Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಸಫಾರಿಗಳಲ್ಲಿ ಇನ್ನುಮುಂದೆ ತೆರೆದ...

ಸಫಾರಿಗಳಲ್ಲಿ ಇನ್ನುಮುಂದೆ ತೆರೆದ ವಾಹನಕ್ಕೆ ಅವಕಾಶವಿಲ್ಲ: ಸಚಿವ ಈಶ್ವರ ಖಂಡ್ರೆ

ವಾರ್ತಾಭಾರತಿವಾರ್ತಾಭಾರತಿ20 May 2026 3:44 PM IST
share
ಸಫಾರಿಗಳಲ್ಲಿ ಇನ್ನುಮುಂದೆ ತೆರೆದ ವಾಹನಕ್ಕೆ ಅವಕಾಶವಿಲ್ಲ: ಸಚಿವ ಈಶ್ವರ ಖಂಡ್ರೆ
ಸಫಾರಿ ಕ್ಯಾಂಪರ್ ಗಳಿಗೆ ಕಬ್ಬಿಣದ ಸರಳು, ಒಡೆಯದ ಗಾಜು ಅಳವಡಿಸಲು ಅರಣ್ಯ ಸಚಿವರ ಸೂಚನೆ

ಬೆಂಗಳೂರು, ಮೇ 20: ರಾಜ್ಯದ ಐದು ಹುಲಿ ಸಂರಕ್ಷಿತ ಪ್ರದೇಶ ಹಾಗೂ ವನ್ಯಜೀವಿಧಾಮಗಳ ಸಫಾರಿಯಲ್ಲಿ ತೆರೆದ ಕ್ಯಾಂಪರ್ ಬದಲಿಗೆ ಸುರಕ್ಷಿತ ಬಸ್ ಬಳಕೆ ಮಾಡುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ. ಖಂಡ್ರೆ ಸೂಚನೆ ನೀಡಿದ್ದಾರೆ.

ದುಬಾರೆ ಆನೆ ಶಿಬಿರದಲ್ಲಿ ಎರಡು ಸಾಕಾನೆಗಳ ಕಾಳಗದ ವೇಳೆ ಪ್ರವಾಸಿ ಮಹಿಳೆ ಮೃತಪಟ್ಟ ಆಘಾತಕಾರಿ ಘಟನೆ ಹಿನ್ನೆಲೆಯಲ್ಲಿ ಸಫಾರಿಗಳಲ್ಲಿ ಪ್ರವಾಸಿಗರ ಸುರಕ್ಷತೆಗೂ ಹೆಚ್ಚಿನ ಗಮನ ಹರಿಸುವಂತೆ ಅರಣ್ಯ ಸಚಿವರು ಮುಖ್ಯ ವನ್ಯಜೀವಿ ಪರಿಪಾಲಕರಿಗೆ ಸ್ಪಷ್ಟ ನಿರ್ದೇಶನ ನೀಡಿದ್ದಾರೆ.

