Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಮೀಸಲಾತಿ ಕುರಿತ ಹೈಕೋರ್ಟ್ ತೀರ್ಪಿನ...

ಮೀಸಲಾತಿ ಕುರಿತ ಹೈಕೋರ್ಟ್ ತೀರ್ಪಿನ ಬಗ್ಗೆ ಸಚಿವ ಸಂಪುಟದಲ್ಲಿ ಚರ್ಚಿಸಿ ಮುಂದಿನ ತೀರ್ಮಾನ: ಡಿಸಿಎಂ ಪರಮೇಶ್ವರ್

ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸೇರಿದಂತೆ ಎಲ್ಲ ಕಾನೂನಾತ್ಮಕ ಆಯ್ಕೆಗಳ ಪರಿಶೀಲನೆ

ವಾರ್ತಾಭಾರತಿವಾರ್ತಾಭಾರತಿ13 Oct 2026 12:27 PM IST
share
ಮೀಸಲಾತಿ ಕುರಿತ ಹೈಕೋರ್ಟ್ ತೀರ್ಪಿನ ಬಗ್ಗೆ ಸಚಿವ ಸಂಪುಟದಲ್ಲಿ ಚರ್ಚಿಸಿ ಮುಂದಿನ ತೀರ್ಮಾನ: ಡಿಸಿಎಂ ಪರಮೇಶ್ವರ್

ಬೆಂಗಳೂರು: ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ಮೀಸಲಾತಿ ಹೆಚ್ಚಳಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ನೀಡಿರುವ ತೀರ್ಪಿನ ಕುರಿತು ಸಚಿವ ಸಂಪುಟದಲ್ಲಿ ಸಮಗ್ರವಾಗಿ ಚರ್ಚಿಸಿ, ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸುವುದು ಸೇರಿದಂತೆ ಮುಂದಿನ ಕಾನೂನಾತ್ಮಕ ಕ್ರಮಗಳ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.

ಮಂಗಳವಾರ ಸದಾಶಿವ ನಗರದ ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹಿಂದಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ಸರ್ಕಾರವು ಮೀಸಲಾತಿಯ ಶೇ.50ರ ಮಿತಿಯನ್ನು ಮೀರಿ, ಒಟ್ಟು ಮೀಸಲಾತಿಯನ್ನು ಶೇ.56ಕ್ಕೆ ಹೆಚ್ಚಿಸುವ ತೀರ್ಮಾನ ಕೈಗೊಂಡಿತ್ತು. ಪರಿಶಿಷ್ಟ ಜಾತಿಯ ಮೀಸಲಾತಿಯನ್ನು ಶೇ.15ರಿಂದ ಶೇ.17ಕ್ಕೆ ಹಾಗೂ ಪರಿಶಿಷ್ಟ ಪಂಗಡಗಳ ಮೀಸಲಾತಿಯನ್ನು ಶೇ.3ರಿಂದ ಶೇ.7ಕ್ಕೆ ಹೆಚ್ಚಿಸಲಾಗಿತ್ತು ಎಂದು ಹೇಳಿದರು.

ಹಿಂದಿನ ಸರ್ಕಾರವು ಈ ಸಂಬಂಧ ಆದೇಶ ಹೊರಡಿಸಿ ಕ್ರಮಗಳನ್ನು ಕೈಗೊಂಡಿತ್ತು. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ನಂತರವೂ ಅನೇಕ ನೇಮಕಾತಿ ಪ್ರಕ್ರಿಯೆಗಳಲ್ಲಿ ಈ ಮೀಸಲಾತಿ ಪ್ರಮಾಣವನ್ನು ಅನುಸರಿಸಿದೆ. ಮೀಸಲಾತಿ ಹೆಚ್ಚಳವನ್ನು ಪ್ರಶ್ನಿಸಿ ವಿವಿಧ ವ್ಯಕ್ತಿಗಳು ನ್ಯಾಯಾಲಯದ ಮೊರೆ ಹೋದ ಸಂದರ್ಭದಲ್ಲಿ ರಾಜ್ಯ ಸರ್ಕಾರವೂ ತನ್ನ ನಿಲುವನ್ನು ಮಂಡಿಸಿ, ಮೀಸಲಾತಿ ಹೆಚ್ಚಳವನ್ನು ಎತ್ತಿಹಿಡಿಯುವಂತೆ ನ್ಯಾಯಾಲಯದಲ್ಲಿ ಮನವಿ ಸಲ್ಲಿಸಿತ್ತು ಎಂದು ವಿವರಿಸಿದರು.

