Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಸಾಂಗ್ಲಿ, ಕೊಲ್ಲಾಪುರ ಪ್ರವಾಹಕ್ಕೆ...

ಸಾಂಗ್ಲಿ, ಕೊಲ್ಲಾಪುರ ಪ್ರವಾಹಕ್ಕೆ ಮಹಾರಾಷ್ಟ್ರವೇ ಕಾರಣ : ಎಂ.ಬಿ.ಪಾಟೀಲ್

ವಾರ್ತಾಭಾರತಿವಾರ್ತಾಭಾರತಿ3 Aug 2025 7:23 PM IST
share
ಸಾಂಗ್ಲಿ, ಕೊಲ್ಲಾಪುರ ಪ್ರವಾಹಕ್ಕೆ ಮಹಾರಾಷ್ಟ್ರವೇ ಕಾರಣ : ಎಂ.ಬಿ.ಪಾಟೀಲ್

ಬೆಂಗಳೂರು : ಮಹಾರಾಷ್ಟ್ರದ ಭಾಗದಲ್ಲಿ ಕೃಷ್ಣಾ ನದಿ ಜಲಾನಯನ ಪ್ರದೇಶದಲ್ಲಿ ಬರುವ ಸಾಂಗ್ಲಿ, ಸತಾರಾ ಮತ್ತು ಕೊಲ್ಲಾಪುರ ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಲು ಆ ರಾಜ್ಯದ ಕೊಯ್ನಾ, ರಾಜಾಪುರ ಮತ್ತಿತರ ಅಣೆಕಟ್ಟುಗಳಿಂದ ಒಂದೆ ಸಲ ಅಪಾರ ಪ್ರಮಾಣದ ನೀರನ್ನು ಬಿಡುಗಡೆ ಮಾಡುವುದು ಮತ್ತು ಒತ್ತುವರಿ ಕಾರಣವಾಗಿದೆ ಎಂದು ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ್ ತಿಳಿಸಿದ್ದಾರೆ.

ರವಿವಾರ ಈ ಸಂಬಂಧ ಪತ್ರಿಕಾ ಹೇಳಿಕೆ ನೀಡಿರುವ ಅವರು, ಇದರಲ್ಲಿ ರಾಜ್ಯದ ಆಲಮಟ್ಟಿ ಮತ್ತು ಹಿಪ್ಪರಗಿ ಅಣೆಕಟ್ಟುಗಳ ಎತ್ತರದ ಪಾತ್ರವೇನೂ ಇಲ್ಲ. ಇದನ್ನು ಆ ರಾಜ್ಯವೆ ನೇಮಿಸಿದ್ದ ತಜ್ಞರ ಸಮಿತಿಯ ವರದಿಯೆ ಸ್ಪಷ್ಟವಾಗಿ ಹೇಳಿದೆ ಎಂದು ತಿಳಿಸಿದ್ದಾರೆ.

ನಾವು ಆಲಮಟ್ಟಿ ಅಣೆಕಟ್ಟೆಯ ಎತ್ತರವನ್ನು 519.60 ಮೀಟರ್‍ನಿಂದ 524.256 ಮೀಟರ್‍ಗೆ ಏರಿಸಲು ಕೃಷ್ಣಾ ನ್ಯಾಯಾಧಿಕರಣವೆ ಅವಕಾಶ ನೀಡಿದೆ. ಇದುವರೆಗೂ ಈ ಬಗ್ಗೆ ಪ್ರಶ್ನಿಸದಿದ್ದ ಮಹಾರಾಷ್ಟ್ರ ಸರಕಾರವು ಈಗ ಅಣೆಕಟ್ಟೆ ಎತ್ತರದ ಹೆಚ್ಚಳಕ್ಕೆ ತಕರಾರು ತೆಗೆದು, ಕೇಂದ್ರಕ್ಕೆ ಪತ್ರ ಬರೆದಿರುವುದು ದುರುದ್ದೇಶದಿಂದ ಕೂಡಿದೆ ಎಂದು ಎಂ.ಬಿ.ಪಾಟೀಲ್ ಹೇಳಿದ್ದಾರೆ.

ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆ ಸೇರಿದಂತೆ ಹಲವೆಡೆಗಳಲ್ಲಿ 2019ರಲ್ಲಿ ಪ್ರವಾಹ ಉಂಟಾಗಿತ್ತು. ಅದರ ಬಗ್ಗೆ ಅಧ್ಯಯನ ಮಾಡಲು ಮತ್ತು ಭವಿಷ್ಯದಲ್ಲಿ ಪ್ರವಾಹವನ್ನು ತಡೆಯಲು ಏನು ಮಾಡಬೇಕೆಂದು ಸೂಚಿಸುವಂತೆ ತಿಳಿಸಿ ಅಲ್ಲಿನ ರಾಜ್ಯ ಸರಕಾರವು ತನ್ನ ಜಲಸಂಪನ್ಮೂಲ ಇಲಾಖೆಯ ನಿವೃತ್ತ ಪ್ರಧಾನ ಕಾರ್ಯದರ್ಶಿ ನಂದಕುಮಾರ್ ವಡ್ನೇರೆ ಅವರ ನೇತೃತ್ವದಲ್ಲಿ 10 ಸದಸ್ಯರ ಸಮಿತಿ ರಚಿಸಿತ್ತು ಎಂದು ಅವರು ತಿಳಿಸಿದ್ದಾರೆ.

2020ರ ಮೇ ತಿಂಗಳಲ್ಲಿ ವರದಿ ಸಲ್ಲಿಸಿರುವ ಈ ಸಮಿತಿಯು, ತನ್ನ ಭೂಭಾಗದಲ್ಲಿ ಉಂಟಾಗುತ್ತಿರುವ ಪ್ರವಾಹಕ್ಕೆ ಕರ್ನಾಟಕದ ಆಲಮಟ್ಟಿ ಮತ್ತು ಹಿಪ್ಪರಗಿ ಅಣೆಕಟ್ಟುಗಳ ಹಿನ್ನೀರು ಕಾರಣವಲ್ಲ. ಅಷ್ಟೇ ಅಲ್ಲದೆ, ಈ ಎರಡೂ ಅಣೆಕಟ್ಟುಗಳ ಹಿನ್ನೀರು ಕರ್ನಾಟಕದೊಳಗೆ ನಿಲ್ಲುತ್ತವೆ. ಮಹಾರಾಷ್ಟ್ರದ ಭೂಪ್ರದೇಶ ಮುಳುಗಡೆ ಆಗುವುದಿಲ್ಲ ಎಂದು ಹೇಳಿದೆ ಎಂದು ಎಂ.ಬಿ.ಪಾಟೀಲ್ ಮಾಹಿತಿ ನೀಡಿದ್ದಾರೆ.

ಆಲಮಟ್ಟಿ ಅಣೆಕಟ್ಟೆಯಿಂದ ಸಾಂಗ್ಲಿಯು 260 ಕಿ.ಮೀ. ದೂರದಲ್ಲಿದೆ. ಹಿಪ್ಪರಗಿ ಹಿನ್ನೀರಿನ ವ್ಯಾಪ್ತಿ ಕೂಡ ರಾಜಾಪುರ ಬ್ಯಾರೇಜ್‍ನಿಂದ ಕೆಳಕ್ಕೆ 22ನೆ ಕಿ.ಮೀ. ನಲ್ಲಿ ಕಂಡುಬರುತ್ತದೆ. ಮಹಾರಾಷ್ಟ್ರದಲ್ಲಿ ಕೊಯ್ನಾ ಅಣೆಕಟ್ಟು, ರಾಜಾಪುರ ಬ್ಯಾರೇಜ್ ಇತ್ಯಾದಿಗಳಿಂದ ಹಂತಹಂತವಾಗಿ ನೀರು ಬಿಡದೆ, ಸಂಪೂರ್ಣ ತುಂಬಿದ ಬಳಿಕ ಒಂದೆ ಸಲ ಲಕ್ಷಾಂತರ ಕ್ಯೂಸೆಕ್ಸ್ ನೀರನ್ನು ನದಿ ಪಾತ್ರಕ್ಕೆ ಬಿಡುವುದರಿಂದ ಪ್ರವಾಹ ಪರಿಸ್ಥಿತಿ ಸೃಷ್ಟಿಯಾಗುತ್ತದೆ ಎಂದು ಅವರು ವಿವರಿಸಿದ್ದಾರೆ.

ಈ ಹಂತದಲ್ಲಿ ಅದು ಯಾವುದೇ ಮುಂಜಾಗ್ರತಾ ಕ್ರಮವನ್ನು ವಹಿಸಿರುವ ಇತಿಹಾಸವೇ ಇಲ್ಲ ಎಂದು ಆ ವರದಿಯೇ ಹೇಳಿದೆ. ಈ ವಿಚಾರವನ್ನು ಸಮಿತಿಯು 2019ರ ಆ.4ರಂದು ಅಲ್ಲಿನ ಮುಖ್ಯಮಂತ್ರಿಗಳಿಗೂ ಪತ್ರ ಬರೆದು ತಿಳಿಸಿದೆ ಎಂದು ಎಂ.ಬಿ.ಪಾಟೀಲ್ ಹೇಳಿದ್ದಾರೆ.

