Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಲಂಡನ್ ಡೈರಿ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಪರೀಕ್ಷಾ ಸಮಯದಲ್ಲಿ ಹೈಸ್ಕೂಲ್...

ಪರೀಕ್ಷಾ ಸಮಯದಲ್ಲಿ ಹೈಸ್ಕೂಲ್ ಶಿಕ್ಷಕರನ್ನು ಜನಗಣತಿಗೆ ಬಿಡುವುದಿಲ್ಲ: ಸಚಿವ ಮಧು ಬಂಗಾರಪ್ಪ

''ಮುಂದಿನ ವರ್ಷದಿಂದ ಸರಕಾರಿ ಶಾಲೆಗಳಲ್ಲಿ ದ್ವಿಭಾಷಾ ನೀತಿ ಜಾರಿ''

ಅಮ್ಜದ್ ಖಾನ್ ಎಂ./ವಾರ್ತಾಭಾರತಿಅಮ್ಜದ್ ಖಾನ್ ಎಂ./ವಾರ್ತಾಭಾರತಿ27 Nov 2026 2:53 PM IST
share
ಪರೀಕ್ಷಾ ಸಮಯದಲ್ಲಿ ಹೈಸ್ಕೂಲ್ ಶಿಕ್ಷಕರನ್ನು ಜನಗಣತಿಗೆ ಬಿಡುವುದಿಲ್ಲ: ಸಚಿವ ಮಧು ಬಂಗಾರಪ್ಪ

ಬೆಂಗಳೂರು, ನ.27: ಪರೀಕ್ಷಾ ಸಮಯದಲ್ಲಿ ಹೈಸ್ಕೂಲ್ ಶಿಕ್ಷಕರನ್ನು ಯಾವುದೇ ಕಾರಣಕ್ಕೂ ಜನಗಣತಿ ಇತ್ಯಾದಿ ಬಾಹ್ಯ ಕಾರ್ಯಗಳಿಗೆ ಬಳಸಿಕೊಳ್ಳಲು ಅವಕಾಶ ನೀಡುವುದಿಲ್ಲ. ಈ ವಿಚಾರವಾಗಿ ಸಚಿವ ಸಂಪುಟದಲ್ಲಿ ಚರ್ಚೆ ನಡೆಸುತ್ತೇನೆ. ಒಂದು ವೇಳೆ ಅಂತಹ ಪರಿಸ್ಥಿತಿ ಎದುರಾದರೆ ಎಂತಹ ಹೋರಾಟಕ್ಕಾದರೂ ನಾನು ಸಿದ್ಧ. ನಿಮ್ಮೊಂದಿಗೆ ನಾನಿದ್ದೇನೆ, ನಾವೆಲ್ಲರೂ ಸೇರಿ ಹೋರಾಟ ಮಾಡೋಣ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಶಿಕ್ಷಕರಿಗೆ ಭರವಸೆ ನೀಡಿದ್ದಾರೆ.

ಶಾಲಾ ಶಿಕ್ಷಣ ಇಲಾಖೆ ವತಿಯಿಂದ 2026-27ನೇ ಸಾಲಿನ ಎಸೆಸೆಲ್ಸಿ ಪರೀಕ್ಷೆಯ ಫಲಿತಾಂಶ ಸುಧಾರಣೆಗಾಗಿ ವಿಷಯವಾರು ಬೆಂಗಳೂರಿನ ಸ್ಟೆಲ್ಲಾ ಮಾರಿಸ್ ಪ್ರೌಢಶಾಲೆಯಲ್ಲಿ ಆಯೋಜಿಸಿದ್ದ ಬೆಂಗಳೂರು ಉತ್ತರ ವಲಯದ ಸಂಪನ್ಮೂಲ ಶಿಕ್ಷಕರ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.

