Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಸಚಿವ ಶರಣಬಸಪ್ಪ ದರ್ಶನಾಪುರ ವಜಾಕ್ಕೆ...

ಸಚಿವ ಶರಣಬಸಪ್ಪ ದರ್ಶನಾಪುರ ವಜಾಕ್ಕೆ ದಲಿತ ಸೇನೆ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ4 Aug 2025 6:19 PM IST
share
ಸಚಿವ ಶರಣಬಸಪ್ಪ ದರ್ಶನಾಪುರ ವಜಾಕ್ಕೆ ದಲಿತ ಸೇನೆ ಆಗ್ರಹ

ಬೆಂಗಳೂರು : ‘ಸರಕಾರಿ ಭೂಮಿ ಒತ್ತುವರಿ, ದಲಿತರಿಗೆ ಮೀಸಲಿಟ್ಟ ಹಣ ದುರುಪಯೋಗ ಆರೋಪದಲ್ಲಿ ಸಿಲುಕಿರುವ ಸಣ್ಣ ಕೈಗಾರಿಕಾ ಹಾಗೂ ಸಾರ್ವಜನಿಕ ಉದ್ದಿಮೆಗಳ ಸಚಿವ ಶರಣಬಸಪ್ಪ ದರ್ಶನಾಪುರ ಅವರನ್ನು ಸಂಪುಟದಿಂದ ವಜಾ ಮಾಡಬೇಕು. ಅಲ್ಲದೆ, ಅವರ ವಿರುದ್ದ ಕ್ರಿಮಿನಲ್ ಕೇಸ್ ದಾಖಲಿಸಬೇಕು ಎಂದು ಎಂದು ದಲಿತ ಸೇನೆ ಅಧ್ಯಕ್ಷ ಹನುಮಂತ ಜಿ.ಯಳಸಂಗಿ ಆಗ್ರಹಿಸಿದ್ದಾರೆ.

ಸೋಮವಾರ ನಗರದ ಪ್ರೆಸ್‍ಕ್ಲಬ್‍ನಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶೈಕ್ಷಣಿಕವಾಗಿ ಹಿಂದುಳಿದಿರುವ ಯಾದಗಿರಿ ಜಿಲ್ಲೆಯಲ್ಲಿ ಬಹುತೇಕ ಸರಕಾರಿ ಕಚೇರಿಗಳು ಮತ್ತು ಶಾಲೆಗಳು ಖಾಸಗಿ ಜಾಗಗಳಲ್ಲಿವೆ. ಸಚಿವ ದರ್ಶನಾಪುರ ಮತ್ತವರ ಕುಟುಂಬದವರು ಸರಕಾರಿ ಭೂಮಿ ಒತ್ತುವರಿ ಮಾಡಿಕೊಂಡು, ಅದೇ ಜಾಗಗಳನ್ನು ವಿವಿಧ ಇಲಾಖೆಗಳಿಗೆ ಬಾಡಿಗೆ ನೀಡುತ್ತಿದ್ದಾರೆ ಎಂದು ಆರೋಪಿಸಿದರು.

ಬಡವರಿಗೆ ಮೀಸಲಿಟ್ಟ 2 ಎಕರೆ ಜಮೀನಿನಲ್ಲಿ ಕಾನೂನು ಬಾಹಿರವಾಗಿ ಶಿಕ್ಷಣ ಸಂಸ್ಥೆಯನ್ನು ನಿರ್ಮಿಸಿದ್ದಲ್ಲದೆ, ಸದರಿ ಜಮೀನಿನಲ್ಲಿ ವಾಣಿಜ್ಯ ಮಳಿಗೆಗಳನ್ನು ನಿರ್ಮಿಸಿ, ತಾವೇ ಮಾಲಕರೆಂದು ದಾಖಲೆ ಸೃಷ್ಟಿಸಿ ಮಾರಾಟ ಮಾಡಿದ್ದಾರೆ. ಜಿಲ್ಲೆಯಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದ್ದು, ಸಚಿವರನ್ನು ಜನರು ಪ್ರಶ್ನೆ ಮಾಡಲಾಗದಂತಹ ಸ್ಥಿತಿ ಸೃಷ್ಟಿಸಿದ್ದಾರೆ. ಸಣ್ಣ ಮತ್ತು ಮಧ್ಯಮ ವರ್ಗಗಳ ಸಮಗ್ರ ಅಭಿವೃದ್ಧಿ ಯೋಜನೆಯ ಸರ್ವೆ ನಂ.826ರಲ್ಲಿ 1 ಎಕರೆ 32 ಗುಂಟೆ ಜಮೀನನ್ನು ಪಡೆದಿದ್ದು, ಅಲ್ಲಿನ ಎಲ್ಲ ಉದ್ಯಾನವನಗಳ ಸ್ಥಳಗಳನ್ನು ಒತ್ತುವರಿ ಮಾಡಿಕೊಂಡಿದ್ದಾರೆ ಎಂದು ಹನುಮಂತ ದೂರಿದರು.

ಕೊರಚ ಮತ್ತು ಕೊರಮ ಸಮುದಾಯದವರಿಗೆ ಮೀಸಲಿಟ್ಟ ಜಾಗವನ್ನು ಅಕ್ರಮವಾಗಿ ವಶಪಡಿಸಿಕೊಂಡಿದ್ದು, ಅಲ್ಲಿ ಕಟ್ಟಡ ನಿರ್ಮಿಸಲಾಗಿದೆ. ಮುಡಾ ಹಗರಣಕ್ಕಿಂತ ದೊಡ್ಡಮಟ್ಟದಲ್ಲಿ ಇಲ್ಲಿ ಅಕ್ರಮ ನಡೆಯುತ್ತಿದ್ದು, ಸಚಿವರ ಕುಟುಂಬದವರು ಗೂಂಡಾಗಿರಿ ಮಾಡುತ್ತಿದ್ದಾರೆ. ಪರಿಶಿಷ್ಟರ ಕಲ್ಯಾಣ ಯೋಜನೆ ಹೆಸರಿನಲ್ಲಿ ಹಣವನ್ನು ಕಬಳಿಸಿರುವ ದರ್ಶನಾಪುರ ವಿರುದ್ಧ ಎಸ್‍ಸಿ-ಎಸ್‍ಟಿ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಬೇಕು ಎಂದು ಹನುಮಂತ ಯಳಸಂಗಿ ಆಗ್ರಹಿಸಿದರು.

ಸುದ್ದಿಗೋಷ್ಠಿಯಲ್ಲಿ ಸೇನೆಯ ಉಪಾಧ್ಯಕ್ಷರಾದ ಎಂ.ಎ.ಸಿಂದಗಿಕರ್, ಶಾಂತಪ್ಪ ಬಿ.ಸಾಲಿಮನಿ, ಝಾವ್ಹೇದ್ ಖಾನ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X