ಮೀಸಲಾತಿಯನ್ನು ಯಾವ ಉದ್ದೇಶಕ್ಕಾಗಿ ಜಾರಿಗೆ ತರಲಾಗಿದೆ ಎಂಬುದನ್ನು ಮೂಲಭೂತವಾಗಿ ಅರ್ಥ ಮಾಡಿಕೊಳ್ಳಬೇಕಿದೆ. ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಮೀಸಲಾತಿಯನ್ನು ಕೇವಲ ಆಡಳಿತಾತ್ಮಕ ಆದೇಶಗಳ ಮೂಲಕ ಜಾರಿಗೊಳಿಸದೆ, ಸಂವಿಧಾನದಲ್ಲಿಯೇ ಅವಕಾಶ ಕಲ್ಪಿಸಿರುವುದರ ಹಿಂದೆ ಮಹತ್ವದ ಸಾಮಾಜಿಕ ಉದ್ದೇಶವಿದೆ ಎಂದು ಹೇಳಿದರು.

ಮೀಸಲಾತಿ ಹೆಚ್ಚಳವನ್ನು ತಿರಸ್ಕರಿಸಿರುವ ಹೈಕೋರ್ಟ್ ತೀರ್ಪಿನ ಬಗ್ಗೆ ವೈಯಕ್ತಿಕ ಅಭಿಪ್ರಾಯ ವ್ಯಕ್ತಪಡಿಸಿದ ಡಾ.ಜಿ.ಪರಮೇಶ್ವರ್, ಕರ್ನಾಟಕದ ಪರಿಸ್ಥಿತಿಯನ್ನು ಅಸಾಧಾರಣ ಸಂದರ್ಭವೆಂದು ಪರಿಗಣಿಸಿ ವಿಶೇಷ ಪ್ರಕರಣವಾಗಿ ಪರಿಶೀಲಿಸುವ ಅವಕಾಶವಿತ್ತು ಎಂದು ಹೇಳಿದರು.

ತಮಿಳುನಾಡಿನಲ್ಲಿ ಶೇ.69ರಷ್ಟು ಮೀಸಲಾತಿಗೆ ಸಂವಿಧಾನ ತಿದ್ದುಪಡಿಯ ಮೂಲಕ ಅವಕಾಶ ಕಲ್ಪಿಸಲಾಗಿದೆ. ಆ ರಾಜ್ಯಕ್ಕೆ ಅಂತಹ ಅವಕಾಶ ದೊರೆತಿರುವಾಗ, ಕರ್ನಾಟಕದಲ್ಲಿ ಶೇ.50ರ ಮಿತಿಗಿಂತ ಹೆಚ್ಚುವರಿಯಾಗಿ ಶೇ.6ರಷ್ಟು ಮೀಸಲಾತಿ ಕಲ್ಪಿಸಿರುವುದನ್ನೂ ಅದರ ಸಾಮಾಜಿಕ ಹಿನ್ನೆಲೆಯ ಆಧಾರದಲ್ಲಿ ವಿಶೇಷ ಪ್ರಕರಣವಾಗಿ ಪರಿಗಣಿಸಬಹುದಿತ್ತು ಎಂಬುದು ನನ್ನ ವೈಯಕ್ತಿಕ ಅಭಿಪ್ರಾಯ ಎಂದು ತಿಳಿಸಿದರು.