ಮಕ್ಕಳಿಗೆ ಪರೀಕ್ಷಾ ಸಮಯ ಹತ್ತಿರವಾಗುತ್ತಿದ್ದು, ಪೂರ್ವಭಾವಿ ಪರೀಕ್ಷೆಗಳನ್ನು ನಡೆಸಿ ಅವರನ್ನು ಸಜ್ಜುಗೊಳಿಸುವ ಜವಾಬ್ದಾರಿ ಶಿಕ್ಷಕರ ಮೇಲಿದೆ. ಈ ಸಂದರ್ಭದಲ್ಲಿ ಶಿಕ್ಷಕರನ್ನು ಇತರ ಕಾರ್ಯಗಳಿಗೆ ನಿಯೋಜಿಸುವುದು ಸರಿಯಲ್ಲ. ಮಕ್ಕಳ ಭವಿಷ್ಯವೇ ನಮಗೆ ಮುಖ್ಯ. ಶಿಕ್ಷಕರು ಯಾವುದೇ ಒತ್ತಡವಿಲ್ಲದೆ ಬೋಧನಾ ಕಾರ್ಯದಲ್ಲಿ ತೊಡಗಿಸಿಕೊಳ್ಳುವಂತಾಗಬೇಕು ಎಂದು ಸಚಿವರು ಹೇಳಿದರು.

ಈಗಾಗಲೇ ಧಾರವಾಡದ ಐಐಟಿಯಲ್ಲಿ ಮಿಷನ್ 60+ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗಿದೆ. ಬೆಂಗಳೂರು ವ್ಯಾಪ್ತಿಯಲ್ಲಿ ಮಿಷನ್ 70+ ಗುರಿಯೊಂದಿಗೆ ಕಾರ್ಯನಿರ್ವಹಿಸಬೇಕು. ನಮ್ಮ ಶಿಕ್ಷಕರ ಸಾಮರ್ಥ್ಯದ ಮೇಲೆ ನನಗೆ ಸಂಪೂರ್ಣ ವಿಶ್ವಾಸವಿದ್ದು, ಈ ಗುರಿಯನ್ನು ಸಾಧಿಸುವ ಶಕ್ತಿ ಅವರಿಗಿದೆ. ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಶೇ.100ರಷ್ಟು ಫಲಿತಾಂಶ ಸಾಧಿಸುವ ನಿಟ್ಟಿನಲ್ಲಿ ಎಲ್ಲರೂ ಶ್ರಮಿಸಬೇಕು ಎಂದರು.

ಮುಂದಿನ ವರ್ಷದಿಂದ ಸರಕಾರಿ ಶಾಲೆಗಳಲ್ಲಿ ದ್ವಿಭಾಷಾ ನೀತಿ ಜಾರಿ

ಮಕ್ಕಳ ಭವಿಷ್ಯದ ದೃಷ್ಟಿಯಿಂದ ದ್ವಿಭಾಷಾ ನೀತಿ ಅತ್ಯಂತ ಮಹತ್ವದ್ದಾಗಿದೆ. ಮುಂದಿನ ಶೈಕ್ಷಣಿಕ ವರ್ಷದಿಂದ ರಾಜ್ಯದ ಎಲ್ಲ ಸರಕಾರಿ ಶಾಲೆಗಳಲ್ಲಿ ದ್ವಿಭಾಷಾ ನೀತಿಯನ್ನು ಜಾರಿಗೆ ತರಲಾಗುವುದು. ಮಕ್ಕಳು ಕನ್ನಡದ ಜೊತೆಗೆ ಇಂಗ್ಲಿಷ್ ಭಾಷೆಯಲ್ಲಿಯೂ ಉತ್ತಮ ಜ್ಞಾನ ಹೊಂದಬೇಕು. ಕನ್ನಡ ಭಾಷೆಯ ಮೇಲಿನ ಹಿಡಿತದ ಜೊತೆಗೆ ಇಂಗ್ಲಿಷ್ ಕಲಿಕೆಯೂ ಅವರಿಗೆ ಭವಿಷ್ಯದಲ್ಲಿ ಹೆಚ್ಚಿನ ಅವಕಾಶಗಳನ್ನು ಕಲ್ಪಿಸಲಿದೆ ಎಂದು ತಿಳಿಸಿದರು.

