಮೇಲು ಮಾಡುವ ಶಕ್ತಿ ಕೂಡ ಇದೆ. ಹೀಗಾಗಿ, ಜನಪರ ಕಾನೂನು ಜಾರಿಯಾದ ನಂತರ ಅದರ ಬಗ್ಗೆ ಸರಕಾರಿ ಅಧಿಕಾರಿಗಳು ತಿಳಿದಿರಬೇಕು. ಜತೆಗೆ, ಅರ್ಜಿದಾರರು ಕೂಡ ಮಾಹಿತಿ ಹಕ್ಕು ಕಾಯ್ದೆಯನ್ನು ದುರುಪಯೋಗಪಡಿಸಿಕೊಳ್ಳದೆ ಸಮಾಜದ ನೈತಿಕತೆ, ಸಾಮಾಜಿಕ ಸ್ವಾತಂತ್ರ್ಯ ಕಾಪಾಡುವ ನಿಟ್ಟಿನಲ್ಲಿ ಮಾಹಿತಿ ಕೇಳಬೇಕು ಎಂದು ಅವರು ತಿಳಿಸಿದರು.

ಪೊಲೀಸ್ ಠಾಣೆಗಳಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆಗುತ್ತಿದೆ ಎಂಬ ಸುಪ್ರೀಂಕೋರ್ಟ್ ಹೇಳಿಕೆಯನ್ನು ಆಧರಿಸಿ ಕಡ್ಡಾಯವಾಗಿ ಎಲ್ಲ ಪೊಲೀಸ್ ಠಾಣೆಗಳಲ್ಲಿ ಸಿಸಿಟಿವಿ ಅಳವಡಿಸಿರಬೇಕು. ಹಾಗೆಯೇ ಅವುಗಳನ್ನು ಒಂದು ವರ್ಷಗಳ ಕಾಲ ನಿರ್ವಹಣೆ ಮಾಡಬೇಕಿದೆ. ಸಾರ್ವಜನಿಕ ಹಿತಾಸಕ್ತಿ ದೃಷ್ಟಿಯಿಂದ ಇದನ್ನು ಪಾಲಿಸುವುದು ಅವಶ್ಯಕ ಎಂದರು.

ರಾಜ್ಯ ಮಾಹಿತಿ ಆಯೋಗದ ಆಯುಕ್ತೆ ಡಾ.ಬಿ.ಆರ್.ಮಮತಾ ಮಾತನಾಡಿ, ಮಾಹಿತಿ ಹಕ್ಕಿನ ಕಾಯ್ದೆಯ ಬಗ್ಗೆ ಸಾರ್ವಜನಿಕರಲ್ಲಿ ಹಾಗೂ ಅಧಿಕಾರಿಗಳಲ್ಲಿ ಅರಿವಿನ ಕೊರತೆ ಇದೆ. ಈ ಕಾಯ್ದೆಯು ಸಾರ್ವಜನಿಕ ಜನ ಸ್ನೇಹಿ ಕಾಯ್ದೆಯಾಗಿದೆ. ಇದನ್ನು ಪೋಷಿಸಿ ಬೆಳೆಸುವುದು ನಮ್ಮೆಲ್ಲರ ಜವಾಬ್ದಾರಿ ಆಗಿದೆ. 6(1) ಅಧಿನಿಯಮದ ಪ್ರಕಾರ ಮಾಹಿತಿ ಕೋರಿ ಅರ್ಜಿ ಬಂದರೆ ಅಂತಹ ಅರ್ಜಿಗೆ 30 ದಿನಗಳ ಒಳಗಾಗಿ ಪ್ರತಿ ಪುಟಕ್ಕೆ ಎರಡು ರೂ.,ಗಳಂತೆ ಹಣ ಪಾವತಿಸಿಕೊಂಡು ಮಾಹಿತಿ ನೀಡಬೇಕು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ.ಕೆ.ಎನ್ ಅನುರಾಧ, ಅಪರ ಜಿಲ್ಲಾಧಿಕಾರಿ ಸೈಯಿದಾ ಆಯಿಶಾ, ಎಎಸ್ಪಿ ನಾಗರಾಜ್, ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಶಿವಕುಮಾರ್ ಸೇರಿದಂತೆ ಪ್ರಮುಖರಿದ್ದರು.

ರಾಜ್ಯದಲ್ಲಿ 45000 ದ್ವಿತೀಯ ಹಂತದ ಮೇಲ್ಮನವಿ ಪ್ರಕರಣಗಳು ಬಾಕಿ ಇದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯು 9ನೇ ಸ್ಥಾನದೊಂದಿಗೆ 1,440 ದ್ವಿತೀಯ ಮೇಲ್ಮನವಿ ಪ್ರಕರಣಗಳು ಬಾಕಿ ಉಳಿದಿವೆ ಎಂದು ರಾಜ್ಯ ಮಾಹಿತಿ ಆಯೋಗದ ಆಯುಕ್ತ ಕೆ.ಬದ್ರುದ್ದೀನ್ ಮಹಿತಿ ನೀಡಿದರು.

ಕಂದಾಯಕ್ಕೆ ಸಂಬಂಧಿಸಿದಂತೆ ಸಾರ್ವಜನಿಕರಿಗೆ ಈಗ ಎಲ್ಲವೂ ಆನ್‌ಲೈನ್‌ನಲ್ಲಿ ಮಾಹಿತಿ ಸಿಗುವಂತೆ ಮಾಡಲಾಗಿದೆ. ಜತೆಗೆ, ಸಾರ್ವಜನಿಕ ಹಿತಾಸಕ್ತಿ ಹಾಗೂ ಪಾರದರ್ಶಕತೆ ಕಾಪಾಡುವ ನಿಟ್ಟಿನಲ್ಲಿ ಮಾಹಿತಿ ಹಕ್ಕು ಮುಖ್ಯ. ಅಧಿಕಾರಿಗಳು ಯಾವುದೇ ಭಯ ಪಡದೇ ಮಾಹಿತಿ ಹಕ್ಕು ಕಾಯ್ದೆ ಅಡಿ ಅರ್ಜಿ ವಿಲೇವಾರಿ ಮಾಡಬೇಕು.

-ಎ.ಬಿ.ಬಸವರಾಜು,ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X