ಬೆಂಗಳೂರು | ಮಹಿಳೆ ಎದುರು ಅಸಭ್ಯ ವರ್ತನೆ: ಪ್ರಕರಣ ದಾಖಲು

ಬೆಂಗಳೂರು : ಭದ್ರತಾ ಸಿಬ್ಬಂದಿಯೊಬ್ಬ ಮಹಿಳೆಗೆ ಎದುರು ಅಸಭ್ಯ ವರ್ತನೆ ತೋರಿದ್ದಲ್ಲದೆ, ಆಕೆಯ ಮೇಲೆ ಹಲ್ಲೆಗೈದಿರುವ ಆರೋಪದಡಿ ಇಲ್ಲಿನ ಕೆಂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುವುದಾಗಿ ವರದಿಯಾಗಿದೆ.
ಕೆಂಗೇರಿ ಉಪನಗರದ ಮಾರ್ಟ್‍ವೊಂದರಲ್ಲಿ ಭದ್ರತಾ ಸಿಬ್ಬಂದಿಯಾಗಿ ಕೆಲಸ ಮಾಡಿಕೊಂಡಿರುವ ವ್ಯಕ್ತಿಯು ಮಾರ್ಟ್‍ಗೆ ಬರುವ ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದ್ದಾನೆ. ಇದನ್ನು ಗಮನಿಸಿದ ಮಹಿಳೆಯೊಬ್ಬರು ಮಾರ್ಟ್‍ನ ವ್ಯವಸ್ಥಾಪಕರಿಗೆ ತಿಳಿಸಲು ಹೋಗುತ್ತಿದ್ದಾಗ ಅವರ ಮುಂದೆಯೇ ಧರಿಸಿದ್ದ ಪ್ಯಾಂಟ್ ತೆಗೆದು ಅಸಭ್ಯವಾಗಿ ವರ್ತಿಸಿದ್ದಲ್ಲದೇ, ಆಕೆಗೆ ಹಲ್ಲೆಗೈದು ಅಶ್ಲೀಲವಾಗಿ ನಿಂದಿಸಿದ್ದಾನೆ ಎಂದು ಸಂತ್ರಸ್ತ ಮಹಿಳೆಯು ಆರೋಪಿಸಿದ್ದಾರೆ.
ಈ ಬಗ್ಗೆ ಮಹಿಳೆಯು ಕೆಂಗೇರಿ ಠಾಣೆ ಪೊಲೀಸರಿಗೆ ದೂರು ನೀಡಿದ್ದು ಪ್ರಕರಣ ದಾಖಲಿಸಿಕೊಂಡ ಪೊಲೀಸರು ಮುಂದಿನ ಕ್ರಮ ಕೈಗೊಂಡಿರುವುದಾಗಿ ತಿಳಿಸಿದ್ದಾರೆ.
Next Story





