Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಪ್ರಭುತ್ವದ ಭಾಷೆ ಜನ ಭಾಷೆಯಾಗಿ...

ಪ್ರಭುತ್ವದ ಭಾಷೆ ಜನ ಭಾಷೆಯಾಗಿ ಬದಲಾಗುವುದರ ಹಿಂದೆ ಸೈದ್ಧಾಂತಿಕ ಸಂಘರ್ಷಗಳಿವೆ: ಬಿಳಿಮಲೆ

‘ಕನ್ನಡದಲ್ಲಿ ಆಡಳಿತ’ ಪುಸ್ತಕ ಬಿಡುಗಡೆ

ವಾರ್ತಾಭಾರತಿವಾರ್ತಾಭಾರತಿ3 Aug 2025 12:44 AM IST
share
ಪ್ರಭುತ್ವದ ಭಾಷೆ ಜನ ಭಾಷೆಯಾಗಿ ಬದಲಾಗುವುದರ ಹಿಂದೆ ಸೈದ್ಧಾಂತಿಕ ಸಂಘರ್ಷಗಳಿವೆ: ಬಿಳಿಮಲೆ

ಬೆಂಗಳೂರು : ಆಡಳಿತಕ್ಕೆ ಇಂಗ್ಲಿಷ್ ಪದಗಳ ಬದಲಿಗೆ ಸಂಸ್ಕೃತ ಪದಗಳು ಬರುವುದು ಸರಕಾರದ ನೀತಿಯಾಗಿದೆ. ಇದು ಆಕಸ್ಮಿಕವಲ್ಲ. ಪ್ರಭುತ್ವದ ಭಾಷೆ ಮರು ಸ್ಥಾಪನೆ ಆಯಿತೇ ವಿನಃ ಜನ ಭಾಷೆಯಾಗಿ ಬದಲಾಗಲಿಲ್ಲ. ಪ್ರಭುತ್ವದ ಭಾಷೆ ಜನ ಭಾಷೆಯಾಗಿ ಬದಲಾಗುವುದರ ಹಿಂದೆ ಸೈದ್ಧಾಂತಿಕ ಸಂಘರ್ಷಗಳೇ ಇವೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ.ಪುರುಷೋತ್ತಮ ಬಿಳಿಮಲೆ ಹೇಳಿದ್ದಾರೆ.

ಶನಿವಾರ ನಗರದ ಚನ್ನಬಸಪ್ಪ ಸಭಾಂಗಣದಲ್ಲಿ ಸಂಚಲನ ಪ್ರಕಾಶನ ಹೊರತರುತ್ತಿರುವ ಡಾ.ವಿದ್ಯಾಕುಮಾರಿ ಅವರ ‘ಕನ್ನಡದಲ್ಲಿ ಆಡಳಿತ’ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕೆಲವು ವಿಶಿಷ್ಟ ಸಂದರ್ಭದಲ್ಲಿ ಇಂಗ್ಲಿಷ್ ಪದಗಳ ಬದಲಾಗಿ ದೇಸಿ ಪದಗಳು ಬೇಕಾದರೆ ಸಂಸ್ಕೃತದಲ್ಲಿ ತೆಗೆದುಕೊಳ್ಳಿ ಎಂದು ಎನ್‌ಇಪಿಯ ಕರಡುನಲ್ಲಿ ಹೇಳಲಾಗಿದೆ ಎಂದು ತಿಳಿಸಿದರು.

ಹಲವರಿಗೆ ಆಡಳಿತದಲ್ಲಿರುವಾಗ ಕನ್ನಡದಲ್ಲಿ ಬರೆಯುವ ಆಸೆ ಇದ್ದರೂ ಬರೆಯುವುದಕ್ಕೆ ಆಗುವುದಿಲ್ಲ. ಯಾಕೆಂದರೆ ಕರ್ನಾಟಕದ ನೆಲದಿಂದ ಉತ್ಪತ್ತಿಯಾದ ಆಡಳಿತ ಪದಗಳು ಇಲ್ಲದೇ ಇರುವುದು. ವಸಾಹತು ಆಡಳಿತದ ಪದಗಳನ್ನು ಹಾಗೆಯೇ ಉಳಿಸಿ ಕೊಂಡಿರುವುದರಿಂದ ಆ ವ್ಯವಸ್ಥೆ ಮುಂದುವರಿದು ಬಂದಿದೆ. ಆದುದರಿಂದಲೇ ದೇಸಿ ಪದಗಳನ್ನು ಜೋಡಿಸುವ ಕೆಲಸ ಮಾಡುವಾಗ ಸಹಜವಾಗಿ ಕೆಲವು ಬಿಕ್ಕಟ್ಟುಗಳು ಬರುವುದು ಎಂದು ಅವರು ತಿಳಿಸಿದರು.

ಪರಿಭಾಷಾ, ವಾಕ್ಯಗಳ ಕೊರತೆ, ಅನುವಾದದ ಕೊರತೆಗಳನ್ನು ಕನ್ನಡದಲ್ಲಿ ಯೋಚನೆ ಮಾಡಿ ಕನ್ನಡಿಗರಿಗೆ ಕನ್ನಡದಲ್ಲಿ ಹೇಳಿದಾಗ ಆಡಳಿತ ಸಮೃದ್ಧಗೊಳ್ಳುತ್ತದೆ ಮತ್ತು ಜನಗಳ ಬದುಕು ಸರಿಯಾಗುತ್ತದೆ. ಭಾಷೆ ಜನರನ್ನು ಮೂರ್ಖರನ್ನಾಗಿಸುವ ಪ್ರಯತ್ನ ನಡೆಯುತ್ತಿರುವ ಸಂದರ್ಭದಲ್ಲಿ ಇದರ ವಿರದ್ಧ ಎದೆತಟ್ಟಿ ನಿಲ್ಲುವುದಕ್ಕೆ ಬೇಕಾದಂತೆ ಒಳ್ಳೆಯ ಸೂಚನೆಗಳನ್ನು ಲೇಖಕಿ ವಿದ್ಯಾಕುಮಾರಿ ಕೃತಿಯಲ್ಲಿ ತಿಳಿಸಿದ್ದಾರೆ ಎಂದು ಪುರುಷೋತ್ತಮ ಬಿಳಿಮಳೆ ಹೇಳಿದರು.

ಕಾರ್ಯಕ್ರಮದಲ್ಲಿ ಕನ್ನಡ ಶಾಸ್ತ್ರೀಯ ಭಾಷಾ ಸಂಶೋಧನಾ ಕೇಂದ್ರದ ಡಾ.ಚಲಪತಿ, ಸಾಹಿತಿ ಪ್ರೊ.ಎಸ್.ಜಿ.ಸಿದ್ದರಾಮಯ್ಯ, ಪ್ರೊ.ಡೊಮಿನಿಕ್, ಸಿ.ಜಿ.ಲಕ್ಷ್ಮೀಪತಿ, ಇತರರು ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X