ಬಂಡೀಪುರ, ನಾಗರಹೊಳೆ, ಕಾಳಿ, ಬಿಳಿಗಿರಿರಂಗನಬೆಟ್ಟ ಮತ್ತು ಭದ್ರಾ ಹುಲಿ ಸಂರಕ್ಷಿತ ಪ್ರದೇಶ ಹಾಗೂ ಮಲೆ ಮಹದೇಶ್ವರ ಬೆಟ್ಟ, ದಾಂಡೇಲಿ, ಕೆ.ಗುಡಿ ಸೇರಿದಂತೆ ರಾಜ್ಯದ ವಿವಿಧ ವನ್ಯಜೀವಿಧಾಮ ಮತ್ತು ಕಾನನಗಳಲ್ಲಿ ಸಫಾರಿ ನಡೆಯುತ್ತಿದ್ದು, ರಾಜ್ಯದ ಮೂಲೆಮೂಲೆಗಳಿಂದ ಅಷ್ಟೇ ಅಲ್ಲದೆ ದೇಶ ವಿದೇಶಗಳಿಂದಲೂ ಪ್ರವಾಸಿಗರು, ವನ್ಯಜೀವಿ ಪ್ರಿಯರು ಇಲ್ಲಿಗೆ ಆಗಮಿಸುತ್ತಾರೆ. ಅದೃಷ್ಟವಶಾತ್ ಈವರೆಗೆ ಸಫಾರಿ ಪ್ರದೇಶಗಳಲ್ಲಿ ಆನೆಗಳು, ಹುಲಿಗಳು ಸೇರಿದಂತೆ ಯಾವುದೇ ವನ್ಯಮೃಗಗಳು ಸಫಾರಿ ವಾಹನಗಳ ಮೇಲೆ ದಾಳಿ ಮಾಡಿ ಜೀವಹಾನಿ ಮಾಡಿದ ಘಟನೆಗಳು ಸಂಭವಿಸಿರುವುದಿಲ್ಲ. ಆದಾಗ್ಯೂ ಅನಾಹುತ ಸಂಭವಿಸುವ ಮೊದಲೇ ಎಚ್ಚೆತ್ತುಕೊಳ್ಳುವ ಅಗತ್ಯವಿದೆ ಎಂದು ಸೂಚನೆಯಲ್ಲಿ ತಿಳಿಸಿದ್ದಾರೆ.

*ಸಫಾರಿ, ಆನೆ ಶಿಬಿರದ ಸನಿಹದಲ್ಲಿ ಆಂಬುಲೆನ್ಸ್ ಖಾತ್ರಿಗೂ ಸೂಚನೆ

ಸಫಾರಿಗೆ ಬರುವ ಪ್ರವಾಸಿಗರ ಸುರಕ್ಷತೆಯ ದೃಷ್ಟಿಯಿಂದ ಇನ್ನು ಮುಂದೆ ತೆರೆದ ಕ್ಯಾಂಪರ್ ವಾಹನಗಳ ಬದಲಿಗೆ ಸಂಪೂರ್ಣ ಸುರಕ್ಷಿತವಾದ ಬಸ್ ಸಫಾರಿಗೆ ಹೆಚ್ಚಿನ ಆದ್ಯತೆ ನೀಡುವಂತೆ ಮತ್ತು ಹಾಲಿ ಬಳಕೆಯಲ್ಲಿರುವ ಕ್ಯಾಂಪರ್ ಗಳಿಗೆ ಕಬ್ಬಿಣದ ಸರಳುಗಳಿಂದ ಕೂಡಿದ ಜಾಲರಿಗಳನ್ನು ಅಥವಾ ಒಡೆಯಲಾಗದ ಗಾಜು ಅಳವಡಿಸಿ ಬಳಸುವ ಬಗ್ಗೆ ಕ್ರಮ ವಹಿಸಲು, ಯಾವುದೇ ಪ್ರವಾಸಿಗರು ಅರಣ್ಯದೊಳಗೆ ಇಳಿಯಲು ಅವಕಾಶ ನೀಡದಂತೆ ಮತ್ತು ಪ್ರತಿ ಸಫಾರಿ ವಾಹನದಲ್ಲಿ ಪ್ರಥಮ ಚಿಕಿತ್ಸೆಯ ಕಿಟ್ ಹಾಗೂ ಸಫಾರಿ ಕೇಂದ್ರಗಳಿಗೆ ಸಮೀಪದಲ್ಲಿ ಆಂಬುಲನ್ಸ್ ವಾಹನ ಇರುವುದನ್ನು ಖಾತ್ರಿಪಡಿಸಿಕೊಳ್ಳುವಂತೆಯೂ ಸೂಚಿಸಿದ್ದಾರೆ.

Tags

Eshwar Khandre
share
ವಾರ್ತಾಭಾರತಿ
ವಾರ್ತಾಭಾರತಿ
Next Story
X