ಇದಕ್ಕೆ ಉದಾಹರಣೆಯಾಗಿ ತಮ್ಮ ಸಹೋದರಿ ಗೀತಾ ಶಿವರಾಜ್ಕುಮಾರ್ ಅವರ ಶಿಕ್ಷಣವನ್ನು ಉಲ್ಲೇಖಿಸಿದ ಸಚಿವರು, ಅವರು ಶಿವಮೊಗ್ಗದಲ್ಲಿ ಕನ್ನಡ ಮಾಧ್ಯಮದಲ್ಲಿ ಶಿಕ್ಷಣ ಪಡೆದು, ಇದೇ ಸ್ಟೆಲ್ಲಾ ಮಾರಿಸ್ ಪ್ರೌಢಶಾಲೆಯಲ್ಲಿ ಇಂಗ್ಲಿಷ್ ಮಾಧ್ಯಮದಲ್ಲಿ ಅಧ್ಯಯನ ಮುಂದುವರಿಸಿದ್ದಾರೆ. ಬಳಿಕ ಇಂಗ್ಲಿಷ್ ಸಾಹಿತ್ಯದಲ್ಲಿ ಎಂ.ಎ. ಪದವಿಯನ್ನು ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ. ಮನೆಯಲ್ಲಿ ಅವರು ಅತ್ಯುತ್ತಮವಾಗಿ ಇಂಗ್ಲಿಷ್ ಮಾತನಾಡುತ್ತಾರೆ. ಕನ್ನಡ ಮಾಧ್ಯಮದಲ್ಲಿ ಓದಿದರೂ ಇಂಗ್ಲಿಷ್ ಭಾಷೆಯಲ್ಲಿ ಪ್ರಾವೀಣ್ಯ ಸಾಧಿಸಲು ಸಾಧ್ಯ ಎಂಬುದಕ್ಕೆ ಇದು ಉತ್ತಮ ಉದಾಹರಣೆ ಎಂದರು.

ಸರಕಾರಿ ಶಾಲೆಗಳಿಗೆ ಉಚಿತ ವಿದ್ಯುತ್ ಸೌಲಭ್ಯ ಕಲ್ಪಿಸಲಾಗಿದ್ದು, ಇದರಿಂದ ಹೆಚ್ಚುವರಿ ತರಗತಿಗಳನ್ನು ನಡೆಸಲು ಅನುಕೂಲವಾಗಿದೆ. ಕಳೆದ ಸಾಲಿನಲ್ಲಿಯೇ ಇದರ ಸಕಾರಾತ್ಮಕ ಫಲಿತಾಂಶವನ್ನು ನೋಡಿದ್ದೇವೆ. ಈ ಬಾರಿಯೂ ಉತ್ತಮ ಫಲಿತಾಂಶ ಸಾಧಿಸುವ ಮೂಲಕ ಶೇ.100ರಷ್ಟು ಫಲಿತಾಂಶದ ಗುರಿ ತಲುಪಬೇಕು. ಈ ಕಾರ್ಯಾಗಾರವು ಶಿಕ್ಷಕರ ಬೋಧನಾ ಸಾಮರ್ಥ್ಯ ವೃದ್ಧಿಸುವುದರ ಜೊತೆಗೆ ಮಕ್ಕಳ ಕಲಿಕೆಗೆ ಪೂರಕವಾಗಲಿ ಎಂದು ಆಶಿಸಿದರು.

ಶಿಕ್ಷಕರನ್ನು ಯಾವುದೇ ಸಂದರ್ಭದಲ್ಲಿಯೂ ಕೈಬಿಡುವ ಪ್ರಶ್ನೆಯೇ ಇಲ್ಲ. ಎಸ್ಐಆರ್ ವಿಚಾರವನ್ನು ನನಗೆ ಬಿಡಿ. ನೀವು ಮಕ್ಕಳಿಗೆ ಉತ್ತಮವಾಗಿ ಪಾಠ ಮಾಡುವತ್ತ ಗಮನಹರಿಸಿ. ಶಿಕ್ಷಣವೆಂಬುದು ಹಣ ಕೊಟ್ಟು ಖರೀದಿಸುವ ವಸ್ತುವಲ್ಲ; ಅದನ್ನು ನಿಜವಾದ ಅರ್ಥದಲ್ಲಿ ಶಿಕ್ಷಕರಿಂದಲೇ ಪಡೆಯಲು ಸಾಧ್ಯ. ಶಿಕ್ಷಕರ ಬಗ್ಗೆ ನನಗೆ ಅಪಾರ ಗೌರವವಿದೆ ಎಂದು ಹೇಳಿದರು.

