Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಒಳಮೀಸಲಾತಿ ಜಾರಿಯಲ್ಲಿ ವಿಳಂಬ ನೀತಿ ಬೇಡ...

ಒಳಮೀಸಲಾತಿ ಜಾರಿಯಲ್ಲಿ ವಿಳಂಬ ನೀತಿ ಬೇಡ : ಮಾದಿಗ ಸಮುದಾಯಗಳ ಸ್ವಾಭಿಮಾನದ ಒಕ್ಕೂಟ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ29 Jan 2025 11:57 PM IST
share
Photo of Letter of appeal

ಬೆಂಗಳೂರು : ಸುಪ್ರೀಂ ಕೋರ್ಟ್ ಆದೇಶದಂತೆ ಸೂಕ್ತವಾದ ದತ್ತಾಂಶಗಳನ್ನು ಪರಿಗಣಿಸಿ ವಿಳಂಬ ನೀತಿ ಅನುಸರಿಸದೆ, ರಾಜ್ಯ ಸರಕಾರವು ಒಳಮೀಸಲಾತಿಯನ್ನು ಜಾರಿಗೊಳಿಸಬೇಕು ಎಂದು ಒಳಮೀಸಲಾತಿ ಜಾರಿಗಾಗಿ ಮಾದಿಗ ಸಮುದಾಯಗಳ ಸ್ವಾಭಿಮಾನದ ಒಕ್ಕೂಟ ಆಗ್ರಹಿಸಿದೆ.

ಬುಧವಾರ ರಾಜ್ಯದ ಎಲ್ಲ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಮನವಿ ನೀಡಿದ ಒಕ್ಕೂಟದ ನಿಯೋಗ, ನ್ಯಾ.ಸದಾಶಿವ ಆಯೋಗದ ವರದಿಯ ಒಳಮೀಸಲಾತಿ ವರ್ಗೀಕರಣದ ಶಿಫಾರಸ್ಸನ್ನು ಪರಿಗಣಿಸಿ ಹೆಚ್ಚಳವಾಗಿರುವ ಮೀಸಲಾತಿಯ ಶೇ.17ರ ಅನುಪಾತದಲ್ಲಿ ಹೆಚ್ಚುವರಿ ಶೇ.2ರಷ್ಟು ಮೀಸಲಾತಿಯನ್ನು ಜನಸಂಖ್ಯೆಗೆ ಅನುಗುಣವಾಗಿ ಎಬಿಸಿಡಿ ವರ್ಗೀಕರಣದ ಗುಂಪುಗಳಿಗೆ ಸಮಾನವಾಗಿ ಹಂಚಬೇಕು. ಆಪೈಕಿ ಮಾದಿಗ ಮತ್ತು ಸಂಬಂಧಿತ ಜಾತಿಗಳಿಗೆ ಶೇ.7ರಷ್ಟು ಮೀಸಲಾತಿ ನಿಗಧಿಪಡಿಸಬೇಕು ಎಂದು ಒತ್ತಾಯಿಸಿದೆ.

ಸಚಿವ ಸಂಪುಟವು ನಿರ್ಣಯದಂತೆ ಒಳಮೀಸಲಾತಿ ಜಾರಿಯಾಗುವವರೆಗೂ ಸರಕಾರಿ ಉದ್ಯೋಗಗಳಲ್ಲಿ ಸುಮಾರು 37 ಸಾವಿರ ಹುದ್ದೆಗಳ ನೇಮಕಾತಿಗಳನ್ನು ತಡೆಹಿಡಿಯಬೇಕು. ನಿಜವಾದ 49 ಅಲೆಮಾರಿಗಳನ್ನು ಪ್ರತ್ಯೇಕವಾಗಿ ಗುರುತಿಸಿ ಶೇ.1 ಕ್ಕಿಂತ ಹೆಚ್ಚು ಒಳಮೀಸಲಾತಿಯನ್ನು ನೀಡಿ ಪ್ರತ್ಯೇಕ ಅಭಿವೃದ್ಧಿ ನಿಗಮವನ್ನು ಸ್ಥಾಪಿಸಬೇಕು ಎಂದು ಒತ್ತಾಯಿಸಿದೆ.

ಸಮಾಜ ಕಲ್ಯಾಣ ಇಲಾಖೆಯ ಬಜೆಟ್‍ನಲ್ಲಿ ಮತ್ತು ಎಸ್‍ಸಿಎಸ್‍ಪಿ, ಟಿಎಸ್‍ಪಿ ಅನುದಾನದಲ್ಲಿ ಮಾದಿಗ, ಸಮಗಾರ, ಡೋಹರ, ಮಚಗಾರ ಸಮುದಾಯಗಳ ಜನಸಂಖ್ಯೆಯ ಆಧಾರದ ಮೇಲೆ ಪ್ರತ್ಯೇಕವಾಗಿ ಅನುದಾನ ಮೀಸಲಿಟ್ಟ ಅದೇ ವರ್ಷ ವೆಚ್ಚ ಮಾಡಲು ಕ್ರಮ ಕೈಗೊಳ್ಳಬೇಕು ಎಂದು ನಿಯೋಗ ಆಗ್ರಹಿಸಿದೆ.

ನಿಯೋಗದಲ್ಲಿ ಬಿಎಸ್‍ಪಿ ರಾಜ್ಯಾಧ್ಯಕ್ಷ ಮಾರಸಂದ್ರ ಮುನಿಯಪ್ಪ, ದಲಿತ ಸಂಘರ್ಷ ಸಮಿತಿ ರಾಜ್ಯಾಧ್ಯಕ್ಷ ಡಾ.ಎನ್.ಮೂರ್ತಿ, ಮಾದಿಗ ಮೀಸಲಾತಿ ಹೋರಾಟ ಸಮಿತಿಯ ಕಾರ್ಯಾಧ್ಯಕ್ಷ ಕೇಶವಮೂರ್ತಿ, ವಿಶ್ವ ಆದಿ ಜಾಂಬವ ಮಹಾಸಭಾದ ಅಧ್ಯಕ್ಷ ಡಾ.ಭೀಮರಾಜ್ ಮತ್ತಿತರರು ಹಾಜರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X