ಮೀಸಲಾತಿ ಹೆಚ್ಚಳದ ಹಿಂದಿರುವ ಸಾಮಾಜಿಕ ಉದ್ದೇಶ ಹಾಗೂ ಅವಕಾಶವಂಚಿತ ಸಮುದಾಯಗಳ ಹಿತಾಸಕ್ತಿಯನ್ನು ಪರಿಗಣಿಸಿ ನ್ಯಾಯಾಲಯವು ಅಸಾಧಾರಣ ಸಂದರ್ಭದ ಆಧಾರದಲ್ಲಿ ತೀರ್ಮಾನ ಕೈಗೊಳ್ಳಬಹುದಿತ್ತು. ಈ ಹಿನ್ನೆಲೆಯಲ್ಲಿ ಮೀಸಲಾತಿ ಹೆಚ್ಚಳವನ್ನು ತಿರಸ್ಕರಿಸಿರುವುದು ಸಮಂಜಸವಲ್ಲ ಎಂದು ಹೇಳಿದರು.

ಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಸಲ್ಲಿಸುವ ಬಗ್ಗೆ ಸಂಪುಟ ತೀರ್ಮಾನ

ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಲಿದೆಯೇ ಎಂಬ ಪತ್ರಕರ್ತರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಈ ಕುರಿತು ಸಚಿವ ಸಂಪುಟದಲ್ಲಿ ಚರ್ಚಿಸಿ ತೀರ್ಮಾನ ಕೈಗೊಳ್ಳಬೇಕಿದೆ ಎಂದು ತಿಳಿಸಿದರು.

ಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಸಲ್ಲಿಸಬೇಕೇ ಅಥವಾ ಸಂವಿಧಾನದ ಚೌಕಟ್ಟಿನಲ್ಲಿ ಬೇರೆ ಯಾವ ಕಾನೂನಾತ್ಮಕ ಕ್ರಮಗಳನ್ನು ಕೈಗೊಳ್ಳಬಹುದು ಎಂಬುದನ್ನು ಸಚಿವ ಸಂಪುಟದಲ್ಲಿ ಚರ್ಚಿಸಲಾಗುವುದು. ಮುಖ್ಯಮಂತ್ರಿ ಹಾಗೂ ಸಚಿವ ಸಂಪುಟವು ಎಲ್ಲ ಸಾಧಕ-ಬಾಧಕಗಳನ್ನು ಪರಿಗಣಿಸಿ ಮುಂದಿನ ತೀರ್ಮಾನ ಕೈಗೊಳ್ಳಲಿದೆ ಎಂದು ಸ್ಪಷ್ಟಪಡಿಸಿದರು.

ಮೀಸಲಾತಿ ವಿಚಾರದಲ್ಲಿ ಸರ್ಕಾರ ನಿರ್ಲಕ್ಷ್ಯ ವಹಿಸಿದೆ ಎಂಬ ಬಿಜೆಪಿ ನಾಯಕರ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ನ್ಯಾಯಾಲಯದ ತೀರ್ಪಿನ ಮೇಲೆ ಸರ್ಕಾರ ಪ್ರಭಾವ ಬೀರುವುದಕ್ಕೆ ಸಾಧ್ಯವಿಲ್ಲ ಎಂದು ಹೇಳಿದರು.