ತಮ್ಮ ತಂದೆ, ಮಾಜಿ ಮುಖ್ಯಮಂತ್ರಿ ಎಸ್. ಬಂಗಾರಪ್ಪ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಜಾರಿಗೆ ತಂದಿದ್ದ 'ಅಕ್ಷರ' ಕಾರ್ಯಕ್ರಮವನ್ನು ಸ್ಮರಿಸಿದ ಸಚಿವರು, ಪ್ರತಿನಿತ್ಯ ಮಗುವಿಗೆ ಒಂದು ರೂಪಾಯಿ ಪ್ರೋತ್ಸಾಹಧನ ನೀಡುವ ಮೂಲಕ ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ಹಾಜರಾತಿ ಹೆಚ್ಚಳಕ್ಕೆ ಕಾರಣವಾಗಿದ್ದರು. ಅದೇ ರೀತಿಯಲ್ಲಿ ಮುಖ್ಯಮಂತ್ರಿಯ ಮಗನಾಗಿ ಶಿಕ್ಷಕರಿಗೆ ಮತ್ತು ಮಕ್ಕಳಿಗೆ ಅಗತ್ಯವಿರುವ ಎಲ್ಲ ಸಹಕಾರ ನೀಡಲು ನಾನು ಸದಾ ಸಿದ್ಧನಿದ್ದೇನೆ ಎಂದು ಭರವಸೆ ನೀಡಿದರು.

ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ರಷ್ಮಿ ಮಹೇಶ್, ಸ್ಟೆಲ್ಲಾ ಮಾರಿಸ್ ಪ್ರೌಢಶಾಲೆಯ ಮುಖ್ಯಶಿಕ್ಷಕಿ ಅನಿತಾ ಡಿಸೋಜ, ಸಚಿವರ ಆಪ್ತ ಕಾರ್ಯದರ್ಶಿ ಕಿಶೋರ್ ಕುಮಾರ್ ಸೇರಿದಂತೆ ಇಲಾಖೆಯ ಅಧಿಕಾರಿಗಳು ಹಾಗೂ ಸಂಪನ್ಮೂಲ ಶಿಕ್ಷಕರು ಉಪಸ್ಥಿತರಿದ್ದರು.

Tags

No Census DutyHigh School TeachersExam PeriodMadhu Bangarappa
share
ಅಮ್ಜದ್ ಖಾನ್ ಎಂ./ವಾರ್ತಾಭಾರತಿ
ಅಮ್ಜದ್ ಖಾನ್ ಎಂ./ವಾರ್ತಾಭಾರತಿ

ಅಮ್ಜದ್ ಖಾನ್ ಎಂ. ಬೆಂಗಳೂರು ವಿಶ್ವವಿದ್ಯಾಲಯದ ಸಂವಹನ ವಿಭಾಗದಿಂದ ಸ್ನಾತಕೋತ್ತರ ಪದವಿ ಪಡೆದಿದ್ದು, 2007ರಿಂದ ವಾರ್ತಾಭಾರತಿ ಕನ್ನಡ ದೈನಿಕ ಬೆಂಗಳೂರು ಆವೃತ್ತಿಯಲ್ಲಿ ಹಿರಿಯ ರಾಜಕೀಯ ವರದಿಗಾರರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ. ಪ್ರವಾಸಿ ಅನುಭವದ ವಿಶೇಷ ಲೇಖನಗಳನ್ನು ಬರೆಯುವುದು, ಪುಸ್ತಕ ಓದುವುದು‌, ಸಾಮಾಜಿಕ ಸೇವಾ ಕಾರ್ಯಗಳು ಇವರ ಹವ್ಯಾಸವಾಗಿವೆ.

Next Story
X