ಇದೇ ವಿಚಾರವಾಗಿ 2019ರ ಆಗಸ್ಟ್‌ ನಲ್ಲಿ ಮಹಾರಾಷ್ಟ್ರದವರೇ ಆದ ಡಾ.ಅಮೋಲ್ ಪವಾರ್ ಎನ್ನುವವರು ಸುಪ್ರೀಂಕೋರ್ಟಿನಲ್ಲಿ ರಿಟ್ ಅರ್ಜಿ ಹಾಕಿದರು. ಪ್ರವಾಹ ಪರಿಸ್ಥಿತಿಯನ್ನು ತಪ್ಪಿಸಲು ಮಹಾರಾಷ್ಟ್ರ ಮತ್ತು ಕರ್ನಾಟಕ ಎರಡೂ ಮಾರ್ಗದರ್ಶಿ ಸೂತ್ರಗಳನ್ನು ರೂಪಿಸಬೇಕೆಂದು ಕೇಂದ್ರ ಸರಕಾರಕ್ಕೆ ಹೇಳಬೇಕೆಂದು ಅವರು ಕೋರಿದ್ದರು. ಇದಕ್ಕೆ ನಾವೂ ಉತ್ತರ ಕೊಟ್ಟಿದ್ದೆವು. ಏತನ್ಮಧ್ಯೆ, ಅರ್ಜಿದಾರರು ತಮ್ಮ ರಿಟ್ ಅನ್ನು ವಾಪಸ್ ತೆಗೆದುಕೊಂಡರು ಎಂದು ಎಂ.ಬಿ.ಪಾಟೀಲ್ ತಿಳಿಸಿದ್ದಾರೆ.

ಆಲಮಟ್ಟಿ ಅಣೆಕಟ್ಟೆ ಎತ್ತರ ಏರಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಯಾವ ವಿವಾದವೂ ಇಲ್ಲ. ಅದು ನ್ಯಾಯಾಧಿಕರಣದ ಮುಂದೆಯೇ ಬಗೆಹರಿದು ಹೋಗಿದೆ. ಈಗ ಇದ್ದಕ್ಕಿದ್ದಂತೆ ಮಹಾರಾಷ್ಟ್ರ ತಗಾದೆ ತೆಗೆದಿರುವುದು ಸರಿಯಲ್ಲ. ಪ್ರವಾಹದಂತಹ ಪರಿಸ್ಥಿತಿಯನ್ನು ಈಗಲೂ ಎರಡೂ ರಾಜ್ಯಗಳ ನಡುವೆ ಇರುವ, ಮೂರು ಸ್ತರಗಳ ‘ಅಂತರರಾಜ್ಯ ಪ್ರವಾಹ ಸಮನ್ವಯ ಸಮಿತಿ’ಯ ಮೂಲಕವೇ ಸುಗಮವಾಗಿ ನಿರ್ವಹಿಸಬಹುದು ಎಂದು ಅವರು ಹೇಳಿದ್ದಾರೆ.

ಆದರೆ, ಮಹಾರಾಷ್ಟ್ರವು ಕೆಟ್ಟ ರಾಜಕಾರಣಕ್ಕೆ ಮುಂದಾಗಿದೆ. ಏನಾದರೂ ಮಾಡಿ ಕರ್ನಾಟಕದ ಹಿತಕ್ಕೆ ಅಡ್ಡಗಾಲಾಗಬೇಕು ಎನ್ನುವುದೊಂದೇ ಅದರ ಉದ್ದೇಶವಾಗಿದೆ. ಹೀಗಾಗಿಯೇ ಅಲ್ಲಿನ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರು ಕೇಂದ್ರ ಜಲಶಕ್ತಿ ಸಚಿವ ಸಿ.ಆರ್.ಪಾಟೀಲ್ ಅವರಿಗೆ ಕರ್ನಾಟಕದ ವಿರುದ್ಧ ಪತ್ರ ಬರೆದಿದ್ದಾರೆ ಎಂದು ಎಂ.ಬಿ.ಪಾಟೀಲ್ ಟೀಕಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X