ನ್ಯಾಯಾಧೀಶರು ಕಾನೂನಿನ ಪ್ರಕಾರ ತಮ್ಮ ತೀರ್ಮಾನಗಳನ್ನು ಕೈಗೊಳ್ಳುತ್ತಾರೆ. ಸರ್ಕಾರವು ನ್ಯಾಯಾಧೀಶರ ಮೇಲೆ ಪ್ರಭಾವ ಬೀರಿ ನಿರ್ದಿಷ್ಟ ತೀರ್ಪು ನೀಡುವಂತೆ ಹೇಳಲು ಸಾಧ್ಯವಿಲ್ಲ. ನ್ಯಾಯಾಲಯದ ತೀರ್ಪನ್ನು ಕಾನೂನಿನ ಚೌಕಟ್ಟಿನಲ್ಲಿ ಮೇಲ್ಮಟ್ಟದ ನ್ಯಾಯಾಲಯದಲ್ಲಿ ಪ್ರಶ್ನಿಸಲು ಅವಕಾಶವಿದೆ. ಆ ಅವಕಾಶವನ್ನು ಬಳಸಿಕೊಳ್ಳುವ ಕುರಿತು ಸಚಿವ ಸಂಪುಟ ತೀರ್ಮಾನಿಸಲಿದೆ ಎಂದು ತಿಳಿಸಿದರು.

ಈಗಾಗಲೇ ನಡೆದಿರುವ ನೇಮಕಾತಿಗಳ ಪರಿಸ್ಥಿತಿ ಏನಾಗುತ್ತದೆ? ನ್ಯಾಯಾಲಯದ ಆದೇಶವು ಹಿಂದಿನ ದಿನಾಂಕದಿಂದ ಅನ್ವಯವಾಗುತ್ತದೆಯೇ ಅಥವಾ ಮುಂದಿನ ಪ್ರಕ್ರಿಯೆಗಳಿಗೆ ಮಾತ್ರ ಅನ್ವಯವಾಗುತ್ತದೆಯೇ? ಇಂತಹ ಎಲ್ಲ ಕಾನೂನಾತ್ಮಕ ಪ್ರಶ್ನೆಗಳು ಹಾಗೂ ಅವುಗಳಿಂದ ಉಂಟಾಗಬಹುದಾದ ಪರಿಣಾಮಗಳನ್ನು ಸಮಗ್ರವಾಗಿ ಚರ್ಚಿಸಬೇಕಿದೆ ಎಂದು ತಿಳಿಸಿದರು.

ಈ ಕುರಿತು ಅಡ್ವೊಕೇಟ್ ಜನರಲ್ ಹಾಗೂ ಕಾನೂನು ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಿ, ಕಾನೂನಿನ ಪ್ರಕಾರ ಯಾವ ಕ್ರಮಗಳು ಸಾಧ್ಯ ಎಂಬುದನ್ನು ಪರಿಶೀಲಿಸಿದ ನಂತರವೇ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಿದರು.

ಈಗ ಒಟ್ಟು ಮೀಸಲಾತಿ ಪ್ರಮಾಣವನ್ನು ಕಡಿತಗೊಳಿಸಬೇಕಾದ ಪರಿಸ್ಥಿತಿ ಎದುರಾದರೆ ಒಳಮೀಸಲಾತಿ ಪ್ರಮಾಣಗಳನ್ನೂ ಅನುಪಾತದ ಆಧಾರದಲ್ಲಿ ಪರಿಷ್ಕರಿಸುವ ಸಾಧ್ಯತೆ ಇದೆ. ಗಣಿತದ ದೃಷ್ಟಿಯಿಂದ ಅಂತಹ ಪರಿಷ್ಕರಣೆ ಮಾಡುವುದು ಕಷ್ಟದ ವಿಚಾರವಲ್ಲ. ಆದರೆ ಇದರಿಂದ ವಿವಿಧ ಸಮುದಾಯಗಳಿಗೆ ದೊರೆಯಬೇಕಾದ ಅವಕಾಶಗಳು ಕಡಿಮೆಯಾಗುವ ಸಾಧ್ಯತೆಯೇ ಹೆಚ್ಚು ಆತಂಕಕಾರಿ ವಿಷಯವಾಗಿದೆ ಎಂದು ಹೇಳಿದರು.

Tags

High CourtReservation VerdictCabinet DiscussionParameshwar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X